ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
'ಸಾಮಾಜಿಕ ನ್ಯಾಯಕ್ಕಾಗಿ ಒಳ ಮೀಸಲಾತಿ ಹೋರಾಟ ಸಮಿತಿ'ಯ ವತಿಯಿಂದ ಆಯೋಜಿಸಲಾಗಿದ್ದ "ಒಳ ಮೀಸಲಾತಿ ಕುರಿತ ವಿಚಾರ ಸಂಕಿರಣ"ವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ದೊರೆಯಬೇಕು ಎಂಬ ನಿಟ್ಟಿನಲ್ಲಿ ಒಳ ಮೀಸಲಾತಿ ಚರ್ಚೆಗಳು ಅತ್ಯಂತ ಮಹತ್ವದ್ದಾಗಿವೆ ಎಂದು ಅಭಿಪ್ರಾಯಪಟ್ಟರು.
ಈ ವಿಚಾರ ಸಂಕಿರಣದಲ್ಲಿ ಪ್ರಮುಖ ಹೋರಾಟಗಾರರಾದ ಬಸವರಾಜ ಕವತಾಳ, ಮಾರಸಂದ್ರ ಮುನಿಯಪ್ಪ, ಅಂಬಣ್ಣ ಸೇರಿದಂತೆ ಹಲವು ಹಿರಿಯ ನಾಯಕರು ಹಾಗೂ ಹೋರಾಟಗಾರರು ಭಾಗವಹಿಸಿದ್ದರು.



