Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಜಿಪಂ ಅಧ್ಯಕ್ಷ ರಾಮಚಂದ್ರಪ್ಪ ನಿಧನ: ಸಾಂತ್ವನ ಹೇಳಿದ ಡಿಸಿಎಂ ಶಿವಕುಮಾರ್

Advertisement

ಚಂದ್ರವಳ್ಳಿ ನ್ಯೂಸ್, ಬಿಡದಿ:
ರಾಮನಗರ ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷರು ಹಾಗೂ ಬಿಡದಿ ಪುರಸಭೆಯ ಹಾಲಿ ಸದಸ್ಯರಾದ ರಾಮಚಂದ್ರಪ್ಪ ಅವರು ನಿಧನರಾಗಿದ್ದಾರೆ. ಹಿರಿಯ ಮುಖಂಡರ ಅಗಲಿಕೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಅಂತಿಮ ದರ್ಶನ ಪಡೆದ ಡಿಸಿಎಂ-
ರಾಮಚಂದ್ರಪ್ಪ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಬಿಡದಿಯ ಇಟ್ಟಮಡುವಿನಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿದ ಡಿ.ಕೆ. ಶಿವಕುಮಾರ್ ಅವರು
, ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಪುಷ್ಪಗುಚ್ಛ ಅರ್ಪಿಸಿ ಗೌರವ ಸಲ್ಲಿಸಿದರು. ಬಳಿಕ ಮೃತರ ಕುಟುಂಬಸ್ಥರನ್ನು ಭೇಟಿ ಮಾಡಿ, ಅವರಿಗೆ ಧೈರ್ಯ ತುಂಬಿ ಸಾಂತ್ವನ ತಿಳಿಸಿದರು.

ಜನಪರ ಕಾಳಜಿಯ ನಾಯಕ-
ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಅವರು ರಾಮಚಂದ್ರಪ್ಪ ಅವರ ಸೇವೆಯನ್ನು ಸ್ಮರಿಸಿದರು.

"ರಾಮಚಂದ್ರಪ್ಪ ಅವರು ಸಮಾಜ ಸೇವೆ ಹಾಗೂ ಜನಪರ ಕಾಳಜಿಯನ್ನು ಮೈಗೂಡಿಸಿಕೊಂಡಿದ್ದ ನಾಯಕರು. ಅವರ ನಿಧನವು ಅತ್ಯಂತ ದುಃಖಕರ ವಿಷಯವಾಗಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬಸ್ಥರು ಮತ್ತು ಬೆಂಬಲಿಗರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ದಯಪಾಲಿಸಲಿ ಎಂದು ಡಿಸಿಎಂ ಶಿವಕುಮಾರ್ ಪ್ರಾರ್ಥಿಸುತ್ತೇನೆ."

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST