Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೇಡಿ ಮಣ್ಣಿನ ಗೌರಿ, ಗಣೇಶ ವಿಗ್ರಹಗಳ ಉಚಿತ ವಿತರಣೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಈ ಬಾರಿಯ ಸ್ವರ್ಣಗೌರಿ ವ್ರತ ಮತ್ತು ಗಣೇಶ ಚತುರ್ಥಿಯನ್ನು ಪರಿಸರಸ್ನೇಹಿಯಾಗಿ ಆಚರಿಸುವ ಅಭಿಯಾನಕ್ಕೆ ಇಲ್ಲಿನ ಲಯನ್ಸ್‌ಕ್ಲಬ್ ಆಫ್‌ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ನ ನೇತೃತ್ವದಲ್ಲಿ ಮಂಗಳವಾರ ಚಾಲನೆ ನೀಡಲಾಯಿತು.


ಅಭಿಯಾನದ ಭಾಗವಾಗಿ ಜೇಡಿಮಣ್ಣಿನಿಂದ ತಯಾರಿಸಿದ ಬಣ್ಣರಹಿತ 108 ಗೌರಿ ಹಾಗೂ 108 ಗಣೇಶ ವಿಗ್ರಹಗಳನ್ನು ವಿಜಯಲಕ್ಷ್ಮಿ ಎಂಟರ್‌ಪ್ರೈಸಸ್‌ಸಹಯೋಗದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ವಿತರಣೆ ಮಾಡಲಾಯಿತು.

ಮಾತನಾಡಿದ ಲಯನ್ಸ್‌ಜಿಎಂಟಿ ಸಂಯೋಜಕ ಎಂ.ಆರ್.ಶ್ರೀನಿವಾಸ್‌, ಧಾರ್ಮಿಕ ಆಚರಣೆಗಳು ಪರಿಸರಸ್ನೇಹಿಯಾಗಿದ್ದಾಗ ಹೆಚ್ಚಿ ಅರ್ಥಪೂರ್ಣವಾಗುತ್ತವೆ. ಈ ನಿಟ್ಟಿನಲ್ಲಿ ಕಳೆದ 8 ವರ್ಷಗಳಿಂದ ಬಣ್ಣರಹಿತ ಮಣ್ಣಿನ ಗೌರಿ-ಗಣೇಶ ಮೂರ್ತಿಗಳನ್ನು ಉಚಿತವಾಗಿ ವಿತರಿಸುವ ಅಭಿಯಾನವನ್ನು ನಡೆಸಿಕೊಂಡು ಬರಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಲಯನ್ಸ್‌ಕ್ಲಬ್‌ಅಧ್ಯಕ್ಷ ಕೆ.ಆರ್.ರವಿಕಿರಣ್ ಮಾತನಾಡಿ, ಲಯನ್ಸ್‌ಕ್ಲಬ್‌ಪರಿಸರಸ್ನೇಹಿ ಚಿಂತನೆಗಳನ್ನು ಬಿತ್ತುವ ಮಹತ್ವದ ಕೆಲಸವನ್ನು ಮಾಡುತ್ತಿದೆ. ರಾಸಾಯನಿಕಯುಕ್ತ ಬಣ್ಣಗಳಿಂದ ಜಲಮೂಲಗಳಿಗೆ ಹಾನಿಯಾಗುತ್ತದೆ. ಅಲ್ಲದೆ ಪಿಒಪಿ ವಿಗ್ರಹಗಳು ನೀರಿನಲ್ಲಿ ಕರಗುವುದಿಲ್ಲ. ಹಬ್ಬವನ್ನು ಪರಿಸರಕ್ಕೆ ಪೂರಕವಾಗಿ ಆಚರಿಸುವುದು ಎಲ್ಲರ ಕರ್ತವ್ಯವಾಗಬೇಕು. ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸಿ ಜನರಿಗೆ ಗೌರಿ ಹಾಗೂ ಗಣೇಶ ಮೂರ್ತಿಗಳನ್ನು ಉಚಿತವಾಗಿ ವಿತರಿಸಲಾಗಿದೆ ಎಂದರು.

ಲಯನ್ಸ್‌ವಲಯ ಅಧ್ಯಕ್ಷ ಜೆ.ಆರ್.ರಾಕೇಶ್, ಕ್ಲಬ್‌ಕಾರ್ಯದರ್ಶಿ ಎ.ಎಸ್.ಸುಮಾ, ಖಜಾಂಚಿ ಕೆ.ಸಿ.ನಾಗರಾಜ್, ಸಹಕಾರ್ಯದರ್ಶಿ ಮುಕೇಶ್‌ಎನ್.ಆರ್, ನಿರ್ದೇಶಕರಾದ ಕೆ.ವಿ.ಪ್ರಸನ್ನಕುಮಾರ್, ಕೆ.ಆರ್.ಮಂಜುಳಾ, ಮಂಜುನಾಥ್, ಕಾವ್ಯ, ಆರ್ಯಭಟ ಲಯನ್ಸ್‌ಸಂಸ್ಥೆ ಅಧ್ಯಕ್ಷ ಮನೋಹರ್, ಮನಸ್ವಿ, ಮೇಧ, ಚಾರ್ವಿ, ಪೃಷಿತ, ಅಕ್ಷಯ್‌ಸೇರಿದಂತೆ ಅಕ್ಷಯ ಲಿಯೋ ಕ್ಲಬ್, ಏಕಲವ್ಯ ಲಿಯೋ ಕ್ಲಬ್, ಆರ್ಯಭಟ ಲಿಯೋ ಲಯನ್ಸ್‌ಕ್ಲಬ್‌ಸದಸ್ಯರು ಉಪಸ್ಥಿತರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ