Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿರಾಶ್ರಿತ ಕುಟುಂಬಗಳಿಗೆ ಉಚಿತ ದಿನಸಿ ಕಿಟ್ ವಿತರಣೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
"ನಮ್ಮ ಚಾಲಕ ವೃತ್ತಿ" ವಾಕ್ಯದಡಿ ನಿರಂತರ ಸೇವೆ ಸಲ್ಲಿಸುತ್ತಿರುವ ಪ್ರತಿಯೊಬ್ಬ ಚಾಲಕರನ್ನು ಗೌರವಿಸಿನಿರಂತರ ಅನ್ನದಾಸೋಹ ಸಮಿತಿಯ ಸಹಯೋಗದೊಂದಿಗೆ ನಿರಾಶ್ರಿತ 50 ಕಡುಬಡವ ಕುಟುಂಬಗಳಿಗೆ ಉಚಿತ ದಿನಸಿ ಕಿಟ್ ಗಳನ್ನು SBI ಸಿಬ್ಬಂದಿ ಹೇಮಂತ್ ಕುಮಾರ್  ವಿತರಣೆ ಮಾಡಿದರು.

 ತಾಲ್ಲೂಕಿನ ದರ್ಗಾಜೋಗಿಹಳ್ಳಿಯಲ್ಲಿ  ನಿರಂತರವಾಗಿ ನೆಡೆಯುತ್ತಿರುವ 1829 ದಿನಗಳ ಅನ್ನದಾಸೋಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು ನಿಷ್ಠಾವಂತ ಚಾಲಕರನ್ನು ಸ್ಮರಿಸುವ ನಿಟ್ಟಿನಲ್ಲಿ ಸದಾ ಸಮಾಜಮುಖಿ ಕಾರ್ಯಗಳನ್ನು ನಿರಂತರ ಮಾಡಿಕೊಂಡು ಬರುತ್ತಿದ್ದೇನೆ, ಅಂತೆಯೇ ಇಂದು ಮಲ್ಲೇಶ್ ರವರ ಸಹಕಾರದೊಂದಿಗೆ 50ಕುಟುಂಬಗಳಿಗೆ ಉಚಿತ ದಿನಸಿ ಕಿಟ್ ವಿತರಣೆ ಮಾಡಿದ್ದು, ಮುಂದೆ ಮತ್ತಷ್ಟು ಸೇವೆ ಸಲ್ಲಿಸಲು ತೀರ್ಮಾನಿಸಿದ್ದೇವೆ ಎಂದರು.

ಮುಖಂಡರಾದ ಹೂವಿನ ನರಸಿಂಹಯ್ಯ  ಮಾತನಾಡಿ   ಅಗತ್ಯ ದಿನಸಿ ವಿತರಣೆ ಮಾಡುವ ಮೂಲಕ ಹೇಮಂತ್ ಕುಮಾರ್ ರವರು ಯುಗಾದಿ ಹಬ್ಬದಂದು ನಿರಾಶ್ರಿತರಿಗೆ ವಿಶೇಷ ಕೊಡುಗೆ ನೀಡಿದ್ದಾರೆ ಎಂದರೇ ತಪ್ಪಾಗಲಾರದು, ಇದು ಸಾಮಾನ್ಯ ವಿಷಯವಲ್ಲ, ಮಲ್ಲೇಶ್ ರವರು ನೆಡೆಸುತ್ತಿರುವ ನಿರಂತರ ಅನ್ನದಾಸೋಹಕ್ಕೆ ಸಾಥ್ ನೀಡುವ ಮೂಲಕ ಈ ಬಾರಿಯ ಯುಗಾದಿ ಹಬ್ಬವನ್ನು ವಿಶೇಷವಾಗಿ ಆಚರಿಸಿದ್ದಾರೆ ಅವರಿಗೆ ಶುಭವಾಗಲಿ ಎಂದು ಹಾರೈಸಿದರು.

ಆಟೋ ಮಿತ್ರ ಗಂಗರಾಜು ಮಾತನಾಡಿ ಈ ಬಾರಿಯ ಯುಗಾದಿ ಹಬ್ಬ ವಿಶೇಷವಾಗಿ ದಿನಸಿ ಕಿಟ್ ಕೊಡುವ ಮೂಲಕ ಆಚರಿಸಲಾಗಿದೆ, ಕಾರ್ಯಕ್ರಮದ ಮೂಲಕ ಹಲವು ಕುಟುಂಬಗಳ ಸಂತಸಕ್ಕೆ ಕಾರಣರಾದ ಹೇಮಂತ್ ಕುಮಾರ್, ಮಲ್ಲೇಶ್, ಹಾಗೂ ನರಸಿಂಹಯ್ಯ ಮತ್ತು ತಂಡಕ್ಕೆ ಶುಭವಾಗಲಿ ಎಂದು ಹಾರೈಸಿದರು.

 ಕಾರ್ಯಕ್ರಮದ ಆಯೋಜಕ ಮಲ್ಲೇಶ್ ಮಾತನಾಡಿ  ದಾನಿಗಳ ನರವಿನಿಂದ ನಿರಂತರವಾಗಿ 1829 ದಿನಗಳ ಅನ್ನದಾಸೋಹ ಕಾರ್ಯಕ್ರಮವನ್ನು ನಡೆಸುತ್ತಿದ್ದೇವೆ. ಇಂದು ಸರಿಸುಮಾರು 50 ಕುಟುಂಬಗಳಿಗೆ  ದಿನಸಿ ಕಿಟ್ ವಿತರಣೆ ಮಾಡುವ ಮೂಲಕ  ವಿಶೇಷವಾಗಿ ಅನ್ನದಾಸೋಹ ಕಾರ್ಯಕ್ರಮವನ್ನು  ನೆರವೇರಿಸಲಾಗಿದೆ . ಕಾರ್ಯಕ್ರಮಕ್ಕೆ ಸಹಾಯ ಹಸ್ತ ನೀಡಿದ  ದಾನಿಗಳಿಗೆ  ತುಂಬು ಹೃದಯದ ಧನ್ಯವಾದ ಅರ್ಪಿಸುತ್ತೇನೆ ಎಂದರು.  ಕಾರ್ಯಕ್ರಮದಲ್ಲಿ ನಿರಂತರ ಅನ್ನದಾಸೋಹ ಸಮಿತಿಯ ಸದಸ್ಯರು, ಚಾಲಕರು ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ