Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಕಲಾವಿದರು, ಸಾಂಸ್ಕೃತಿಕ ಸಂಸ್ಥೆಗಳಿಗೆ ಧನಸಹಾಯ: ಅರ್ಜಿ ಆಹ್ವಾನ

Advertisement
Advertisement

 ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ 2026
27ನೇ ಸಾಲಿನ ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಧನಸಹಾಯಕ್ಕಾಗಿ ಅರ್ಹ ನೋಂದಾಯಿತ ಸಂಘ-ಸಂಸ್ಥೆಗಳು ಮತ್ತು ಕಲಾವಿದರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕ್ರಿಯಾತ್ಮಕ ಸಾಂಸ್ಕøತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳು, ಕಲಾವಿದರಿಗೆ ವಾದ್ಯ ಪರಿಕರ ಹಾಗೂ ವೇಷಭೂಷಣಗಳ ಖರೀದಿಗೆ ಸಹಾಯಧನ ಮತ್ತು ಚಿತ್ರಕಲೆ/ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಧನಸಹಾಯ ನೀಡಲಾಗುವುದು.

ಆಸಕ್ತರು ಜುಲೈ 22 ರಿಂದ ಆಗಸ್ಟ್ 20 ರವರೆಗೆ ಸೇವಾ ಸಿಂಧು ಫೋರ್ಟಲ್ (sevasindhu.karnataka.gov.in)  ಮೂಲಕ ಅರ್ಜಿ ಸಲ್ಲಿಸಬಹುದು. ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಹಾಗೂ ನೇರವಾಗಿ ಇಲಾಖೆಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಮಾರ್ಗದರ್ಶಿ ಸೂಚಿಗಳನ್ನು www.kannadasiri.karnataka.gov.in  ವೆಬ್‍ಸೈಟ್‍ನಲ್ಲಿ ಪರಿಶೀಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆಗಳಾದ 08024410547, 08022213530, 9986837037, 08022241325 ಅಥವಾ ಜಿಲ್ಲೆಯ ಸೇವಾ ಸಿಂಧು ವ್ಯವಸ್ಥಾಪಕರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ತಿಳಿಸಿದ್ದಾರೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.