Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೋಷಮುಕ್ತ ಮತದಾರರ ಪಟ್ಟಿ ನಿರ್ಮಾಣ ಪ್ರಜಾಪ್ರಭುತ್ವದ ಬಲಿಷ್ಠ ಅಡಿಪಾಯ: ಬಿ.ವೈ. ವಿಜಯೇಂದ್ರ ಕರೆ

Advertisement
Advertisement

​ ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪಾರದರ್ಶಕ ಹಾಗೂ ದೋಷಮುಕ್ತ ಮತದಾರರ ಪಟ್ಟಿಯು ನಮ್ಮ ಪ್ರಜಾಪ್ರಭುತ್ವದ ಪಾವಿತ್ರ್ಯತೆ ಮತ್ತು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕನ್ನು ಎತ್ತಿಹಿಡಿಯುವ ಬಲಿಷ್ಠ ಅಡಿಪಾಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಪಾದಿಸಿದ್ದಾರೆ.

​ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಸಭೆ (ಬಿಎಲ್ಒ-2) ಕಾರ್ಯಕ್ರಮದಲ್ಲಿ ಭಾಗವಹಿಸಿ, ಪಕ್ಷದ ಪ್ರಮುಖರು ಹಾಗೂ ಸಕ್ರಿಯ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.

​ಬೂತ್ ಮಟ್ಟದಲ್ಲಿ ಶ್ರಮಿಸಲು ಬದ್ಧತೆ ಅಗತ್ಯ:
​"
ನಿಮ್ಮ ಮತ, ನಿಮ್ಮ ಹಕ್ಕು" ಎನ್ನುವ ಧ್ಯೇಯದೊಂದಿಗೆ ಅರ್ಹ ಮತದಾರರ ಸೇರ್ಪಡೆ ಹಾಗೂ ದೋಷಮುಕ್ತ ಮತದಾರರ ಪಟ್ಟಿ ನಿರ್ಮಾಣಕ್ಕೆ ಬೂತ್ ಮಟ್ಟದಲ್ಲಿ ನಾವೆಲ್ಲರೂ ಬದ್ಧತೆಯಿಂದ ಶ್ರಮಿಸಬೇಕಿದೆ ಎಂದು ವಿಜಯೇಂದ್ರ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ಪ್ರಜಾಪ್ರಭುತ್ವದ ಈ ಮಹತ್ವದ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಲು ಮುಂಚೂಣಿಯಲ್ಲಿ ನಿಂತು ಶ್ರಮಿಸುತ್ತಿರುವ ಪಕ್ಷದ ಎಲ್ಲಾ ನಿಷ್ಠಾವಂತ ಮತ್ತು ದಕ್ಷ ಕಾರ್ಯಕರ್ತರ ಕಾರ್ಯವೈಖರಿಯನ್ನು ಅವರು ಇದೇ ವೇಳೆ ಶ್ಲಾಘಿಸಿ, ಅಭಿನಂದಿಸಿದರು.

​ಸಭೆಯಲ್ಲಿ ಗಣ್ಯರ ಉಪಸ್ಥಿತಿ:
​ಈ ಪ್ರಮುಖ ಪರಿಷ್ಕರಣೆ ಸಭೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಹಾಗೂ ಶಾಸಕರಾದ ಸಿ.ಕೆ. ರಾಮಮೂರ್ತಿ, ಶಾಸಕ ಎಂ. ಕೃಷ್ಣಪ್ಪ, ನಗರ ಮಂಡಲ ಅಧ್ಯಕ್ಷ ಕೇಶವರಾಜು, ಗ್ರಾಮಾಂತರ ಮಂಡಲ ಅಧ್ಯಕ್ಷ ಹರೀಶ್ ರೆಡ್ಡಿ, ಮಹಿಳಾ ಮಂಡಲ ಅಧ್ಯಕ್ಷರಾದ ಶ್ರೀಮತಿ ಭಾರತಿ ವೆಂಕಟೇಶಗೌಡ ಹಾಗೂ ಎಸ್.ಐ.ಆರ್ ಸಹಪ್ರಭಾರಿ ಕರುಣಾಕರ ಖಾಸಲೆ ಸೇರಿದಂತೆ ಜಿಲ್ಲಾ ಮಟ್ಟದ ಪದಾಧಿಕಾರಿಗಳು, ಪ್ರಮುಖರು ಮತ್ತು ಅಪಾರ ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದರು.​

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.