Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದಿನಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜನಾಕ್ರೋಶ ಯಾತ್ರೆ ಹೆಸರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಏಪ್ರಿಲ್ 7 ರಂದು ಸೋಮವಾರದಿಂದ ಬಿಜೆಪಿ ಎರಡನೇ ಹಂತದ ಹೋರಾಟ ಕೈಗೆತ್ತಿಕೊಂಡಿದೆ. ಸೋಮವಾರ ಬೆಳಗ್ಗೆ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮೂಲಕ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಜನಾಕ್ರೋಶ ಯಾತ್ರೆಗೆ ಚಾಲನೆ ನೀಡಲಿದ್ದಾರೆ.


ಸರ್ಕಾರದ ದರ ಏರಿಕೆ ನೀತಿ, ಭ್ರಷ್ಟಾಚಾರ, ಕಮಿಷನ್, ದುರಾಡಳಿತ, ಕಾನೂನು ಅವ್ಯವಸ್ಥೆ, ಮುಸ್ಲಿಂ ಓಲೈಕೆ ಖಂಡಿಸಿ ಜನಾಕ್ರೋಶ ಯಾತ್ರೆ ನಡೆಯಲಿದೆ.

ಏಪ್ರಿಲ್ 7ರಿಂದ 10ರ ವರೆಗೆ ಮೊದಲ ಹಂತದ ಜನಾಕ್ರೋಶ ಯಾತ್ರೆಯು ಮೈಸೂರು-ಚಾಮರಾಜನಗರ-ಮಂಡ್ಯ, ಹಾಸನ-ಕೊಡಗು-ಮಂಗಳೂರು, ಉಡುಪಿ-ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನಡೆಯಲಿದೆ.
ಏಪ್ರಿಲ್ 13 ರಿಂದ18ರ ವರೆಗೆ ಎರಡನೇ ಹಂತದ ಜನಾಕ್ರೋಶ ಯಾತ್ರೆಯು ಶಿವಮೊಗ್ಗ-ಉತ್ತರ ಕನ್ನಡ
, ಬೀದರ್-ಕಲಬುರಗಿ, ವಿಜಯಪುರ-ಬಾಗಲಕೋಟೆ, ಬೆಳಗಾವಿ-ಹುಬ್ಬಳ್ಳಿಗಳಲ್ಲಿ ನಡೆಯಲಿದೆ.

 ಏಪ್ರಿಲ್ 21 ರಿಂದ 24 ಮೂರನೇ ಹಂತದ ಯಾತ್ರೆ ಯಾದಗಿರಿ-ರಾಯಚೂರು, ಬಳ್ಳಾರಿ-ವಿಜಯನಗರ, ಕೊಪ್ಪಳ-ಗದಗ, ಹಾವೇರಿ-ದಾವಣಗೆರೆ ಜಿಲ್ಲೆಗಳಲ್ಲೂ, ಏಪ್ರಿಲ್ 27 ರಿಂದ ಮೇ 3 ರವರೆಗೆ ನಾಲ್ಕನೇ ಹಂತದ ಯಾತ್ರೆ ಚಿತ್ರದುರ್ಗ-ತುಮಕೂರು, ಚಿಕ್ಕಬಳ್ಳಾಪುರ-ಕೋಲಾರ, ಬೆಂಗಳೂರು-ಬೆಂಗಳೂರು ಗ್ರಾಮಾಂತರ-ರಾಮನಗರ ಜಿಲ್ಲೆಗಳಲ್ಲಿ ನಡೆಯಲಿದೆ.

ಆತ್ಮಹತ್ಯೆಯಲ್ಲ ಕೊಲೆ: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರದ್ದು ಆತ್ಮಹತ್ಯೆ ಅಲ್ಲ, ಅದೊಂದು ಕೊಲೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪ ಮಾಡಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, ಆರೋಪಿಗಳಾದ ಶಾಸಕರ ವಿರುದ್ಧ ಎಫ್ಐಆರ್ ದಾಖಲಾಗಿಲ್ಲವೆಂದು ಕಿಡಿಕಾರಿದರು. ಅಧಿಕಾರದ ದರ್ಪದಿಂದ ಕಾಂಗ್ರೆಸ್​ನವರು ಹೇಳಿಕೆ ಕೊಡುತ್ತಿದ್ದಾರೆ. ಈ ಪ್ರಕರಣದ ಹಿಂದೆ ಯಾವೆಲ್ಲ ದುಷ್ಟಶಕ್ತಿಗಳು ಇವೆ ಅಂತ ಎಲ್ಲರಿಗೂ ಗೊತ್ತಿದೆ. ಅವರಿಗೆ ಶಿಕ್ಷೆ ಆಗಲೇಬೇಕು. ನಾವು ಕಾನೂನು ಹೋರಾಟ ಮಾಡುತ್ತೇವೆ. ಕಾನೂನು ತಜ್ಞರ ಜತೆ ಮುಂದಿನ ಹೋರಾಟ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ವಿಜಯೇಂದ್ರ ಹೇಳಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ