Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾನಪದ ಹಾಡುಗಾರ್ತಿ- ಕಲಾವಿದೆ ವಡ್ಡಗೆರೆ ಕದರಮ್ಮಗೆ ಪ್ರಶಸ್ತಿಯ ಗರಿ!

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಾನಪದ ಹಾಡುಗಾರ್ತಿ- ಕಲಾವಿದೆ ವಡ್ಡಗೆರೆ ಕದರಮ್ಮ ಅವರಿಗೆ 2023-24 ನೇ ವರ್ಷದ ಕರ್ನಾಟಕ ಜಾನಪದ ಅಕಾಡೆಮಿ ಗೌರವ ಪ್ರಶಸ್ತಿಯ ಗರಿ!'

1) ಜಾನಪದ ಲೋಕೋತ್ಸವ ಪ್ರಶಸ್ತಿ -2015,
2) ಜಾನಪದ ತಜ್ಞ - ನಾಡೋಜ ಎಚ್.ಎಲ್.ನಾಗೇಗೌಡ ಜನ್ಮ ಶತಮಾನೋತ್ಸವ ಜಾನಪದ ಲೋಕ ಪ್ರಶಸ್ತಿ-2018,.
3) ಅಂತರರಾಷ್ಟ್ರೀಯ ಮಹಿಳಾ ಪ್ರಶಸ್ತಿ-2015 (ತುಮಕೂರು ವಿವಿ),
4) ವೀಚಿ ಸಾಹಿತ್ಯ ಪ್ರಶಸ್ತಿ -2017,
5) ಬೆಂಗಳೂರು ಸೃಷ್ಟಿಕಲಾ ಮಂದಿರದ ಸೃಷ್ಟಿ ಕಲಾ ಗೌರವ ಪುರಸ್ಕಾರ- 2018, 

6) ಭೀಮಪುತ್ರಿ ಬ್ರಿಗೇಡ್ 'ಅಕ್ಷರದವ್ವ ಸಾವಿತ್ರಿಬಾ ಫುಲೆ ಪ್ರಶಸ್ತಿ -2021,
7) ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ತಾಯಮ್ಮ ಎಸ್.ಸಿ.ಮಲ್ಲಯ್ಯ ಜಾನಪದ ದತ್ತಿ ಪ್ರಶಸ್ತಿ -2023
8) ತುಮಕೂರು ಜಿಲ್ಲಾ 2024 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ಇನ್ನೂ ಹಲವಾರು ಪ್ರಶಸ್ತಿ- ಗೌರವಗಳನ್ನು ಪಡೆದಿರುವ ಜಾನಪದ ಹಾಡುಗಾರ್ತಿ- ಕಲಾವಿದೆ ವಡ್ಡಗೆರೆ ಕದರಮ್ಮ ಅವರ ಸಾಧನೆಯನ್ನು ಕುರಿತು ರಾಜ್ಯ ಮಟ್ಟದ ಪತ್ರಿಕೆಯು, 'ಅಂತರರಾಷ್ಟ್ರೀಯ ಗ್ರಾಮೀಣ ಮಹಿಳಾ ದಿನ'ದ ಪ್ರಯುಕ್ತ 15-10-2018 ರ 'ಸಾಧಕಿಯರಿಗೆ ಸಲಾಂ' ಎಂಬ ವಿಶೇಷ  ವ್ಯಕ್ತಿಚಿತ್ರ ಲೇಖನ ಪ್ರಕಟಿಸಿತ್ತು.

ಉದ್ಯಮಶೀಲ ಮಹಿಳೆಯರ ಅಂತರ್ಜಾಲ ಮಾಸಿಕ 'ಸುನೀತಾ' ವಡ್ಡಗೆರೆ ಕದರಮ್ಮ ಅವರನ್ನು ಕುರಿತು ವಿಶೇಷ ಸಂದರ್ಶನ ಲೇಖನ ಪ್ರಕಟಿಸಿದೆ. ಲೇಖಕಿ- ಕವಯಿತ್ರಿ ಮಂಜುಳಾ ಭಾರ್ಗವಿ "ಉದ್ದೀಪನ ಕಿಡಿಗಳು" ಎಂಬ ಕೃತಿಯಲ್ಲಿ ವಡ್ಡಗೆರೆ ಕದರಮ್ಮನವರ ಬದುಕು ಮತ್ತು ಸಾಧನೆಯನ್ನು ಕುರಿತು 'ಅಮ್ಮನೆಂಬ ಅಕ್ಷರದ ದೀವಳಿಗೆ...' ಎಂಬ ಲೇಖನವನ್ನು ಮತ್ತು ರಂಗಾಭರಣ ಕಲಾ ಕೇಂದ್ರದ ರಂಗಾಭರಣ ಮಾಸ ಪತ್ರಿಕೆಯಲ್ಲಿ "ಜಾನಪದ ಮಹಾ ಕಾವ್ಯಗಳ ಹಾಡುಗಾರ್ತಿ ವಡ್ಡಗೆರೆ ಕದರಮ್ಮ" ಎಂಬ ಲೇಖನ ಬರೆದು ಪ್ರಕಟಿಸಿದ್ದಾರೆ.

ಅಕ್ಷರ ಕಲಿಯದೆಯೂ ಕರ್ನಾಟಕದ ಎರಡು ವಿಶ್ವವಿದ್ಯಾಲಯಗಳ ಸ್ನಾತಕೋತ್ತರ ಪದವಿ (ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯ ಮತ್ತು ತುಮಕೂರು ವಿಶ್ವವಿದ್ಯಾಲಯ) ವಿದ್ಯಾರ್ಥಿಗಳಿಗೆ ವಡ್ಡಗೆರೆ ಕದರಮ್ಮ ಹಾಡಿರುವ "ವಡ್ಡಗೆರೆ ನಾಗಮ್ಮ; ಮಹಾಸತಿ ಕಾವ್ಯ" ಪಠ್ಯ ಪುಸ್ತಕವಾಗಿರುತ್ತದೆ.

ಮಾನವ ಕುಲಶಾಸ್ತ್ರೀಯ ಅಧ್ಯಯನಕಾರರು, ಜನಾಂಗೀಯ ಅಧ್ಯಯನಕಾರರು, ಸಮುದಾಯ ಅಧ್ಯಯನಕಾರರು, ಸಾಮಾಜಿಕ ಕಾರ್ಯಕರ್ತರು ಮುಂತಾದವರು ವಡ್ಡಗೆರೆ ಕದರಮ್ಮ ಮತ್ತು ಅವರ ಗೆಳತಿಯರಿಂದ ಜಾನಪದ ಕಾವ್ಯ, ಪದ-ಪುರಾಣಗಳನ್ನು ಹಾಡಿಸುವುದು ಹಾಗೂ ಮಾಹಿತಿಗಳನ್ನು ಸಂಗ್ರಹಿಸಿಕೊಳ್ಳುವುದು ಸಾಮಾನ್ಯ ಸಂಗತಿಯಾಗಿದೆ.

ಇಂತಹ ಜಾನಪದ ಹಾಡುಗಾರ್ತಿ - ಕಲಾವಿದೆ ವಡ್ಡಗೆರೆ ಕದರಮ್ಮ ಅವರಿಗೆ, ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಶ್ರೀ ಆದಿಚುಂಚನಗಿರಿ ಮಹಾಕ್ಷೇತ್ರದಲ್ಲಿ ದಿನಾಂಕ : 23-09-2018ರ ಭಾನುವಾರ ಬೆಳಗ್ಗೆ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಜಾನಪದ ಕಲಾಮೇಳದಲ್ಲಿ, ಕರ್ನಾಟಕ ಜಾನಪದ ಪರಿಷತ್ತಿನ ಸಂಸ್ಥಾಪಕರಾದ ಜಾನಪದ ತಜ್ಞ - ನಾಡೋಜ ಡಾ.ಎಚ್.ಎಲ್.ನಾಗೇಗೌಡ ಪ್ರಶಸ್ತಿ ಮತ್ತು 10.000 ರೂಪಾಯಿ ನಗದು ಪುರಸ್ಕಾರ ನೀಡಿ ಗೌರವಿಸಿದೆ.

ವಡ್ಡಗೆರೆ ಕದರಮ್ಮ ತನ್ನ ಸಹಹಾಡುಗಾರ್ತಿ ಕಲಾವಿದೆಯರೊಂದಿಗೆ, ‘ಮಹಾಸತಿ ವಡ್ಡಗೆರೆ ನಾಗಮ್ಮನ ಕಾವ್ಯ'ವನ್ನು ಹರಕೆ ಹೊತ್ತ ಉಪಾಸಕರ ಮನೆಗಳಿಗೆ ಹೋಗಿ ಹಾಡಿಬರುವ ಕಾಯಕವನ್ನು ಕಳೆದ ಐವತ್ತು ವರ್ಷಗಳಿಂದ ಮುಂದುವರಿಸಿಕೊಂಡು ಬಂದಿದ್ದಾರೆ.

ತುಮಕೂರು ಜಿಲ್ಲೆಯ  ಕವಿ-ಗಾಯಕರ ಪೈಕಿ ವಡ್ಡಗೆರೆ ಕದರಮ್ಮನವರಿಗೆ ಪ್ರಧಾನ ಸ್ಥಾನವಿದೆ. ಜಾನಪದ ಕುರಿತ ಇವರ ಅರಿವು ಮತ್ತು ಅಮೂಲ್ಯ ಮಾಹಿತಿಗಳನ್ನು ನಾಡಿನ ಅನೇಕ ಸಂಶೋಧಕರು ತಮ್ಮ ಗ್ರಂಥಗಳಲ್ಲಿ ಬಳಸಿಕೊಂಡಿದ್ದಾರೆ. ಅನೇಕ ಸಂಶೋಧಕರು ಪಿಎಚ್.ಡಿ ಪದವಿಗಳನ್ನೂ ಪಡೆದುಕೊಂಡಿದ್ದಾರೆ.

ಅಂತಹ ಕೆಲವು ಗ್ರಂಥಗಳಲ್ಲಿ ವಡ್ಡಗೆರೆ ಗ್ರಾಮದ ನಿವೃತ್ತ ಐ.ಎ.ಎಸ್. ಅಧಿಕಾರಿ ವಿ.ಡಿ.ವೀರಕ್ಯಾತಯ್ಯ ಬರೆದಿರುವ ಕುಂಚಿಟಿಗರ ಜನಾಂಗ - ಇತಿಹಾಸ ಹಾಗೂ ಸಂಪ್ರದಾಯಗಳು (1994), ಎಂ.ವೀರಕ್ಯಾತಯ್ಯ ಬರೆದಿರುವ ವಿಜಯೀ ವೀರಕೇತುರಾಯ (ನಾಟಕ 1999), ಎಂ.ಹೆಚ್. ನಾಗರಾಜು ಅವರ ಸಂಶೋಧನಾ ಕೃತಿ ಕುಂಚಿಟಿಗರ ಸಾಂಸ್ಕೃತಿಕ ಇತಿಹಾಸ (2003), ಡಾ.ರಾಜಣ್ಣ ಹುಣಿಸೇಪಾಳ್ಯ ಅವರ ಮಹಾಸತಿ ಶಿವಶರಣೆ ವೀರನಾಗಮ್ಮದೇವಿ (1996), ಡಾ.ಓ.ನಾಗರಾಜು ಅವರ ಪಿಎಚ್.ಡಿ ಸಂಶೋಧನಾ ಪ್ರಬಂಧ "ತುಮಕೂರು ಜಿಲ್ಲೆಯ ಗ್ರಾಮದೇವತೆಗಳು: ಒಂದು ಅಧ್ಯಯನ" (2007) ಹಾಗೂ ವಡ್ಡಗೆರೆ ನಾಗರಾಜಯ್ಯ ಸಂಪಾದಿಸಿರುವ "ವಡ್ಡಗೆರೆ ನಾಗಮ್ಮ: ಮಹಾಸತಿ ಕಾವ್ಯ" (2010) ಡಾ.ಡಿ.ಎನ್.ರಘುರಾಮ್ ಬರೆದಿರುವ "ವಡ್ಡಗೆರೆ ಶ್ರೀ ವೀರನಾಗಮ್ಮನ ಚರಿತ್ರೆ" ಇನ್ನೂ ಮುಂತಾದ ಕೃತಿಗಳು ಪ್ರಮುಖವಾಗಿವೆ.

ವಡ್ಡಗೆರೆ ಕದರಮ್ಮ ಅವರು ರಿಯಲ್ ಚಾಲೆಂಜರ್ಸ್ ಟೀಮ್ಗಾಗಿ ಈಶ್ವರ್ ಗುಬ್ಬಿ ನಿರ್ದೇಶಿಸಿ, ಶ್ರೀ ರಾಘವ್ ನಿರ್ಮಿಸಿರುವ ‘‘ಮುಗ್ಧ’’ ಸಾಕ್ಷ್ಯ ಚಿತ್ರದಲ್ಲಿ ಮುಗ್ದ ಯುವಕನೊಬ್ಬನ ತಾಯಿಯ ಪಾತ್ರದಲ್ಲಿಯೂ ಅಭಿನಯಿಸಿದ್ದಾರೆ. ಪ್ರಸ್ತುತ ಜಾನಪದ ಗಾಯಕಿಯರಾದ ವಡ್ಡಗೆರೆ ಕದರಮ್ಮ(80) ಹಾಗೂ ವಡ್ಡಗೆರೆ ಮುದ್ದನಾಗಮ್ಮ(75) ವಡ್ಡಗೆರೆ ನಾಗಮ್ಮನ ಕಥಾಕಾವ್ಯವನ್ನು ಮೂಲ ಧಾಟಿಯಲ್ಲಿ ನಿರೂಪಿಸುವ ಅಸಲಿ ಹಾಡುಗಾರ್ತಿಯರಾಗಿದ್ದಾರೆ.

ವಡ್ಡಗೆರೆ ನಾಗಮ್ಮನ ಪದಗಳು, ಗಂಗೆ-ಗೌರಿ ಕಾವ್ಯ, ಬಿಲ್ಲಾಳರಾಯ- ಗೊಲ್ಲಾಳರಾಯನ ಪದ, ಬೆಟ್ಟದ ಮದ್ದೆಮ್ಮನ ಪದ, ಗುಣಸಾಗರಿ ಕಾವ್ಯ, ಕರಿಭಂಟನ ಪದ, ತತ್ವಪದ, ಆಂಜನೇಯನ ಪದ, ಚಂದ್ರಮನ ಪದ, ಜಾಂಬವರ ಪದ, ಮಾರಮ್ಮನ ಪದ, ಕರಿಯಮ್ಮನ ಪದ, ಆದಿಜಾಂಬವ ಪುರಾಣ, ಒಸಗೆ ಪದ, ಮದುವೆ- ಸೋಬಾನೆ ಸಂಪ್ರದಾಯದ ಪದಗಳು, ಹಸೆ ಪದಗಳು, ಸುಗ್ಗಿ ಪದಗಳು, ಲಾಲಿ ಹಾಡುಗಳು, ಗಂಗಭಾರತ ಕಾವ್ಯ ಮುಂತಾದ ಅನೇಕ ಜಾನಪದ ಹಾಡುಗಬ್ಬಗಳನ್ನು ಹಾಡುವಲ್ಲಿ ಸುತ್ತಮುತ್ತಲ ಊರುಗಳಲ್ಲಿ ಹೆಸರಾಗಿದ್ದಾರೆ.

ಇವರಿಗೆ ಹಾಡುಗಾರಿಕೆ ಕಲಿಸಿಕೊಟ್ಟ ಕೆಂಪನಾಗಮ್ಮಜ್ಜಿ ಎಂಬ ಮುಖ್ಯ ಕಲಾವಿದೆಯು ನಿಧನರಾದ ಬಳಿಕ, ವಡ್ಡಗೆರೆ ಕದರಮ್ಮನವರು ಮುಮ್ಮೇಳದ ಮುಖ್ಯ ಕವಯಿತ್ರಿ -ಹಾಡುಗಾರ್ತಿಯಾಗಿ ತನ್ನ ತಂಡವನ್ನು ಮುನ್ನಡೆಸುವುದರೊಂದಿಗೆ ಹೊಸ ತಲೆಮಾರಿನವರಿಗೆ ಜಾನಪದ ಹಾಡುಗಳನ್ನು ಕಲಿಸಿಕೊಡುತ್ತಿದ್ದಾರೆ.
ಲೇಖನ-ಡಾ.ವಡ್ಡಗೆರೆ ನಾಗರಾಜಯ್ಯ, 8722724174

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ