Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಐದು ಗ್ಯಾರಂಟಿಗಳು ಗಮನ ಸೆಳೆದಿವೆ-ರಾಜ್ಯಪಾಲ ಗೆಹ್ಲೋಟ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಸರ್ಕಾರವು ಸಂವಿಧಾನದ ಆಶಯಗಳಿಗೆ ಅನುಗುಣವಾಗಿ, ಒಕ್ಕೂಟ ಸಿದ್ಧಾಂತಗಳ ರೀತಿ ರಿವಾಜುಗಳಿಗೆ ಬದ್ಧವಾಗಿ ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಸಂವಿಧಾನದ ಮಹತ್ವದ ಆಶಯವಾದ ಸಾಮಾಜಿಕ, ಆರ್ಥಿಕ ನ್ಯಾಯ ನೆಲೆಗೊಳಿಸಲು ಶಕ್ತಿ ಮೀರಿ ರಾಜ್ಯ ಸರ್ಕಾರ ಶ್ರಮಿಸುತ್ತಿದೆ. ಐದು ಗ್ಯಾರಂಟಿ ಕಲ್ಯಾಣ ಯೋಜನೆಗಳು ಯಶಸ್ವಿಯಾಗಿ ಜಾರಿಗೊಂಡು ದೇಶದ ಗಮನ ಸೆಳೆದಿವೆ ಎಂದು ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಲೋಟ್ ಹೇಳಿದರು.
76
ನೇ ಗಣರಾಜ್ಯೋತ್ಸವ ಅಂಗವಾಗಿ ಫೀಲ್ಡ್ ಮಾರ್ಷಲ್ ಮಾಣಿಕ್ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.
76
ವರ್ಷಗಳ ಹಿಂದೆ ಇದೇ ದಿನದಂದು ಭಾರತೀಯರಾದ ನಾವು ನಮಗೆ ನಾವೇ ಅರ್ಪಿಸಿಕೊಂಡ ಸಂವಿಧಾನದ ಮೂಲಕ ಈ ದೇಶದಲ್ಲಿ ಸಾಮ್ರಾಜ್ಯಶಾಹಿ, ವಸಾಹತುಶಾಹಿ ಆಡಳಿತಕ್ಕೆ ಇತಿಶ್ರೀ ಹಾಡಿ ಜನಾಡಳಿತದ ಹೊಸ ಪರ್ವ ಪ್ರಾರಂಭಿಸಿದೆವು. ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ನೇತೃತ್ವದಲ್ಲಿ ಸಂವಿಧಾನ ರಚಿಸಿದ ಎಲ್ಲ ಮಹನೀಯರನ್ನು ಸ್ಮರಿಸೋಣ ಎಂದರು.

ವಿವಿಧ ಗ್ಯಾರೆಂಟಿ ಆರ್ಥಿಕ ನೆರವು : ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ.ಗಳಂತೆ 2023 ರ ಆಗಸ್ಟ್‍ನಿಂದ ಇಲ್ಲಿಯವರೆಗೆ ಒಟ್ಟು 35,180.20 ಕೋಟಿ ರೂ. ಆರ್ಥಿಕ ನೆರವು ನೀಡಲಾಗಿದೆ.
ಗೃಹಜ್ಯೋತಿ ಯೋಜನೆಯಡಿ 1.62 ಗ್ರಾಹಕರು ಪ್ರಯೋಜನ ಪಡೆಯುತ್ತಿದ್ದು ವಿದ್ಯುತ್ ಸರಬರಾಜು ಕಂಪನಿಗಳಿಗೆ 13,409 ಕೋಟಿ ರೂ.ಸಬ್ಸಿಡಿ ಮೊತ್ತ ನೀಡಲಾಗಿದೆ.

ಶಕ್ತಿ ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ 9,051 ಕೋಟಿ ರೂ. ವಿನಿಯೋಗಿಸಲಾಗಿದೆ.
ಯುವನಿಧಿ ಯೋಜನೆಯಡಿ 2,18,214 ಜನ ನೋಂದಣಿ ಮಾಡಿಕೊಂಡಿದ್ದು ಈವರೆಗೆ 1,24,176 ಅರ್ಹರಿಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ. ಯುವನಿಧಿ ಪ್ಲಸ್ ಉಪಕ್ರಮದಡಿ ಯುವಜನರ ಉದ್ಯೋಗ ಸಾಮಥ್ರ್ಯ ಹೆಚ್ಚಿಸಲು ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು ಎಂದರು.

ಜನರ ಹಸಿವನ್ನು ನೀಗಿಸುವ ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿಯಲ್ಲಿನ ಪ್ರತಿ ಫಲಾನುಭವಿಗೆ 5 ಕೆಜಿ ಅಕ್ಕಿ ಜೊತೆಗೆ ಹೆಚ್ಚುವರಿ 5 ಕೆಜಿ ಅಕ್ಕಿಗೆ ಬದಲಾಗಿ ಪ್ರತಿ ಸದಸ್ಯರಿಗೆ 170 ರೂ.ಗಳಂತೆ 4,48,12,382 ಫಲಾನುಭವಿಗಳಿಗೆ 9,775 ಕೋಟಿ ರೂ.ಗಳನ್ನು ವರ್ಗಾವಣೆ ಮಾಡಲಾಗಿದೆ ಎಂದರು.

ರಾಜ್ಯದ ಹಣಕಾಸು ವ್ಯವಸ್ಥೆ ಉತ್ತಮವಾಗಿ ನಿರ್ವಹಿಸಿರುವ ಆದಾಯ ಸಂಗ್ರಹದಲ್ಲಿ ಶೇ.13 ರಷ್ಟು ಪ್ರಗತಿ ಸಾಧಿಸಿದೆ. ರಾಜ್ಯಗಳು ಸಂಗ್ರಹಿಸುವ ಜಿಎಸ್‍ಟಿ ಆದಾಯದಲ್ಲಿ ಕರ್ನಾಟಕವು ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. ಪ್ರಾಥಮಿಕ ಹಾಗೂ ಉನ್ನತ ಶಿಕ್ಷಣ ಬಲಪಡಿಸಲು ಹೊಸ ಶಿಕ್ಷಣ ನೀತಿ ಜಾರಿಗೊಳಿಸಲಾಗುತ್ತಿದೆ. ಕಳೆದ ಒಂದೂವರೆ ವರ್ಷದ ಅವಧಿಯಲ್ಲಿ 13 ಸಾವಿರಕ್ಕೂ ಅಧಿಕ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಆರೋಗ್ಯ ವ್ಯವಸ್ಥೆ ಸುಧಾರಣೆಗೆ ಹಾಸನದಲ್ಲಿ 142 ಕೋಟಿ ರೂ.ವೆಚ್ಚದಲ್ಲಿ 450 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆ, ಕಲಬುರ್ಗಿಯಲ್ಲಿ 54 ಕೋಟಿ ರೂ. ವೆಚ್ಚದಲ್ಲಿ ಟ್ರಾಮಾ ಕೇರ್ ಆಸ್ಪತ್ರೆ, ಕೆಕೆಆರ್‍ಡಿಬಿಯ 304 ಕೋಟಿ ರೂ.ವೆಚ್ಚದಲ್ಲಿ ಜಯದೇವ ಹೃದ್ರೋಗ ಹಾಗೂ ಸಂಶೋಧನಾ ಸಂಸ್ಥೆ ನಿರ್ಮಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಮೂಲಗಳ ಗುಣಮಟ್ಟ ಕಾಪಾಡಿಕೊಳ್ಳಲು ರಾಜ್ಯದಲ್ಲಿ 79 ಪ್ರಯೋಗಾಲಗಳನ್ನು ಸ್ಥಾಪಿಸಲಾಗಿದೆ ಎಂದು ವಿವರಿಸಿದರು.

ರಾಜ್ಯದ ಸಮತೋಲಿತ, ಸಮಗ್ರ ಅಭಿವೃದ್ಧಿಗಾಗಿ ಡಾ.ಡಿ.ಎಂ.ನಂಜುಂಡಪ್ಪ ವರದಿ ಅನುಷ್ಠಾನ ಮಾಡಲಾಗಿದೆ. ಉದ್ದೇಶಿತ ಗುರಿಗಳ ಸಾಧನೆ ಮಾಡಲಾಗಿದೆಯೆ ಎಂಬುದನ್ನು ಅರಿಯಲು ಪ್ರೊ.ಗೋವಿಂದರಾವ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಸಂವಿಧಾನದ 371(ಜೆ) ಅನುಚ್ಛೇದ ಜಾರಿಗೊಳಿಸಲಾಗಿದೆ.

ಬೆಂಗಳೂರು ಮೆಟ್ರೊ ರೈಲು ಯೋಜನೆಯ ಹಂತ 2ದಲ್ಲಿ ಸೆಂಟ್ರಲ್ ಸಿಲ್ಕ್ ಬೋರ್ಡಿನಿಂದ ಕೃಷ್ಣರಾಜಪುರದವರೆಗೆ, ‘ಹಂತ 2 ಬಿಯಡಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ ಒಟ್ಟು 58 ಕಿ.ಮೀ.ಉದ್ದದ ಕಾಮಗಾರಿಯನ್ನು 14,788 ರೂ.ವೆಚ್ಚದಲ್ಲಿ ಕೈಗೊಳ್ಳಲಾಗಿದೆ. ಹಂತ 3” ರಲ್ಲಿ 76 ಕಿ.ಮೀ.ಉದ್ದದ ಕಾಮಗಾರಿಯನ್ನು 15,611 ಕೋಟಿ ರೂ.ವೆಚ್ಚದಲ್ಲಿ ಕೈಗೊಳ್ಳಲಾಗಿದೆ.

ರೈತರ ಆದಾಯ ಹೆಚ್ಚಿಸಲು ಕಾರ್ಬನ್ ಹೀರಿಕೊಳ್ಳುವ ತೋಟಗಾರಿಕೆ ಬೆಳೆಗಳನ್ನು ಗುರುತಿಸುವ ಕಾರ್ಬನ್ ಕ್ರೆಡಿಟ್ ಫ್ರೇಮ್‍ವರ್ಕ್ (ಸಿಸಿಎಫ್) ಹೊಸ ಕಾರ್ಯಕ್ರಮ ಪರಿಚಯಿಸಲಾಗಿದೆ. 2024-25 ನೇ ಸಾಲಿನಲ್ಲಿ ಸುಮಾರು ರೂ. 16,700 ಕೋಟಿಗೂ ಅಧಿಕ ಮೊತ್ತದ ಅಲ್ಪಾವಧಿ ಬೆಳೆ ಹಾಗೂ ಮಧ್ಯಮ ಮತ್ತು ದೀರ್ಘಾವಧಿ ಕೃಷಿ ಸಾಲಗಳನ್ನು ವಿತರಿಸಲಾಗಿದೆ. ಹಾಲು ಉತ್ಪಾದಕರ ಪ್ರೋತ್ಸಾಹ ಯೋಜನೆಯಡಿ ರಾಜ್ಯದ ಸುಮಾರು 9 ಲಕ್ಷ ಹಾಲು ಉತ್ಪಾದಕರಿಗೆ 1124 ಕೋಟಿ ರೂ. ಪ್ರೋತ್ಸಾಹ ಧನ ವರ್ಗಾವಣೆ ಮಾಡಲಾಗಿದೆ ಎಂದರು.
ಮಕ್ಕಳಲ್ಲಿ ಪೌಷ್ಠಿಕತೆ ಹೆಚ್ಚಿಸಲು ಒತ್ತು:
ಮಕ್ಕಳಲ್ಲಿ ಪೌಷ್ಠಿಕತೆ ಹೆಚ್ಚಿಸಲು ಅಜೀಂ ಪ್ರೇಮ್ ಜಿ ಫೌಂಡೇಷನ್ ಸಹಯೋಗದೊಂದಿಗೆ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ವಾರದಲ್ಲಿ ಆರು ದಿನಗಳ ಕಾಲ ಮೊಟ್ಟೆ ವಿತರಣೆ ಮಾಡಲಾಗುತ್ತಿದೆ.

ದೇಶದಲ್ಲಿಯೇ ಮೊದಲ ಬಾರಿಗೆ ಕೆಎಸ್‍ಆರ್‍ಟಿಸಿ ನೌಕರರಿಗೆ 1 ಕೋಟಿ ರೂ.ಮೌಲ್ಯದ ಅಪಘಾತ ವಿಮಾ ಯೋಜನೆ ಸೌಲಭ್ಯ ಒದಗಿಸಲಾಗಿದೆ ರಾಜ್ಯದ ಅಭಿವೃದ್ಧಿಯ ಅಂಶಗಳ ಮೇಲೆ ವಿಸ್ತೃತವಾಗಿ ಬೆಳಕು ಚೆಲ್ಲಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.

ಸಾಂಸ್ಕೃತಿಕ ಕಾರ್ಯಕ್ರಮಗಳು:
ಬೆಂಗಳೂರಿನ ಅಗರದ ಕರ್ನಾಟಕ ಪಬ್ಲಿಕ್ ಶಾಲೆಯ ಸುಮಾರು 800 ಮಕ್ಕಳು ಪ್ರದರ್ಶಿಸಿದ ನಾವೆಲ್ಲರೂ ಒಂದೇ ನಾವು ಭಾರತೀಯರು, 4/8 ಗೋರ್ಖಾ ರೈಫಲ್ಸ್‍ನ ಖುಕ್ರಿ ನೃತ್ಯ, ಪಂಜಾಬ್ ಪರಂಪರೆ ಬಿಂಬಿಸುವ ಭಾಂಗ್ರ ನೃತ್ಯ, ಹೇರೋಹಳ್ಳಿ ಸಂಯುಕ್ತ ಪ.ಪೂ.ಕಾಲೇಜಿನ 650 ಮಕ್ಕಳಿಂದ ಅರಿವೇ ಅಂಬೇಡ್ಕರ್ ನೃತ್ಯರೂಪಕ, ಮೈಸೂರು ಕೆಎಸ್‍ಆರ್‍ಪಿ ಮೌಂಟೆಡ್ ಪೆÇಲೀಸ್ ತಂಡದ ಟೆಂಟ್ ಪೆಗ್ಗಿಂಗ್, ಪೊಲೀಸ್ ಗರುಡ ಪಡೆಯಿಂದ ಭಯೋತ್ಪಾದಕರಿಂದ ಹೈಜಾಕ್ ಆದ ಬಸ್ ಪ್ರಯಾಣಿಕರ ರಕ್ಷಣೆ ಸೇರಿದಂತೆ ದೇಶದ ಐಕ್ಯತೆ, ಸಮಗ್ರತೆ, ಸಾರ್ವಭೌಮತ್ವ ಅಂಶಗಳನ್ನು ಸಾರಿದವು. ವಿವಿಧ ತುಕಡಿಗಳು ನಡೆಸಿದ ಆಕರ್ಷಕ ಪಥಸಂಚಲನ ಗಮನ ಸೆಳೆಯಿತು.

ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ನಡೆದ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಬೆಂಗಳೂರಿನ ಅಗರದ ಕರ್ನಾಟಕ ಪಬ್ಲಿಕ್ ಶಾಲೆಯ ಸುಮಾರು 800 ಮಕ್ಕಳು ಪ್ರದರ್ಶಿಸಿದ ನಾವೆಲ್ಲರೂ ಒಂದೇ ನಾವು ಭಾರತೀಯರುತಂಡಕ್ಕೆ ಪ್ರಥಮ ಬಹುಮಾನ, ಬಿಬಿಎಂಪಿ ಹೇರೋಹಳ್ಳಿ ಸಂಯುಕ್ತ ಪ.ಪೂ.ಕಾಲೇಜಿನ 650 ಮಕ್ಕಳಿಂದ ಅರಿವೇ ಅಂಬೇಡ್ಕರ್ ನೃತ್ಯರೂಪಕಕ್ಕೆ ದ್ವಿತೀಯ ಬಹುಮಾನ ದೊರೆತಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಕಟಣಾ ಶಾಖೆಯ ಜಂಟಿ ನಿರ್ದೇಶಕರಾದ ಪಲ್ಲವಿ ಹೊನ್ನಾಪುರ ಅವರು ಸಾಂಸ್ಕøತಿಕ ಕಾರ್ಯಕ್ರಮಗಳ ತೀರ್ಪುಗಾರರಾಗಿ ಭಾಗವಹಿಸಿದ್ದರು.

2025
ನೇ ಗಣರಾಜ್ಯೋತ್ಸವ ದಿನಾಚರಣೆ ಕವಾಯತಿನಲ್ಲಿ ಭಾಗವಹಿಸಿದ ಗ್ರೂಪ್ -1 ಆರ್ಮಿ ತಂಡಕ್ಕೆ ಪ್ರಥಮ ಬಹುಮಾನ, ಬಿಎಸ್‍ಎಫ್ ತಂಡಕ್ಕೆ ದ್ವಿತೀಯ ಬಹುಮಾನ, ಏರ್‍ಪೋರ್ಸ್ ತಂಡಕ್ಕೆ ತೃತೀಯ ಬಹುಮಾನ ಹಾಗೂ ಕೆಎಸ್‍ಆರ್‍ಪಿ ತಂಡಕ್ಕೆ ನಾಲ್ಕನೇ ಬಹುಮಾನ ದೊರೆತಿದೆ.

ಗ್ರೂಪ್-2 ರಲ್ಲಿ ಅಗ್ನಿಶಾಮಕ ದಳ ತಂಡಕ್ಕೆ ಪ್ರಥಮ ಬಹುಮಾನ, ನ್ಯಾಷನಲ್ ಕೆಡಿಟ್ ಕ್ರಾಫ್ಸ್ (ಎನ್‍ಸಿಸಿ) ದ್ವಿತೀಯ ಬಹುಮಾನ, ಅಬಕಾರಿ ದಳಕ್ಕೆ ತೃತೀಯ ಬಹುಮಾನ, ನ್ಯಾಷನಲ್ ಸರ್ವೀಸ್ ಸ್ಕೀಂ (ಎನ್‍ಎಸ್‍ಎಸ್) ನಾಲ್ಕನೇ ಬಹುಮಾನ ದೊರೆತಿದೆ.
ಗ್ರೂಪ್ -3 ನಲ್ಲಿ ರಾಷ್ಟ್ರೀಯ ಮಿಲಿಟರಿ ಸ್ಕೂಲ್ ಪ್ರಥಮ ಬಹುಮಾನ, ಮಿತ್ರ ಅಕಾಡೆಮಿ ದ್ವಿತೀಯ ಬಹುಮಾನ ಪಡೆದಿದೆ.
ಗ್ರೂಪ್ -4 ರಲ್ಲಿ ಬಾಪು ಹೈಸ್ಕೂಲ್ ಪ್ರಥಮ ಬಹುಮಾನ, ಲಿಟಲ್ ಫ್ಲವರ್ ಪಬ್ಲಿಕ್ ಸ್ಕೂಲ್ ದ್ವಿತೀಯ ಬಹುಮಾನ ಪಡೆದಿದೆ.
ಗ್ರೂಪ್-6 ರಲ್ಲಿ ಧಾರವಾಡದ ಎನ್.ಎ.ಮುತ್ತಣ್ಣ ಮೆಮೋರಿಯಲ್ ಸ್ಕೂಲ್ ಪ್ರಥಮ ಬಹುಮಾನ, ನಂದಿನಿ ಲೇಔಟ್‍ನ ಪ್ರೆÀ್ರಸಿಡೆನ್ಸಿ ಶಾಲೆ ದ್ವಿತೀಯ ಬಹುಮಾನ ಪಡೆದಿದೆ.
ಗ್ರೂಪ್ -7 ಬ್ಯಾಂಡ್ ತಂಡಗಳಲ್ಲಿ ನಾರಾಯಣಪುರದ ಕ್ರಿಸ್ತೂ ಜಯಂತಿ ಸ್ಕೂಲ್ ಪ್ರಥಮ ಬಹುಮಾನ, ಕೋರಮಂಗಲ ಪೊಲೀಸ್ ಪಬ್ಲಿಕ್ ಶಾಲೆ ದ್ವಿತೀಯ ಬಹುಮಾನ ಪಡೆದಿದೆ.

 



Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು