ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
80ನೇ ಸ್ವಾತಂತ್ರ್ಯ ದಿನಾಚರಣೆಯ ಪವಿತ್ರ ಸಂದರ್ಭದಲ್ಲಿ ಮಾಜಿ ಪ್ರಧಾನಮಂತ್ರಿ ಹಾಗೂ ಜಾತ್ಯತೀತ ಜನತಾದಳ (ಜೆಡಿಎಸ್) ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡ ಅವರು ತಮ್ಮ ನಿವಾಸದಲ್ಲಿ ಹೆಮ್ಮೆಯ ತ್ರಿವರ್ಣ ಧ್ವಜಾರೋಹಣ ನೆರವೇರಿಸಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.
ಮನೆ ಮನೆಯಲ್ಲಿ ತ್ರಿವರ್ಣ ಧ್ವಜ: ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 'ಮನೆ ಮನೆಯಲ್ಲೂ ತ್ರಿವರ್ಣ ಧ್ವಜ' ಅಭಿಯಾನದ ಕರೆಯನ್ನು ದೇವೇಗೌಡರು ಸ್ಮರಿಸಿದ್ದಾರೆ.
ಸಂಭ್ರಮಾಚರಣೆಗೆ ಕರೆ: ದೇಶದ ಪ್ರತಿಯೊಬ್ಬ ನಾಗರಿಕರು ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜವನ್ನು ಹೆಮ್ಮೆಯಿಂದ ಹಾರಿಸುವ ಮೂಲಕ ಸ್ವಾತಂತ್ರೋತ್ಸವವನ್ನು ಅತ್ಯಂತ ಸಡಗರ-ಸಂಭ್ರಮದಿಂದ ಆಚರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.



