Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯೋತ್ಸವ ವೇಳೆ ಎಂಇಎಸ್ ಪುಂಡಾಟ, ಐದು ಮಂದಿಗೆ ಚಾಕು ಇರಿತ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆಯೇ ದುಷ್ಕರ್ಮಿಗಳು ಐದು ಮಂದಿಗೆ ಚಾಕು ಇರಿದು ಅಟ್ಟಹಾಸ ಮೆರೆದಿರುವ ಘಟನೆ ಖಂಡನೀಯ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.

ಭುವನೇಶ್ವರಿ ಮೂರ್ತಿ ಮೆರವಣಿಯಲ್ಲಿ ಯುವಕರು ನೃತ್ಯ ಮಾಡುತ್ತಿದ್ದ ವೇಳೆ ಏಕಾಏಕಿ ನುಗ್ಗಿದ ದುಷ್ಕರ್ಮಿಗಳು ಮನಸ್ಸೋ ಇಚ್ಛೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಈ ದುರ್ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಇದಕ್ಕೆ ಪೊಲೀಸ್ ಇಲಾಖೆಯ ವೈಫಲ್ಯವೇ ಕಾರಣ.

ಕನ್ನಡ ರಾಜ್ಯೋತ್ಸವದ ಶುಭದಿನದಂದೇ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ್ ಪುಂಡರು ಕರಾಳ ದಿನಾಚರಣೆ ಮೆರವಣಿಗೆಗೆ ಕಾಂಗ್ರೆಸ್ ಸರ್ಕಾರ ಅವಕಾಶ ನೀಡಿದ್ದು, ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಕಾರ್ಯಕರ್ತರು ಕರಾಳ ದಿನ ಆಚರಿಸಿದ್ದಾರೆ. ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿ ನಾಡದ್ರೋಹಿಗಳ ಜೊತೆ ಸೆಲ್ಫಿ ತೆಗೆದುಕೊಂಡಿದ್ದು ದುಷ್ಕತ್ಯಕ್ಕೆ  ಪ್ರೇರಣೆ ನೀಡಿದಂತಿದೆ ಎಂದು ಕುಮಾರಸ್ವಾಮಿ ಅವರು ಟೀಕಿಸಿದ್ದಾರೆ.

ಬೆಳಗಾವಿಯಲ್ಲಿ ಸಂಭವಿಸಿರುವ ಈ ದುರ್ಘಟನೆಗಳಿಗೆ  ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ.  ಎಂಇಎಸ್ ಪುಂಡಾಟವನ್ನು ಮಟ್ಟಹಾಕಬೇಕು.‌ನಾಡದ್ರೋಹಿಗಳ ಬಲಿ ಹಾಕಬೇಕು ಎಂದು ವಿರೋಧ ಪಕ್ಷದಲ್ಲಿದ್ದಾಗ

ವೀರಾವೇಶದ ಮಾತುಗಳನ್ನು ಆಡುತ್ತಿದ್ದ  ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಈಗ  ಹೇಡಿಯಂತೆ ಮೌನಕ್ಕೆ ಶರಣಾಗಿದ್ದಾರೆ.

ಕನ್ನಡದ್ರೋಹಿ, ನಾಡದ್ರೋಹಿಗಳ‌ನ್ನು ಮಟ್ಟಹಾಕದೇ, ಅವರು ನಮ್ಮವರೇ ಎಂದು ಸಿಎಂ, ಡಿಸಿಎಂ ಮೃದು ಧೋರಣೆ ತೋರುತ್ತಿರುವುದು, ಕನ್ನಡಿಗರ ಸ್ವಾಭಿಮಾನವನ್ನು ಕೆಣಕುವಂತೆ ಮಾಡಿದೆ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ