Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭದ್ರಾ ಮೇಲ್ದಂಡೆಗೆ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಭದ್ರಾ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ ರುಪಾಯಿ ಅನುದಾನ ಕಾಯ್ದಿರಿಸುವಂತೆ ನೀರಾವರಿ  ಅನುಷ್ಠಾನ ಹೋರಾಟ ಸಮಿತಿ ರಾಜ್ಯ ಸರ್ಕಾರದ ಮುಂದೆ ಹಕ್ಕೊತ್ತಾಯ ಮಂಡಿಸಿದೆ.
ಇಲ್ಲಿನ ಪತ್ರಕರ್ತರ ಭವನದಲ್ಲಿ  ಸೋಮವಾರ ನಡೆದ ಸಮಿತಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕರುಗಳಾದ ಟಿ.ರಘುಮೂರ್ತಿ, ವೀರೇಂದ್ರ ಪಪ್ಪಿ ಅವರಿಗೆ ಸಂಬಂಧ ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯದ ಪತ್ರ ಹಸ್ತಾಂತರಿಸಿ  ಬಜೆಟ್ ನಲ್ಲಿ ಹಣ ಮೀಸಲಿಡುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ತರುವಂತೆ ಕೋರಲಾಯಿತು.

ಭದ್ರಾ ಮೇಲ್ದಂಡೆ ಕಾಮಗಾರಿ ಅನುದಾನ ಕೊರತೆ ಕಾರಣಕ್ಕೆಆಮೆಗತಿಯಲ್ಲಿ ಸಾಗಿದೆ. ನಮ್ಮನಾಳುವ  ಸರ್ಕಾರಗಳ ಇಚ್ಚಾಶಕ್ತಿ ಕೊರತೆ ಕಾರಣಕ್ಕೆ ಸಾಧ್ಯವಾಗದೇ ಹೋಗಿದೆ. 2018 ದರಪಟ್ಟಿ ಅನುಸಾರ ಭದ್ರಾ ಮೇಲ್ದಂಡೆ ಕಾಮಗಾರಿಯ 21 ಸಾವಿರ ಕೋಟಿ ರೂ ವೆಚ್ಚಕ್ಕೆ ನಿಗದಿಪಡಿಸಲಾಗಿತ್ತು. ಇದೀಗ ದರಪಟ್ಟಿ ಪರಿಷ್ಕರಣೆ ಹಂತದಲ್ಲಿದ್ದು ಪರಿಷ್ಕೃತವಾದಲ್ಲಿ ಯೋಜನಾ ವೆಚ್ಚಕ್ಕೆ ಮತ್ತೆ  ಸಾವಿರಾರು ಕೋಟಿ ರೂ ಸೇರ್ಪಡೆಯಾಗುತ್ತದೆ. ಸಾಲದೆಂಬಂತೆ ಅರ್ಧಕ್ಕೆ ನಿಂತ ಕಾಮಗಾರಿಗಳು ದೀರ್ಘಕಾಲದವರೆಗೆ ಗುಣಮಟ್ಟ ಕಾಯ್ದುಕೊಳ್ಳುತ್ತವೆ ಎಂಬ ಗ್ಯಾರಂಟಿಗಳು ಇಲ್ಲವಾಗಿದೆ. ಬಿಸಿಲಿಗೆ ಬಾಯ್ದೆರೆದಿರುವ ಕಾಲುವೆಗಳಲ್ಲಿ ನೀರು ತುಂಬದಿದ್ದರೆ ಹಾಳಾಗುವ ಸಾಧ್ಯತೆಗಳೇ ಹೆಚ್ಚು ಎಂದು ಹಕ್ಕೊತ್ತಾಯ ಪತ್ರದಲ್ಲಿ ತಿಳಿಸಲಾಗಿದೆ.

    ಭದ್ರಾ ಮೇಲ್ದಂಡೆಗೆ ಕೇಂದ್ರ ಸರ್ಕಾರ 5300 ಕೋಟಿ ರೂ ನೀಡುವುದಾಗಿ 2022-23 ಬಜೆಟ್ ನಲ್ಲಿ ಘೋಷಿಸಿತ್ತು. ಕೇಂದ್ರದ ಅನುದಾನ ನಿರೀಕ್ಷೆಯಲ್ಲಿ ರಾಜ್ಯ ಸರ್ಕಾರ ತನ್ನ ಜವಾಬ್ದಾರಿ ಮರೆಯಬಾರದು. ತನ್ನ ಪಾಲಿನ ಬದ್ದತೆ ಮೆರೆಯಲೇ ಬೇಕಾಗಿದೆ. ಕೇಂದ್ರ ಸರ್ಕಾರ ಅನುದಾನ ಕೊಡುತ್ತದೆ ಎಂಬ ಕಾರಣಕ್ಕೆ ಭದ್ರಾ ಮೇಲ್ದಂಡೆ ಯೋಜನೆ ಜಾರಿಗೆ ತಂದಿದ್ದಲ್ಲ.

  ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಈಗಾಗಲೇ ಜಲಶಕ್ತಿ ರಾಜ್ಯ ಸಚಿವ ಹಾಗೂ ಭದ್ರಾ ಮೇಲ್ದಂಡೆ ಯೋಜನಾ ವ್ಯಾಪ್ತಿ ಜಿಲ್ಲೆ ಪ್ರತಿನಿಧಿಸುವ ವಿ.ಸೋಮಣ್ಣ ಅವರಿಗೂ ಮನವಿ ಮಾಡಿದೆ. ಕಳೆದ ಗಾಂಧಿ ಜಯಂತಿಯಂದು ಚಿತ್ರದುರ್ಗಕ್ಕೆ ಆಗಮಿಸಿದ್ದ ಸಚಿವ ವಿ.ಸೋಮಣ್ಣ 45 ದಿನದ  ಒಳಗಾಗಿ ಮೊದಲೇ ಕಂತು ಬಿಡುಗಡೆ ಮಾಡಿಸುವುದಾಗಿ ಹೇಳಿ ಹೋದವರು ಮತ್ತೆ ಹಿಂತಿರುಗಿ ನೋಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆ ಪದೇ ಪದೆ ವಂಚನೆ, ದ್ರೋಹಕ್ಕೆ ಒಳಗಾಗುತ್ತಿದೆ. ರಾಜ್ಯ ಸರ್ಕಾರ ಕೂಡಾ ಇದೇ ಹಾದಿ ಹಿಡಿಯಬಾರದೆಂಬುದು ಸಮಿತಿ ಎಚ್ಚರಿಸಿದೆ.

  ಮಾರ್ಚ್ ತಿಂಗಳಲ್ಲಿ ಮಂಡನೆಯಾಗುವ ರಾಜ್ಯ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆಗೆ ಕನಿಷ್ಟ ಐದು ಸಾವಿರ ಕೋಟಿ ರುಪಾಯಿ ಅನುದಾನ ಕಾಯ್ದಿರಿಸುವ ಮೂಲಕ ಕಾಮಗಾರಿಗೆ ಚುರುಕಿನ ವೇಗ ನೀಡಬೇಕು. ಜಿಲ್ಲೆಯ ಎಲ್ಲ ಶಾಸಕರು ಸಿಎಂ ಮುಂದೆ ಹಠ ಹಿಡಿದು ಕುಳಿತು ಐದು ಸಾವಿರ ಕೋಟಿ ರೂ ಅನುದಾನ ಘೋಷಣೆ ಮಾಡಿಸುವುದರ ಮೂಲಕ  ನೆಲದ ಋಣ ತೀರಿಸಬೇಕೆಂದು ಹಕ್ಕೊತ್ತಾಯ ಪತ್ರದಲ್ಲಿ ತಿಳಿಸಲಾಗಿದೆ.

ಹಕ್ಕೊತ್ತಾಯ ಪತ್ರ ಸ್ವೀಕರಿಸಿ ಮಾತನಾಡಿದ ಸಚಿವ ಡಿ.ಸುಧಾಕರ್ಜಿಲ್ಲೆಯ ಎಲ್ಲ ಶಾಸಕರು ಈಗಾಗಲೇ ಸಿಎಂ, ಡಿಸಿಎಂ ಭೇಟಿ ಮಾಡಿ ಬಾಕಿ ಬಿಲ್ ಹೊರತು ಪಡಿಸಿ ಮೂರು ಸಾವಿರ ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಬೇಕೆಂದು ಕೋರಿದ್ದೇವೆ. ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನೀರಾವರಿ ಅನುಷ್ಟಾನ ಹೋರಾಟ ಸಮಿತಿಯವರು ಅನುದಾನ ಬಿಡುಗಡೆಗೆ ಸಂಸದರ ಮೇಲೆ ಒತ್ತಡ ಹಾಕುವಂತೆ ಸಲಹೆ ಮಾಡಿದರು.

 ಭದ್ರಾ ಮೇಲ್ದಂಡೆ ಕಾಮಗಾರಿ ಅನುಷ್ಠಾನ, ಅನುದಾನ ಬಳಕೆಗೆ ಸಂಬಂಧಿಸಿದಂತೆ ಸಮನ್ವಯ ಸಮಿತಿ ಸಭೆಯನ್ನು ಚಿತ್ರದುರ್ಗದಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಸಭೆಗೆ ಕೇಂದ್ರ ಸಚಿವ ವಿ.ಸೋಮಣ್ಣ ಅವರನ್ನು ಕರೆದುಕೊಂಡು ಬರುವ ಜವಾಬ್ದಾರಿ ಸಂಸದ ಗೋವಿಂದ ಕಾರಜೋಳ ವಹಿಸಲಿ ಎಂದು ಸಚಿವ ಸುಧಾಕರ್ ಒತ್ತಾಯಿಸಿದರು.
ಶಾಸಕ ಟಿ.ರಘುಮೂರ್ತಿ ಮಾತನಾಡಿ ಭದ್ರಾ ಮೇಲ್ದಂಡೆ ಕಾಮಗಾರಿಯ ಇನ್ನೆರೆಡುವರೆ ವರ್ಷದ ಒಳಗೆ ಪೂರ್ಣಗೊಳಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯ ಸರ್ಕಾರ ಅನುದಾನ ಬಿಡುಗಡೆ ವಿಚಾರದಲ್ಲಿ ತನ್ನ ಬದ್ದತೆ ಪ್ರದರ್ಶಿಸಲಿದೆ. ಅದೇ ರೀತಿ ಕೇಂದ್ರ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳಲಿ ಎಂದರು.

 ಶಾಸಕ ವಿರೇಂದ್ರ ಪಪ್ಪಿ ಮಾತನಾಡಿ, ಭದ್ರಾ ಕಾಮಗಾರಿ ಪೂರ್ಣಗೊಳ್ಳುವ ತನಕ ಜನರ ಹೋರಾಟದ ಪರವಾಗಿ ನಿಲ್ಲುವುದಾಗಿ ಹೇಳಿದರು. ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಬಿ..ಲಿಂಗಾರೆಡ್ಡಿ ಸಚಿವ,  ಶಾಸಕದ್ವಯರಿಗೆ ಹಕ್ಕೊತ್ತಾಯದ ಪತ್ರ ಹಸ್ತಾಂತರಿಸಿದರು. ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಣ್ಣ, ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಆರ್.ದಯಾನಂದ್, ಜೆ.ಯಾದವರೆಡ್ಡಿ, ಸಂಗೇನಹಳ್ಳಿ ಅಶೋಕ್ ಕುಮಾರ್,  ಲಕ್ಷಣರೆಡ್ಡಿ, ಅನಂತರೆಡ್ಡಿ, ಸಿಪಿಐ ಮುಖಂಡ ಸುರೇಶ್ ಬಾಬು, ಬಸವರಾಜಪ್ಪ, ರೈತ ಸಂಘದ ಮುಖಂಡರಾದ ಕೆ.ಪಿ.ಭೂತಯ್ಯ, ಕೆ.ಸಿ.ಹೊರಕೇರಪ್ಪ, ಹಂಪಯ್ಯನಮಾಳಿಗೆ ಧನಂಜಯ, ಬಸ್ತಿಹಳ್ಳಿ ಸುರೇಶ್ ಬಾಬು, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಮಲ್ಲಾಪುರ ತಿಪ್ಪೇಸ್ವಾಮಿ, ಚೇತನ್ ಯಳನಾಡು, ಹುಣಿಸೆಕಟ್ಟೆ ಕಾಂತರಾಜ್, ಸುಧಾ, ಸಂಚಾಲಕ ಚಿಕ್ಕಪ್ಪನಹಳ್ಳಿ ಷಣ್ಮುಖ ಇದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ