ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ನಗರದ ರೋಟರಿ ಕ್ಲಬ್‌ನ ಮಾಜಿ ಅಧ್ಯಕ್ಷರಾದ ಹೆಚ್. ಕಿರಣ್ ಕುಮಾರ್ ಅವರ ತಾಯಿ ಮಂಜುಳಮ್ಮ (65) ಅವರು ಗುರುವಾರ ಬೆಳಿಗ್ಗೆ ನಿಧನರಾಗಿದ್ದಾರೆ.
Also read
ಮೃತರು ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಗುರುವಾರ ಮಧ್ಯಾಹ್ನ ೧:೦೦ ಗಂಟೆಗೆ ನೆರವೇರಲಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
ಸಂತಾಪ: ಮಂಜುಳಮ್ಮ ಅವರ ಹಠಾತ್ ನಿಧನಕ್ಕೆ ಹಿರಿಯೂರು ರೋಟರಿ ಸಂಸ್ಥೆ ಹಾಗೂ ರೆಡ್‌ಕ್ರಾಸ್ ಸಂಸ್ಥೆಯ ಪದಾಧಿಕಾರಿಗಳು ಮತ್ತು ಸದಸ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಕ್ಕೆ ಭಗವಂತನು ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.



