ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ದಕ್ಷಿಣ ವಿಭಾಗದ ಉಪ ವಿಭಾಗಾಧಿಕಾರಿ ಅಪೂರ್ವ ಬಿದರಿ ವಿರುದ್ಧ ಅರೆನ್ಯಾಯಿಕ ಪ್ರಕರಣಗಳಲ್ಲಿ ದೋಷಪೂರಿತ ಆದೇಶ ಹೊರಡಿಸಿದ ಆರೋಪ ಮೇಲೆ ಎಫ್ಐಆರ್ ದಾಖಲಿಸಲು ಬೆಂಗಳೂರು ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಶ್ವಾಸ್ ಆದೇಶಿಸಿದ್ದಾರೆ.
ಮೇಲ್ಮನವಿ ಪ್ರಕರಣಗಳನ್ನು ವಿಲೇವಾರಿ ಮಾಡುವಲ್ಲಿ ಲೋಪವೆಸಗಿದ್ದು, ರೆವಿನ್ಯೂ ಕಮಿಷನರ್ ಪರಿಶೀಲನೆಯಲ್ಲಿ 53 ಏಕಪಕ್ಷೀಯ ಅಕ್ರಮ ಆದೇಶ ಬೆಳಕಿಗೆ ಬಂದಿದೆ.
ಜಿಲ್ಲಾಡಳಿತ ದೂರುಗಳು ಬಂದ ಹಿನ್ನೆಲೆ ಎಸಿ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಇತ್ತೀಚೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಕಚೇರಿಗೆ ಭೇಟಿ ಕೊಟ್ಟಾಗ ಅಪೂರ್ವ ಬಿದರಿ ಬಂದಿರಲಿಲ್ಲ.


