Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ಹೋರಾಟ ಮಾಡುತ್ತಿದ್ದವರ ವಿರುದ್ಧ ಎಫ್ಐಆರ್ ದಾಖಲು

Advertisement
ಚಂದ್ರವಳ್ಳಿ ನ್ಯೂಸ್, ತುಮಕೂರು:
ಮಾಗಡಿಗೆ ಹೇಮಾವತಿ ನೀರು ಹರಿಸುವುದನ್ನ ವಿರೋಧಿಸಿ, ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ಬೆಂಗಳೂರು ಶಿವಮೊಗ್ಗ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದ ಹೋರಾಟಗಾರರ ಮೇಲೆ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ.


ಪ್ರತಿಭಟನಾಕಾರರ ಮೇಲೆ ಸರ್ಕಾರ ಎಫ್ಐಆರ್ ದಾಖಲಿಸುವ ಮೂಲಕ ಬ್ರಹ್ಮಾಸ್ತ್ರ ಪ್ರಯೋಗಿಸಿ ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ತುಮಕೂರು ಜಿಲ್ಲೆ ಗುಬ್ಬಿ ಪೊಲೀಸ್ ಠಾಣೆಯಲ್ಲಿ
11 ಮಂದಿಯ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ. ಪೊಲೀಸರ ಮೇಲೆ ಹಲ್ಲೆ, ಸಾರ್ವಜನಿಕರಿಗೆ ತೊಂದರೆ, ಸರ್ಕಾರಿ ವಾಹನಗಳಿಗೆ ಹಾನಿ, ರಾಷ್ಟ್ರೀಯ ಹೆದ್ದಾರಿ ಬ್ಲಾಕ್ ಮಾಡಿದ ಆರೋಪದಡಿ ಪ್ರಕರಣ ದಾಖಲು ಮಾಡಲಾಗಿದೆ.

ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಸುರೇಶ್ ಗೌಡ, ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್, ತುರುವೇಕೆರೆ ಶಾಸಕ ಎಂ.ಟಿ ಕೃಷ್ಣಪ್ಪ ವಿರುದ್ಧ ಕೇಸ್ ದಾಖಲಿಸಲಾಗಿದೆ. ಹಾಗೆಯೇ, ಬಿಜೆಪಿ ಮುಖಂಡರಾದ ದಿಲೀಪ್ ಕುಮಾರ್, ಹೆಬ್ಬಾಕ ರವಿ ಹಾಗೂ ಇಬ್ಬರು ಸ್ವಾಮೀಜಿಗಳ ವಿರುದ್ಧವೂ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಆದರೆ, ಸ್ವಾಮೀಜಿಗಳ ಹೆಸರು ಉಲ್ಲೇಖಿಸಿಲ್ಲ. ನೂರಾರು ಜನರ ವಿರುದ್ಧ ಒಟ್ಟು 11 ಎಫ್​ಐಆರ್ ದಾಖಲಿಸಿದ್ದು, ಇದರಲ್ಲಿ 10 ಸ್ವಯಂ ಪ್ರೇರಿತ ಪ್ರಕರಣಗಳಾಗಿವೆ.

ಒಂದು ಕೇಸ್ ಮಾತ್ರ ಕಂಟ್ರ್ಯಾಕ್ಟರ್ ನೀಡಿದ ದೂರಿನ ಮೇಲೆ ದಾಖಲಾಗಿದ್ದು, ಇನ್ನೂ ಮೂರರಿಂದ ನಾಲ್ಕು ಕೇಸ್ ದಾಖಲಾಗುವ ಸಾಧ್ಯತೆ ಇದೆ. ಏನೇ ಎಫ್​ಐಆರ್ ದಾಖಲಿಸಿದರೂ ನಮ್ಮ ಹೋರಾಟ ನಿಲ್ಲಲ್ಲ ಎಂದು ಬಿಜೆಪಿ ಮುಖಂಡರು ಗುಡುಗಿದ್ದಾರೆ.

ಗುಬ್ಬಿ ಕಾಂಗ್ರೆಸ್ ಶಾಸಕ ಶ್ರೀನಿವಾಸ್, ಈ ಯೋಜನೆಗೆ ನನ್ನ ವಿರೋಧವೂ ಇದೆ. ಜನರ ಅಭಿಪ್ರಾಯ ಏನಿದೆಯೋ ಅದೇ ನನ್ನ ಅಭಿಪ್ರಾಯ ಎಂದಿದ್ದಾರೆ. ಕುಣಿಗಲ್ ಕಾಂಗ್ರೆಸ್ ಶಾಸಕ ಕೂಡಾ ಮಾಗಡಿಗೆ ನೀರು ಹೋಗಲ್ಲ. ಕುಣಿಗಲ್‌ಗೆ ಮಾತ್ರ ಎಂದು ತಿಳಿಸಿದ್ದಾರೆ.

ತೊಂದರೆ ಕೊಡಬೇಡಿ:
ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಕೋಟಿ ನಮಸ್ಕಾರ ಎನ್ನುತ್ತಲೇ ಸೋಮಣ್ಣ ಅವರು ಡಿಕೆಶಿ ಅವರು ಯಾಕ್ ಗಂಟು ಬಿದ್ದಿದ್ದಾರೋ ಗೊತ್ತಿಲ್ಲ. ತುಮಕೂರು ಜನರಿಗೆ ತೊಂದರೆ ಕೊಡಬೇಡಿ ಎಂದು ಮನವಿ ಮಾಡುತ್ತಲೇ ವಿ. ಸೋಮಣ್ಣ ಕುಟುಕಿದ್ದಾರೆ.


ತಿಪ್ಪಗೊಂಡನಹಳ್ಳಿ, ಮಂಚನ ಬೆಲೆಯಿಂದ ಹೊಸ ಲೈನ್ ಹಾಕುವ ಮೂಲಕ ಕನಕಪುರಕ್ಕೂ ನೀರು ಬಿಟ್ಟುಕೊಳ್ಳಲಿ. ದೊಡ್ಡ ಬೋರ್ಡ್ ಹಾಕಿಸಿಕೊಳ್ಳಲಿ ಎಂದು ಸೋಮಣ್ಣ ಸಲಹೆ ನೀಡಿದ್ದು, ನೀನೇ ಮಹಾರಾಜ, ನೀನೇ ಉಪಮುಖ್ಯಮಂತ್ರಿ ಎಂದು ವ್ಯಂಗ್ಯವಾಡಿದ್ದಾರೆ.

ರಾಜಕೀಯ ಜಟಾಪಟಿಗೆ ಕಾರಣವಾಗಿರುವ ಹೇಮಾವತಿ ಜಲ ಹೋರಾಟ ಬೂದಿ ಮುಚ್ಚಿದ ಕೆಂಡದಂತಿದೆ. ದೂರು ದಾಖಲಾಗಿರೋದು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಹೊಸ ಯುದ್ಧಕ್ಕೆ ನಾಂದಿ ಹಾಡುವ ಸಾಧ್ಯತೆ ನಿಚ್ಚಳವಾಗಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ