Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ ಪಾಸ್‌ಸೌಲಭ್ಯ-ಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
 ಮಾಧ್ಯಮ ಮಾನ್ಯತಾ ಪತ್ರ ಹೊಂದಿರುವ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್‌ಸೌಲಭ್ಯವನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ಈ ಮೂಲಕ ಬಜೆಟ್‌ನಲ್ಲಿ ಘೋಷಣೆ ಮಾಡಿ ಅದನ್ನು ಯಥಾವತ್ತಾಗಿ ಜಾರಿಗೆ ಕೊಟ್ಟು ಸರ್ಕಾರ ನುಡಿದಂತೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಉಚಿತ ಬಸ್‌ಪಾಸ್‌ಪಡೆಯಲು ಆನ್‌ಲೈನ್‌ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ ವೇತನ ಪತ್ರ/ ಬ್ಯಾಂಕ್ ಸ್ಟೇಟ್‌ಮೆಂಟ್‌ಇವುಗಳಲ್ಲಿ ಯಾವುದಾದರೂ ಒಂದು ದಾಖಲೆಯನ್ನು ಸೇವಾನುಭವಕ್ಕಾಗಿ ಒದಗಿಸಬೇಕು.

ಅರ್ಹ ಪತ್ರಕರ್ತರು ಉಚಿತ ಬಸ್‌ಪಾಸ್‌ಅಡಿ ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಉಚಿತವಾಗಿ ಸಂಚರಿಸಬಹುದು.
ತಹಶೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು ಎಂದು ಅವರು ತಿಳಿಸಿದ್ದಾರೆ.


ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರಿಗೆ, ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಒಬ್ಬರಿಗೆ, ಆರು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಓರ್ವ ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್‌ಗೆ, ಎಂಟು ಅಥವಾ ಹೆಚ್ಚು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಇಬ್ಬರು ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್‌ಗೆ ಬಸ್ ಪಾಸ್ ಪಡೆಯಲು ಅವಕಾಶವಿದೆ.

ಉಪಗ್ರಹ ಆಧಾರಿತ ವಿದ್ಯುನ್ಮಾನ ವಾಹಿನಿಗಳ ವರದಿಗಾರರು ತಾಲೂಕು ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ ಪ್ರತಿ ತಾಲೂಕಿಗೆ ಓರ್ವ ಕ್ಯಾಮರಾಮ್ಯಾನ್ ಹಾಗೂ ಓರ್ವ ವರದಿಗಾರರು ಬಸ್ ಪಾಸ್ ಪಡೆಯಬಹುದು. ದಿನಪತ್ರಿಕೆಗಳು ಹಾಗೂ ಉಪಗ್ರಹ ಸುದ್ದಿ ವಾಹಿನಿಗಳ ಸಂಪಾದಕರು ನೀಡುವ ನೇಮಕಾತಿ ಪತ್ರ ಹಾಗೂ ಶಿಫಾರಸ್ಸು ಆಧರಿಸಿ ಬಸ್ ಪಾಸ್‌ಗಳನ್ನು ನೀಡಲಾಗುವುದು.

ಅರ್ಹ ಪತ್ರಕರ್ತರು ತಮ್ಮ ಸಮೀಪದ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ತೆರಳಿ ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು. ಅಪ್‌ಲೋಡ್ ಮಾಡಿದ ದಾಖಲೆಗಳು ಹಾಗೂ ಆನ್‌ಲೈನ್ ಅರ್ಜಿಯ ಮುದ್ರಿತ ಪ್ರತಿಯನ್ನು ತಮ್ಮ ಜಿಲ್ಲೆಯ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಗೆ ಸ್ವಯಂ ದೃಢೀಕರಿಸಿ ಸಲ್ಲಿಸಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ