ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಪದಾಧಿಕಾರಿಗಳ ನಿಯೋಗವು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಗೃಹ ಕಚೇರಿ 'ಕೃಷ್ಣಾ'ದಲ್ಲಿ ಭೇಟಿಯಾಗಿ, ವಕೀಲರ ವೃತ್ತಿಪರ ಹಿತರಕ್ಷಣೆ ಹಾಗೂ ವಿವಿಧ ಪ್ರಮುಖ ವಿಷಯಗಳ ಕುರಿತು ವಿಸ್ತೃತವಾಗಿ ಚರ್ಚಿಸಿತು.
ಈ ಭೇಟಿಯ ಸಂದರ್ಭದಲ್ಲಿ ವಕೀಲರ ಪರಿಷತ್ತಿನ ಅಧ್ಯಕ್ಷರಾದ ವಿ. ಡಿ. ಕಾಮರಡ್ಡಿ, ಹೆಚ್. ಎಲ್. ಶಿವಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಎ. ಎಸ್. ಪೊನ್ನಣ್ಣ ಹಾಗೂ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಉಪಸ್ಥಿತರಿದ್ದರು.
ಸಭೆಯಲ್ಲಿ ವಕೀಲರ ಸಮುದಾಯ ಎದುರಿಸುತ್ತಿರುವ ಸವಾಲುಗಳು, ಮೂಲಸೌಕರ್ಯ ಹಾಗೂ ಕ್ಷೇಮಾಭಿವೃದ್ಧಿ ಯೋಜನೆಗಳ ಕುರಿತು ನಿಯೋಗವು ಗಮನ ಸೆಳೆಯಿತು. ವಕೀಲರ ನ್ಯಾಯಯುತ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು, ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.




