Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಉಚಿತ ಆನ್‍ಲೈನ್ ಕೋಚಿಂಗ್ ತರಬೇತಿ ಜಾರಿ- ಮಧು ಬಂಗಾರಪ್ಪ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಇಡೀ ದೇಶದಲ್ಲೇ ಮೊದಲ ಬಾರಿಗೆ ನಮ್ಮ ರಾಜ್ಯದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ “Online Live NEET/JEE/CET” ತರಗತಿಗಳ  ತರಬೇತಿ ಯೋಜನೆ ಜಾರಿಗೊಳಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು.

ಶಾಲಾ ಶಿಕ್ಷಣ (ಪದವಿ ಪೂರ್ವ) ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಇಂದು ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ ಉಚಿತ NEET/JEE/CET ಆನ್‍ಲೈನ್ ಕೋಚಿಂಗ್ ತರಗತಿಗಳ ತರಬೇತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಸಚಿವರು, 25 ಸಾವಿರ ವಿದ್ಯಾರ್ಥಿಗಳು ಈ ತರಬೇತಿ ಪಡೆಯಲಿದ್ದು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಲಾಗಿನ್ ಐಡಿ ನೀಡಲಾಗಿದೆ. ಆಸಕ್ತ ಎಲ್ಲಾ  ವಿದ್ಯಾರ್ಥಿಗಳು ಸಹ ಆನ್‍ಲೈನ್ ಉಚಿತ ತರಬೇತಿ ಪಡೆಯಬಹುದು ಎಂದರು.

ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ  ಶೈಕ್ಷಣಿಕ ಜೀವನದ ಬಹಳ ಪ್ರಮುಖವಾದ ಹಂತವಾಗಿದ್ದು, ಭವಿಷ್ಯದ ವೃತ್ತಿ ಆಯ್ಕೆಗೆ ಪೂರಕವಾದ ಶಿಕ್ಷಣ ಆಯ್ಕೆ ಮಾಡಲು NEET/JEE/CET ಪರೀಕ್ಷೆಗಳಲ್ಲಿ ಉತ್ತಮ ಶ್ರೇಣಿ ಪಡೆಯುವುದು ಮುಖ್ಯವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಪೋಷಕರು ಹೆಚ್ಚಾಗಿ ಖಾಸಗಿ ಕಾಲೇಜುಗಳಿಗೆ ವಿದ್ಯಾರ್ಥಿಗಳನ್ನು ದಾಖಲು ಮಾಡುತ್ತಾರೆ. ಅಲ್ಲಿ ನಿಗಧಿತ ತರಗತಿಗೆ ಚಟುವಟಿಕೆಗಳೊಂದಿಗೆ ವೃತ್ತಿಪರ ಕೋರ್ಸ್‍ಗಳಿಗೆ ಪ್ರವೇಶ ಪಡೆಯಲು ಪ್ರವೇಶ ಪರೀಕ್ಷೆಗೂ ಸಹ ತರಬೇತಿ ನೀಡುತ್ತಾರೆ ಎಂಬ ಉದ್ದೇಶ ಪೋಷಕರದ್ದಾಗಿರುತ್ತದೆ.

ಆರ್ಥಿಕ ಸಮಸ್ಯೆ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಸರಿಯಾದ ಸಾರಿಗೆ ಸೌಲಭ್ಯ ಸಿಗದೆ ವಿದ್ಯಾರ್ಥಿಗಳು ವೈದ್ಯಕೀಯ, ಇಂಜಿನಿಯರಿಂಗ್ ಹಾಗೂ ಉನ್ನತ ಮಟ್ಟದ ಶಿಕ್ಷಣ ಪಡೆಯುವ ಕನಸು ಈಡೇರುವುದಿಲ್ಲ ಎಂಬುದನ್ನು ಅರಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ಅಭ್ಯಾಸ ಮಾಡುವ ವಿದ್ಯಾರ್ಥಿಗಳಿಗೂ “NEET/JEE/CET ಪ್ರವೇಶ ಪರೀಕ್ಷೆಗಳಿಗೆ ತರಬೇತಿ ಸಿಗಬೇಕು ಎನ್ನುವ ಉದ್ದೇಶದಿಂದ ಉನ್ನತ ಶಿಕ್ಷಣ ಕೋರ್ಸ್‍ಗಳ ಪ್ರವೇಶ ಪರೀಕ್ಷೆಗಳಿಗೆ ಗುಣಮಟ್ಟದ ತರಬೇತಿಯನ್ನು ಉಚಿತವಾಗಿ ನೀಡಲು 2024-25ನೇ ಆಯವ್ಯಯದಲ್ಲಿ ಈ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಸರ್ಕಾರದ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಇಡೀ ರಾಜ್ಯದಲ್ಲಿ ಇಂದಿನಿಂದ ಜಾರಿಗೆ ತರಲಾಗಿದೆ ಎಂದರು.


ಈ ಯೋಜನೆಯಡಿಯಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ಸಂಯೋಜನೆಯಲ್ಲಿರುವ 25 ಸಾವಿರ ವಿದ್ಯಾರ್ಥಿಗಳ ಪೈಕಿ, ಆದರ್ಶ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಥಮ ಪಿಯುಸಿಯ 5 ಸಾವಿರ, ಇತರೆ ಕಾಲೇಜುಗಳ ಪ್ರಥಮ ಪಿಯುಸಿಯ 10 ಸಾವಿರ ಹಾಗೂ ದ್ವಿತೀಯ ಪಿಯುಸಿಯ 10 ಸಾವಿರ ವಿದ್ಯಾರ್ಥಿಗಳು ಇದರ ಲಾಭವನ್ನು ಪಡೆಯಲಿದ್ದಾರೆ. ವಿದ್ಯಾರ್ಥಿಗಳಿಗೆ ಕೋಚಿಂಗ್ ನೀಡುವ ಕಾರ್ಯಕ್ಕೆ ಈ ಕ್ಷೇತ್ರದಲ್ಲಿ ಉತ್ತಮ  ಹೆಸರು ಮಾಡಿರುವ ಪೇಸ್ ಸಂಸ್ಥೆ ಆಯ್ಕೆಯಾಗಿರುತ್ತದೆ. ಈ ಸಂಸ್ಥೆಯಿಂದ ಮುಂದಿನ ಎರಡು ವರ್ಷಗಳಿಗೆ ಪುಸ್ತಕ ಹಾಗೂ ಮುಂದಿನ ವರ್ಷದಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ Online Live NEET/JEE/CET ತರಗತಿಗಳನ್ನು ನಡೆಸುತ್ತಾರೆ ಎಂದರು.

ತರಬೇತಿಯು ತರಗತಿಗಳ ಆರಂಭಕ್ಕೆ ಮುನ್ನ ಒಂದು ಗಂಟೆ, ತರಗತಿಗಳು ಮುಗಿದ ನಂತರ ಒಂದು ಗಂಟೆ ಅವಧಿಯಲ್ಲಿ ತರಬೇತಿಗಳು ನಡೆಯುತ್ತವೆ. ಪರಿಣಿತ ಉಪನ್ಯಾಸಕರಿಂದ ಆಂಗ್ಲ ಮತ್ತು ಕನ್ನಡ ಭಾಷೆಯಲ್ಲಿ ತರಬೇತಿ ನೀಡಲಾಗುವುದು.  ಈ ವಿಶೇಷ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಹಾಜರಾತಿ ಆ್ಯಪ್ ತೆಗೆದುಕೊಳ್ಳಲಾಗುತ್ತದೆ.  ನೊಂದಾಯಿತ 25 ಸಾವಿರ ವಿದ್ಯಾರ್ಥಿಗಳಿಗೆ ಕಿರುಪರೀಕ್ಷೆಗಳನ್ನು ನಡೆಸಿ ಅಂಕಗಳನ್ನು ನೀಡಲಾಗುತ್ತದೆ ಹಾಗೂ ರ್ಯಾಂಕ್ ಪಟ್ಟಿ ಮಾಡಿ ಜಿಲ್ಲಾವಾರು ಹಾಗೂ ರಾಜ್ಯ ಹಂತದಲ್ಲಿ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದರು.

ಪ್ರತಿ ಶನಿವಾರ ಸಂದೇಹ ಪರಿಹಾರಾತ್ಮಕ ಅವಧಿಗಳನ್ನು ನಡೆಸಲಾಗುವುದು. ಸೋಮವಾರದಿಂದ ಶುಕ್ರವಾರದವರೆಗಿನ ತರಗತಿಗಳಲ್ಲಿ ವಿದ್ಯಾರ್ಥಿಗಳಿಗೆ ಬರುವ ಸಂದೇಹಗಳನ್ನು ಆಯಾ ವಿಷಯ ಉಪನ್ಯಾಸಕರು ಸಂಗ್ರಹಿಸಿ ಸಂಸ್ಥೆಯ ಪೋರ್ಟಲ್ ಮೂಲಕ ಕಳುಹಿಸುವರು. ಆ ಸಂದೇಹಗಳನ್ನು ಪರಿಗಣಿಸಿ ವಿಷಯ ತಜ್ಞರು ಪರಿಹಾರ ನೀಡುತ್ತಾರೆ. ಸಂಸ್ಥೆಯ ಹಾಗೂ ಇಲಾಖೆಯ ಪೋರ್ಟಲ್‍ನಲ್ಲಿ Recorded Edited Version ಲಭ್ಯವಾಗುತ್ತದೆ ಎಂದರು.

ಸರ್ಕಾರ ಕೋಟ್ಯಾಂತರ ಹಣ ಖರ್ಚು ಮಾಡಿ ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಲು ಅನುಷ್ಠಾನಗೊಳಿಸಿರುವ ಈ ಯೋಜನೆಯ ಲಾಭವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು.  ಮುಂದಿನ ವರ್ಷದಲ್ಲಿ ರಾಜ್ಯ ಮಟ್ಟದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೂ ವಿಸ್ತರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಈ ಯೋಜನೆ ಜಾರಿಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದರು.

ಪೇಸ್ ಸಂಸ್ಥೆಯ ನಿರ್ದೇಶಕ ಪ್ರವೀಣ್ ತ್ಯಾಗಿ ಕಾರ್ಯಕ್ರಮದ ಪರಿಚಯ ಹಾಗೂ ಕಿರುಚಿತ್ರ ಪ್ರಾತ್ಯಕ್ಷತೆ ವಿವರಿಸಿದರು.

ಸಂವಾದದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಮಾತನಾಡಿ, ಈ ಯೋಜನೆ ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳಿಗೆ,  ಒಂಟಿ ಪೋಷಕರಿಗೆ ತುಂಬಾ ಅನುಕೂಲವಾಗಲಿದ್ದು, ಇದರ ಪ್ರಯೋಜನವನ್ನು ಪಡೆದುಕೊಂಡು ಉನ್ನತ ಶಿಕ್ಷಣ ಪಡೆಯುತ್ತೇವೆ. ಈ ಯೋಜನೆ ಅನುಷ್ಠಾನಗೊಳಿಸಿದ್ದಕ್ಕಾಗಿ ಸಚಿವರಿಗೆ ಧನ್ಯವಾದ ಅರ್ಪಿಸಿದರು.

ಉಪನ್ಯಾಸಕರು ಮಾತನಾಡಿ, ಈ ಯೋಜನೆಯಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶ. ಈ ತರಬೇತಿಯಿಂದ ಉತ್ತಮ ಫಲಿತಾಂಶ ದೊರಕಿಸಿಕೊಡಲು ಉಪನ್ಯಾಸಕರುಗಳಾದ ನಾವುಗಳು ಶ್ರಮಿಸುತ್ತೇವೆ ಎಂದರು.  

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ನಿರ್ದೇಶಕಿ ಸಿಂಧೂ ಬಿ.ರೂಪೇಶ್, ಆನ್‍ಲೈನ್‍ನಲ್ಲಿ 650 ಕಾಲೇಜಿನ 60 ಸಾವಿರ ವಿದ್ಯಾರ್ಥಿಗಳು ಹಾಗೂ ಸಂವಾದದಲ್ಲಿ ಸುಮಾರು 50 ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು