Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಗ್ನಿ ಅವಘಡ ಐದು ಮಂದಿ ಸಾವು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಾವನ್ನಪ್ಪಿರುವ ದುರ್ಘಟನೆ ಬೆಂಗಳೂರಿನ ಕೆ.ಆರ್ ಮಾರ್ಕೆಟ್ ಬಳಿಯ ನಗರ್ತಪೇಟೆಯಲ್ಲಿ ನಡೆದಿದೆ.


ಅಗ್ನಿ ದುರಂತದಲ್ಲಿ ಒಂದೇ ಕುಟುಂಬಕ್ಕೆ ಸೇರಿದ ಮದನ್ (38), ಪತ್ನಿ ಸಂಗೀತಾ(33) ಮಿತೇಶ್(8), ವಿಹಾನ್ (5) ಸಜೀವ ದಹನವಾಗಿದ್ದಾರೆ. ಮತ್ತೊಂದು ಮಹಡಿಯಲ್ಲಿ ಸುರೇಶ್‌ ಎಂಬವರೂ ಸುಟ್ಟು ಕರಕಲಾಗಿದ್ದಾರೆ. ಘಟನಾ ಸ್ಥಳಕ್ಕೆ ನಗರ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ,

ರಾತ್ರಿ 2.30ರ ಸುಮಾರಿಗೆ ಅಗ್ನಿ ಅವಗಢ ಸಂಭವಿಸಿದ ಮಾಹಿತಿ ಬಂತು. ಅಗ್ನಿಶಾಮಕ ದಳದವರು ಮತ್ತು ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಗ್ರೌಂಡ್ ಫ್ಲೋರ್ ನಲ್ಲಿರುವ ಗೋಡೌನ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಅದು ಮೇಲಿನ ಫ್ಲೋರ್ ಗಳಿಗೆ ಆವರಿಸಿದೆ. ಬೆಂಕಿ ಹೊತ್ತಿಕೊಂಡ ಕೂಡಲೇ ಕಟ್ಟಡದಲ್ಲಿದ್ದ ಬಹುತೇಕ ಜನ ಓಡಿ ಹೋಗಿದ್ದಾರೆ.

ಆದರೆ ಒಂದು ಫ್ಯಾಮಿಲಿ ಮಾತ್ರ ಬೆಂಕಿ ಕೆನ್ನಾಲಿಗೆಗೆ ಸಿಲುಕಿಕೊಂಡಿದೆ. ಎರಡು ಮೃತದೇಹಗಳನ್ನ ಈಗಾಗಲೇ ಹೊರ ತೆಗೆಯಲಾಗಿದೆ. ಮೇಲಿನ ಫ್ಲೋರ್ ನಲ್ಲಿ ಕಂಪ್ಲೀಟ್ ಬೆಂಕಿ, ಹೊಗೆ ಆವರಿಸಿದೆ ಒಳಗಡೆ ಹೋಗೋದಕ್ಕೆ ಆಗುತ್ತಿಲ್ಲ, ಹೀಗಾಗಿ ಒಳಗಡೆ ಸಿಲುಕಿದವರನ್ನ ಹುಡುಕಲು ಆಗುತ್ತಿಲ್ಲ.

ಕಾರ್ಯಾಚರಣೆ ಮುಂದುವರಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ, ವಿಧಿವಿಜ್ಞಾನ ಪ್ರಯೋಗಾಲಯ ಅಧಿಕಾರಿಗಳು ಹಾಗೂ ರಕ್ಷಣಾ ತಂಡದವರು ಕಾರ್ಯಾಚರಣೆ ಮಾಡುತ್ತಿದ್ದಾರೆ. ಇನ್ನು ಮೃತದೇಹಗಳು ಇರುವ ಶಂಕೆ ಇದ್ದು ಪರಿಶೀಲನೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.



 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ