ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆದ ತಾಲ್ಲೂಕು ಮಟ್ಟದ ಹದಿನೇಳು ವರ್ಷದೊಳಗಿನ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಜಿಲ್ಲಾ ಮದಕರಿನಾಯಕ ವಿದ್ಯಾಸಂಸ್ಥೆಯ ಅಡಿಯಲ್ಲಿ ಬರುವ ಎ.ಭೀಮಪ್ಪನಾಯಕ ಸಂಯುಕ್ತ ಪ್ರೌಢಶಾಲೆಯ ಬಾಲಕಿಯರು ಪ್ರಥಮ ಸ್ಥಾನ ಹಾಗೂ ಹಾಕಿ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಸಂಸ್ಥೆಗೆ ಕೀರ್ತಿ ತಂದಿರುವ ಎ.ಭೀಮಪ್ಪನಾಯಕ ಸಂಯುಕ್ತ ಪ್ರೌಢಶಾಲೆಯ ಬಾಲಕಿಯರಿಗೆ

ಜಿಲ್ಲಾ ಮದಕರಿನಾಯಕ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಎಸ್.ಸಂದೀಪ್, ಆಡಳಿತಾಧಿಕಾರಿ ಸಾಗರ್ ಎಸ್, ಭೀಮಪ್ಪ ನಾಯಕ ಸಂಯುಕ್ತ ಪ್ರೌಢಶಾಲೆಯ ದೈಹಿಕ ಶಿಕ್ಷಕ ಹಾಲೇಶ್, ಮುಖ್ಯ ಶಿಕ್ಷಕರು ಶಿಕ್ಷಕರುಗಳು ಹಾಗೂ ಸಂಸ್ಥೆಯ ಎಲ್ಲಾ ಶಾಲಾ-ಕಾಲೇಜು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.




