Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಉಚಿತ ಆರೋಗ್ಯ ತಪಾಸಣೆ ಶಿಬಿರ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : 
ಆರೋಗ್ಯಕ್ಕಿಂತ ಮಿಗಿಲಾದ ಸಂಪತ್ತು ಮತ್ತೊಂದಿಲ್ಲ. ದೇಹದಲ್ಲಿ ಸಮಸ್ಯೆ ಕಾಣಿಸಿಕೊಂಡಾಗಲೆ ಆರೋಗ್ಯದ ಮಹತ್ವ ಗೊತ್ತಾಗುವುದೆಂದು ನಿವೃತ್ತ ಮುಖ್ಯ ಲೆಕ್ಕಾಧಿಕಾರಿ ಸಿ.ಜಿ.ಶ್ರೀನಿವಾಸ್ ತಿಳಿಸಿದರು.

ದವಳಗಿರಿ ಬಡಾವಣೆಯಲ್ಲಿರುವ ಇನ್ನರ್‌ವೀಲ್ಹ್ ಕ್ಲಬ್ ಸಭಾ ಭವನದಲ್ಲಿ ಅಮೃತ ಆಯುರ್ವೇದಿಕ್ ಕಾಲೇಜು ಮತ್ತು ಆಸ್ಪತ್ರೆ, ಇನ್ನರ್‌ವೀಲ್ಹ್ ಕ್ಲಬ್, ಪತಂಜಲಿ ಯೋಗ ಟ್ರಸ್ಟ್, ದೇವಾಲಯ ಸಂವರ್ಧನಾ ಸಮಿತಿ ಹಾಗೂ ದವಳಗಿರಿ ನಾಗರೀಕರ ಸಹಯೋಗದೊಂದಿಗೆ ಏರ್ಪಡಿಸಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದರು. ವಿಜ್ಞಾನ ಮತ್ತು ತಂತ್ರಜ್ಞಾನ ಯುಗದಲ್ಲಿ ಎಲ್ಲರೂ ಒತ್ತಡದ ನಡುವೆ ಬದುಕುತ್ತಿರುವುದರಿಂದ ಪ್ರತಿಯೊಬ್ಬರು ಇಂತಹ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಸಲಹೆ ನೀಡಿದರು.

Advertisement

ಪತಂಜಲಿ ಯೋಗ ಸಮಿತಿಯ ದೇವೆಂದ್ರನಾಯ್ಕ, ಇನ್ನರ್‌ವೀಲ್ಹ್ ಕ್ಲಬ್ ಅಧ್ಯಕ್ಷೆ ರಾಧಾ, ಗಾಯತ್ರಿ ಶಿವರಾಂ, ಮೇಘಾ, ಅಮೃತ ಆಯುರ್ವೇದಿಕ್ ಕಾಲೇಜಿನ ಡಾ.ನವೀನ್ ಸಜ್ಜನ್ ಹಾಗೂ ವೈದ್ಯರುಗಳ ತಂಡ, ಯೋಗ ಗುರು ಭರಮಸಾಗರ ತಿಪ್ಪೇಸ್ವಾಮಿ, ಡಾ.ಶ್ರೀಹರ್ಷ ಇವರುಗಳು ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿದ್ದರು.

ಜೆ.ಎಸ್.ಗುರುಮೂರ್ತಿ ವಂದಿಸಿದರು. ಡಾ.ಶಶಿಕಿರಣ್ ಗುಡೆಕೋಟೆ ನಿರೂಪಿಸಿದರು. ೧೩೦ ಕ್ಕೂ ಹೆಚ್ಚು ಮಂದಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ