Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಣಿಬಾಧಿತ ಪ್ರದೇಶ ಜನರ ಕೇಂದ್ರೀಕರಿಸಿ ಪರಿಹಾರ ಕ್ರಮ ಕೈಗೊಳ್ಳಿ

Advertisement
ಗಣಿಬಾಧಿತ ಪ್ರದೇಶ ಜನರ ಕೇಂದ್ರೀಕರಿಸಿ ಪರಿಹಾರ ಕ್ರಮ ಕೈಗೊಳ್ಳಿ

ಚಿತ್ರದರ‍್ಗ:ಜಿ ಲ್ಲೆಯ ಗಣಿಬಾಧಿತ ಪ್ರದೇಶಗಳ ವ್ಯಾಪ್ತಿಯ ಜನರನ್ನು ಕೇಂದ್ರೀಕರಿಸಿ, ಪರಿಹಾರ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸಬೇಕು ಎಂದು ರ‍್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ವ್ಯವಸ್ಥಾಪಕ ನರ‍್ದೇಶಕ ಡಾ.ಸಂಜಯ್ ಎಸ್ ಬಿಜ್ಜೂರ್ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ರ‍್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ (ಗಣಿಗಾರಿಕೆಯ ಪ್ರಭಾವಕ್ಕೆ ಒಳಗಾದ ವಲಯಗಳಿಗೆ ಸಮಗ್ರ ಪರಿಸರ ಯೋಜನೆ) ಸಿಇಪಿಎಂಐಝಡ್ ಯೋಜನೆ ಅಡಿಯಲ್ಲಿ ಕೈಗೊಳ್ಳಲಿರುವ ಕಾಮಗಾರಿ, ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗಣಿಬಾಧಿತ ಪ್ರದೇಶಗಳ ತಾಲ್ಲೂಕುಗಳ ವಿವಿಧ ಗ್ರಾಮಗಳ ಜನರಿಗಾಗಿ ಕೆಎಂಇಆರ್‍ಸಿ ಅಡಿಯಲ್ಲಿ ವಿವಿಧ ಕರ‍್ಯಕ್ರಮ ಹಾಗೂ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ಗಣಿಗಾರಿಕೆ ಪ್ರಭಾವಕ್ಕೆ ಒಳಗಾದ ಗಣಿಬಾಧಿತ ಪ್ರದೇಶಗಳನ್ನು ಗುರುತಿಸಿ, ಅಂತಹ ಪ್ರದೇಶಗಳ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳ ಮೂಲಕ ಪರಿಹಾರ ಕರ‍್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.
ಗಣಿಬಾಧಿತ ಪ್ರದೇಶಗಳ ವ್ಯಾಪ್ತಿಯ ಜನರ ಜೀವನೋಪಾಯಕ್ಕಾಗಿ ಯಾವ ರೀತಿಯ ಸುಧಾರಣೆಯ ಕರ‍್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂಬುದನ್ನು ಗಮನದಲ್ಲಿಟ್ಟುಕೊಂಡು ಪ್ರಸ್ತಾವನೆ ಸಲ್ಲಿಸಬೇಕು. ಪ್ರಸ್ತಾವನೆ ಅನುಮೋದನೆ ನಂತರ ವಿಸ್ತೃತ ಯೋಜನಾ ವರದಿ ತಯಾರಿಸಬೇಕು. ಯಾವುದೇ ಪ್ರಸ್ತಾವನೆ ಸಲ್ಲಿಸುವ ಮುಂಚಿತವಾಗಿ ತಾವುಗಳ ಕೈಗೊಂಡಿರುವ ಕಾಮಗಾರಿಗಳು ಯಾವ ಕಾರಣಕ್ಕಾಗಿ ಅವಶ್ಯಕತೆ ಇದೆ? ಕಾಮಗಾರಿಗಳು, ಯೋಜನೆಗಳು ಗಣಿಬಾಧಿತ ಪ್ರದೇಶಗಳ ಜನರಿಗೆ ಯಾವ ರೀತಿಯ ಲಾಭವಾಗಲಿದೆ ಎಂಬ ಇತ್ಯಾದಿ ಅಂಶಗಳ ಮಾಹಿತಿ ಒಳಗೊಂಡಿರಬೇಕು ಎಂದು ಸೂಚನೆ ನೀಡಿದರು.

ರ‍್ಕಾರದ ವತಿಯಿಂದ ರೆಗ್ಯುಲರ್ ಬಜೆಟ್‍ನಲ್ಲಿ ಕೈಗೊಳ್ಳುವ ಕಾಮಗಾರಿಗಳಿಗೂ ಹಾಗೂ ಕೆಎಂಇಆರ್‍ಸಿ ಅಡಿಯಲ್ಲಿ ತೆಗೆದುಕೊಳ್ಳುವ ಕಾಮಗಾರಿಗಳಿಗೂ ವ್ಯತ್ಯಾಸ ಇದೆ. ರೆಗ್ಯುಲರ್ ಬಜೆಟ್‍ನಲ್ಲಿ ಪ್ರಸಕ್ತ ರ‍್ಷಕ್ಕೆ ಅನುಗುಣವಾಗಿ ನಮ್ಮ ಯೋಜನೆ ತಯಾರಿ ಮಾಡಿಕೊಂಡು ಅನುಷ್ಠಾನ ಮಾಡುತ್ತೇವೆ. ಆದರೆ ಕೆಎಂಇಆರ್‍ಸಿ ಒಂದು ಯೋಜನೆಯಾಗಿದ್ದು, ಹಲವು ರ‍್ಷಗಳಿಗೆ ಒಂದೇ ಯೋಜನೆ ರೂಪಿಸಲಾಗುವುದು ಎಂದರು.

ರ‍್ಹ ಫಲಾನುಭವಿಗಳಿಗೆ ಯೋಜನೆ ತಲುಪಿಸಿ:
************** ಗಣಿಗಾರಿಕೆಯ ಪ್ರಭಾವಕ್ಕೆ ಒಳಗಾದ ವಲಯಗಳಿಗೆ ಸಮಗ್ರ ಪರಿಸರ ಯೋಜನೆಯಡಿ ನಿಯಮಾನುಸಾರ ಗಣಿಬಾಧಿತ ಪ್ರದೇಶಗಳ ರ‍್ಹರನ್ನು ಗುರುತಿಸಿ ನಿವೇಶನ, ವಸತಿ ಸೇರಿದಂತೆ ಇತ್ಯಾದಿ ಮೂಲಸೌರ‍್ಯಗಳನ್ನು ಕಲ್ಪಿಸಬೇಕು. ಯಾವುದೇ ಕಾರಣಕ್ಕೂ ಈ ಯೋಜನೆಗೆ ರ‍್ಹರಲ್ಲದ ಫಲಾನುಭವಿಗಳನ್ನು ಆಯ್ಕೆ ಮಾಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕೆಎಂಇಆರ್‍ಸಿ ಅಡಿಯಲ್ಲಿ ಅನುಮೋದನೆಗೊಂಡಿರುವ ಕಾಮಗಾರಿಗಳಿಗೆ ಶೀಘ್ರವಾಗಿ ಟೆಂಡರ್ ಕರೆದು, ಕಾಮಗಾರಿಗಳನ್ನು ಪ್ರಾರಂಭಿಸಬೇಕು. ಕೈಗೊಂಡಿರುವ ಕಾಮಗಾರಿಗಳಿಗೆ ಸಂಬಂಧಪಟ್ಟಂತೆ ದಾಖಲೆಗಳ ನರ‍್ವಹಣೆಯನ್ನು ಸರ‍್ಪಕವಾಗಿ ನರ‍್ವಹಿಸಬೇಕು ಎಂದು ತಿಳಿಸಿದರು.
ಇದೇ ಸಂರ‍್ಭದಲ್ಲಿ ಶಾಲಾ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಕೃಷಿ ಇಲಾಖೆ, ಪಶುಸಂಗೋಪನೆ, ರೇಷ್ಮೆ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಿಂದುಳಿದ ರ‍್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕರ‍್ಯನರ‍್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಮುಖ್ಯ ಯೋಜನಾಧಿಕಾರಿ ಗಾಯತ್ರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಜಣ್ಣ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನರ‍್ದೇಶಕ ಡಾ.ಮಹೇಶ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ