Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಪೂರ್ಣ ಪ್ರಮಾಣದಲ್ಲಿ ಅನುದಾನ ಮರುಹಂಚಿಕೆ- ಸಿಎಂ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಾತಿ ಪ್ರಮಾಣ ಪತ್ರದ ಬಗ್ಗೆ ಇರುವ ಗೊಂದಲವನ್ನು ನಿವಾರಿಸಿ
, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು ಇಲಾಖಾ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಅವರು ಇಂದು ಪರಿಶಿಷ್ಟ ಪಂಗಡದ ಸಮುದಾಯಗಳ ಸಭೆ ನಡೆಸಲಾಗಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅವ್ಯವಹಾರದ ಹಿನ್ನಲೆಯಲ್ಲಿ ನಿಗಮಕ್ಕೆ ಅನುದಾನದ ಕೊರತೆಯಾಗದಂತೆ ನೋಡಿಕೊಳ್ಳುವುದು ಹಾಗೂ ಕೆಲವರು ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಪಡೆಯುತ್ತಿರುವುದಕ್ಕೂ ಸಭೆ ಗಮನ ನೀಡಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಈ ವರ್ಷದಲ್ಲಿ ನಿಗದಿಪಡಿಸಲಾಗಿರುವ ಅನುದಾನವನ್ನು ಸಂಪೂರ್ಣವಾಗಿ ಒದಗಿಸಲಾಗುವುದು. ನಿಗಮದಲ್ಲಿ ಸುಮಾರು 89.63 ಕೋಟಿ ರೂ.ಗಳ ಮೊತ್ತ ಅವ್ಯವಹಾರವಾಗಿದ್ದು, ಇದರಲ್ಲಿ 5 ಕೋಟಿ ರೂ.ಗಳನ್ನು ವಾಪಸ್ಸು ಪಡೆಯಲಾಗಿದೆ. ಉಳಿದ 84.63 ಕೋಟಿ ರೂ.ಗಳಲ್ಲಿ 71.54 ಕೋಟಿ ರೂ.ಗಳನ್ನು ವಸೂಲು ಮಾಡಲಾಗಿದೆ.

ಇನ್ನುಳಿದ ಸುಮಾರು 13 ಕೋಟಿಗಳ ಮೊತ್ತವನ್ನು ವಸೂಲು ಮಾಡಿಕೊಡುವುದಾಗಿ ಎಸ್ ಐ ಟಿ ತಿಳಿಸಿದೆ. ಈ ರೀತಿ ಒಟ್ಟು ಅವ್ಯವಹಾರವಾಗಿದ್ದ ಪೂರ್ಣ ಮೊತ್ತವನ್ನೂ ಸಹ ಮರುಪಡೆಯಲಾಗುತ್ತಿದೆ. ಈ ಮಧ್ಯೆ, ಪ್ರಕರಣ ನ್ಯಾಯಾಲಯದಲ್ಲಿದ್ದು ಮುಂಬರುವ ತೀರ್ಪಿನಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ ತಿಳಿಸಿದ್ದಾರೆ.

ಪರಿಶಿಷ್ಟ ಪಂಗಡ ಸಮುದಾಯಗಳ ಜೊತೆಗಿನ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಪ ಹೇಳಿಕೆ ನೀಡಿದ್ದಾರೆ.

ವಾಲ್ಮೀಕಿ ಸಮಾಜದ ಅಭಿವೃದ್ಧಿಯ ದೃಷ್ಟಿಯಿಂದ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಒದಗಿಸಲಾಗಿದ್ದ ಅನುದಾನವನ್ನು ಪೂರ್ಣಪ್ರಮಾಣದಲ್ಲಿ ಮರುಹಂಚಿಕೆ ಮಾಡಲಾಗುವುದು.

ಜೊತೆಗೆ ಜಾತಿ ಪ್ರಮಾಣಪತ್ರ ವಿತರಣೆಯಲ್ಲಿ ಉಂಟಾಗುತ್ತಿರುವ ಗೊಂದಲವನ್ನು ನಿವಾರಣೆ ಮಾಡಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ