LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಇನ್ನಿಲ್ಲ: ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರು

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ(85) ಅವರು ಶನಿವಾರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇದರೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಪತ್ನಿವಿಯೋಗ ಉಂಟಾಗಿದೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಚೆನ್ನಮ್ಮ ಅವರನ್ನು ಕಳೆದ ನಾಲ್ಕು ದಿನಗಳ ಹಿಂದೆ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಸಂಜೆ 4:30ರ ಸುಮಾರಿಗೆ ತೀವ್ರ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ವರದಿ ಮಾಡಿವೆ.

7 ದಶಕಗಳ ದಾಂಪತ್ಯ:
ಹಾಸನ ತಾಲೂಕಿನ ಮುತ್ತಿಗೆ ಹಿರೇಹಳ್ಳಿಯ ಮೂಲದವರಾದ ಚೆನ್ನಮ್ಮ ಅವರು
, 1954ರ ಮೇ 25ರಂದು ಹೆಚ್.ಡಿ. ದೇವೇಗೌಡರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುದೀರ್ಘ 70 ವರ್ಷಗಳ ಕಾಲ ದೇವೇಗೌಡರ ಏಳುಬೀಳುಗಳ ರಾಜಕೀಯ ಬದುಕಿನಲ್ಲಿ ನೆರಳಾಗಿ ನಿಂತಿದ್ದ ಚನ್ನಮ್ಮ ಅವರು ಮಾದರಿ ದಂಪತಿಯಾಗಿ ಬಾಳಿದ್ದರು. ಈ ದಂಪತಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಶಾಸಕ ಹೆಚ್.ಡಿ. ರೇವಣ್ಣ ಸೇರಿದಂತೆ ಒಟ್ಟು ಆರು ಜನ ಮಕ್ಕಳಿದ್ದಾರೆ.

ಚೆನ್ನಮ್ಮ ಅವರ ನಿಧನಕ್ಕೆ ನಾಡಿನ ಗಣ್ಯರು, ಜೆಡಿಎಸ್ ಮುಖಂಡರು ಹಾಗೂ ಲಕ್ಷಾಂತರ ಕಾರ್ಯಕರ್ತರು ತೀವ್ರ ಕಂಬನಿ ಮಿಡಿದಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಣಿ ವಿಲಾಸ ಸಾಗರ ಹಾಗೂ ಗಾಯತ್ರಿ ಜಲಾಶಯಗಳಿಗೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿರ್ಬಂಧಆಗಸ್ಟ್ 12ಕ್ಕೆ 'ಶತಮಾನದ ಖಗ್ರಾಸ ಸೂರ್ಯಗ್ರಹಣ': ಭಾರತದಲ್ಲಿ ಗೋಚರವಿಲ್ಲ, ಯಾವುದೇ ಆಚರಣೆ ಅಗತ್ಯವಿಲ್ಲರಾಣಿ ಎಲಿಜಬೆತ್ ಹೊಗಳಿದ್ದ ನಮ್ಮ ವಿಧಾನಸೌಧವೇ ನನಗೆ ಸ್ಫೂರ್ತಿ-ಟಿ.ಬಿ ಜಯಚಂದ್ರಕೆಪಿಸಿಸಿ ಅಧ್ಯಕ್ಷರ ಆಶೀರ್ವಾದ ಸಿಕ್ಕಿದೆ- ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಣ್ಣಚಿತ್ತಯ್ಯ ಯುವ ಜನತೆಗೆ ಯೋಗ, ವ್ಯಾಯಾಮ ಅತ್ಯಂತ ಅವಶ್ಯ:ದಿವ್ಯ ಜ್ಞಾನಾನಂದ ಶ್ರೀಎಸ್. ನಾಗೇನಹಳ್ಳಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಮುನಿಕೃಷ್ಣಪ್ಪ ಆಯ್ಕೆಅಪಘಾತದಲ್ಲಿ ಮೃತಪಟ್ಟ ಕೋಳಿಗಳು 'ಜೀವಸಂಪತ್ತು': ವಿಮಾ ಪರಿಹಾರ ಎತ್ತಿಹಿಡಿದ ಹೈಕೋರ್ಟ್ಸವರ್ಣೀಯ ಮುಖಂಡರಿಂದ ದಲಿತ ಅಧಿಕಾರಿಗಳಿಗೆ ಕಿರುಕುಳ-ಮಾರಸಂದ್ರ ಮುನಿಯಪ್ಪಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆಮೈಸೂರಲ್ಲಿ  'ಜೋಡೆತ್ತು' ಚಿತ್ರದ ಅದ್ದೂರಿ ಕ್ಲೈಮ್ಯಾಕ್ಸ್