ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ನಗರದ ಹೊರವಲಯದ ನರಹರಿ ನಗರದ ಶ್ರೀನರಹರಿ ಸೇವಾ ಪ್ರತಿಷ್ಠಾನ ಹಾಗೂ ನಾಗ ಸಿಂಹಾದ್ರಿ ಚಾರಿಟೀಸ್, ಇಂಡಿಯಾನಾ ಎಸ್.ಜೆ.ಎಂ. ಹಾರ್ಟ್ ಸೆಂಟರ್,ವಾಸವಿ ಲ್ಯಾಬ್ ನ ಸಹಯೋಗದಲ್ಲಿ ಜುಲೈ 11ರ ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಶ್ರೀನರಹರೇಶ್ವರ ದೇವಸ್ಥಾನದ ಆವರಣದಲ್ಲಿ "ಉಚಿತ ಆರೋಗ್ಯ ತಪಾಸಣಾ ಶಿಬಿರ"ವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀನರಹರಿ ಸದ್ಗುರು ಆಶ್ರಮದ ಪೀಠಾಧ್ಯಕ್ಷರಾದ ವೈ ರಾಜಾರಾಮ್ ಗುರುಗಳು ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಡೀನ್ ಡಾ.ರಾಜೇಶ್, ವೈದ್ಯಕೀಯ ಅಧೀಕ್ಷಕರಾದ ಡಾ.ಪಾಲಾಕ್ಷಯ್ಯ ಭಾಗವಹಿಸಲಿದ್ದು
ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಪಥಾಲಜಿ ವಿಭಾಗದ ಮುಖ್ಯಸ್ಥರಾದ ಡಾ.ಸಿ.ನಾರಾಯಣಮೂರ್ತಿ ಅವರಿಗೆ ಗೌರವ ಸನ್ಮಾನ ಏರ್ಪಡಿಸಲಾಗಿದ್ದು ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಶ್ರೀನರಹರಿ ಸದ್ಗುರು ಆಶ್ರಮದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.



