ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ದೊಡ್ಡಬೆಳವಂಗಲ ಹೋಬಳಿ ಹೊನ್ನಾಘಟ್ಟ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು .
ಜಿಲ್ಲಾ ಯೋಜನಾ ನಿರ್ದೇಶಕರಾದ ಉಮರಬ್ಬ ರವರು ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ಜನತೆ ಈ ಶಿಬಿರಗಳಲ್ಲಿ ದೊರೆಯುವ ಚಿಕಿತ್ಸೆಗಳ ಪ್ರಯೋಜನ ಪಡೆದುಕೊಳ್ಳುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಿಸುವಲ್ಲಿ ಕೈಜೋಡಿಸಬೇಕು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹತ್ತು ಹಲವು ಕಾರ್ಯಕ್ರಮಗಳನ್ನು ಮಾಡುವ ಮುಖಾಂತರ ಸಮುದಾಯದ ಅಭಿವೃದ್ಧಿ ಗೆ ಶ್ರಮಿಸುತ್ತಿದೆ ಆರೋಗ್ಯವೇ ಭಾಗ್ಯ" ಎಂಬುದು ಮನುಷ್ಯನ ಜೀವನದ ಅತ್ಯಂತ ದೊಡ್ಡ ಸತ್ಯ. ಧನ, ಕನಕ, ಆಸ್ತಿ ಎಷ್ಟೇ ಇದ್ದರೂ ಉತ್ತಮ ಆರೋಗ್ಯವಿಲ್ಲದಿದ್ದರೆ ಅವುಗಳನ್ನು ಅನುಭವಿಸಲು ಸಾಧ್ಯವಿಲ್ಲ. ಶಾರೀರಿಕ ಮತ್ತು ಮಾನಸಿಕ ನೆಮ್ಮದಿಯೇ ನಿಜವಾದ ಸಂಪತ್ತು. ಅದ್ದರಿಂದ ಗ್ರಾಮ ಮಟ್ಟದಲ್ಲಿ ಆರೋಗ್ಯ ಶಿಬಿರಗಳನ್ನು ಏರ್ಪಡಿಸುವುದು, ಬೀದಿನಾಟಕ ಪ್ರದರ್ಶನ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದರು.
ಶಿಬಿರದಲ್ಲಿ ಸಾರ್ವಜನಿಕರಿಗೆ ಕಣ್ಣಿನ ತಪಾಸಣೆ ಮಾಡಿ ಉಚಿತವಾಗಿ ಕನ್ನಡಕ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ದಿನೇಶ್ ,ದೃಷ್ಟಿ ಆಸ್ಪತ್ರೆಯ ಸಿಬ್ಬಂದಿ ಶಿವಕುಮಾರ್, ವೆಂಕಟೇಶ್, ತಾಲೂಕು ಕೃಷಿ ಮೇಲ್ವಿಚಾರಕರಾದ ಲೋಹಿತ್, ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿ ಪುರುಷೋತ್ತಮ,ಗ್ರಾಮದ ಹಿರಿಯರಾದ ಸೋಮಶೇಖರ್ ಗಂಗಾಧರಯ್ಯ, ಕೇಶವಮೂರ್ತಿ,ನಟರಾಜ್ ಸೇವಾಪ್ರತಿನಿದಿಗಳಾದ ವಿಶಾಲಾಕ್ಷಿ, ಮಂಗಳ ಸೇರಿದಂತೆ ಸಂಘದ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.




