Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತೆರಿಗೆ ಸಂಗ್ರಹ ಹೆಚ್ಚಿಸಲು ಗಮನ ಹರಿಸಿ- ಜಿ.ಪಂ.ಸಿಇಓ ಸೋಮಶೇಖರ್

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಗ್ರಾಮ ಪಂಚಾಯಿತಿ ತೆರಿಗೆ ವಸೂಲಾತಿ ಪ್ರಗತಿ ಕುಂಠಿತವಾಗಿದೆ. ಅಧಿಕಾರಿಗಳು ಬಗ್ಗೆ ಹೆಚ್ಚಿನ ಗಮನ ಹರಿಸಿ ನಿಗಧಿತ ಕಾಲಾವಧಿಯೊಳಗೆ ತೆರಿಗೆ ಸಂಗ್ರಹ ಹೆಚ್ಚಿಸಲು ಗಮನ ಹರಿಸುವಂತೆ ಜಿ.ಪಂ ಸಿಇಓ ಎಸ್.ಜೆ.ಸೋಮಶೇಖರ್ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಕಛೇರಿ ಮಿನಿ ಸಭಾಂಗಣದಲ್ಲಿ, ಮಂಗಳವಾರ ಮಹಾತ್ಮಗಾಂಧಿ ನರೇಗಾ, ಸ್ವಚ್ಛ ಭಾರತ್ ಮಿಷನ್, ಸಾಮಾಜಿಕ ಲೆಕ್ಕ ಪರಿಶೋಧನೆ ಹಾಗೂ ಪಂಚಾಯತ್ ರಾಜ್ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ ಅವರು ಮಾತನಾಡಿದರು.

ಮುಖ್ಯ ಲೆಕ್ಕಾಧಿಕಾರಿಗಳು ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ವಿಶೇಷ ಆಡಿಟ್ ನಡೆಸಬೇಕು. ನಿಯಮಿತವಾಗಿ ಗ್ರಾಮ ಸಭೆ ನಡೆಸಬೇಕು. ಅರ್ಹ ಫಲಾನುಭವಿಗಳಿಗೆ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ವೈಯಕ್ತಿಕ ಗೃಹ ಶೌಚಾಲಯಗಳ ಕಾರ್ಯಾದೇಶ ನೀಡಿ ಕೆ2 ತಂತ್ರಾಶದಲ್ಲಿ ಹಣ ಪಾವತಿಸಬೇಕು.

ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಕೈಗೊಂಡಿರುವ ಘನ ತ್ಯಾಜ್ಯ ನಿರ್ವಹಣಾ ಘಟಕಗಳ ಕಾಮಗಾರಿ, ಬೂದು ನೀರು ಕಾಮಗಾರಿ ಹಾಗೂ ಮಲ ತ್ಯಾಜ್ಯ ಸಂಸ್ಕರಣ ಘಟಕಗಳ ಕಾಮಗಾರಿಗಳ ತುರ್ತಾಗಿ ಪೂರ್ಣಗೊಳಿಸುವಂತೆ ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ತಾಕೀತು ಮಾಡಿದರು.

ನಂತರ 2025-26 ನೇ ಸಾಲಿನ ಕ್ರಿಯಾ ಯೋಜನೆ ತಯಾರಿಸಲು ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಸಭೆಗಳನ್ನು ನಡಸಿದ್ದು ಸದರಿ ಗ್ರಾಮ ಸಭೆಗಳ ನಡವಳಿ ಮತ್ತು ಫೋಟೋಗಳನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಲಾಗಿನ್ನಲ್ಲಿ ಇಂಧೀಕರಿಸಲು ಸೂಚಿಸಿದರು.

ಸಂದರ್ಭದಲ್ಲಿ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ, ಮುಖ್ಯ ಯೋಜನಾಧಿಕಾರಿ ಸಿ.ಎನ್.ಗಾಯಿತ್ರಿ, ಮುಖ್ಯ ಲೆಕ್ಕಾಧಿಕಾರಿ ಮಧು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ, ಹನುಮಂತಪ್ಪ, ಸತೀಶ್, ಸುನೀಲ್, ವಿಶ್ವನಾಥ್, ರವಿಕುಮಾರ್, ನರೇಗಾ & ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಸಂತೋಷ್ ಕುಮಾರ್, ಯಶವಂತ್, ರತ್ನಮಾಲ, ರೂಪಕುಮಾರಿ, ಶಿವಮೂರ್ತಿ, ಮಹೇಶ್, ನರೇಗಾ .ಡಿ.ಪಿ.ಸಿ ಮೋಹನ್, ಹೆಚ್.ಶಶಿಧರ್ ಜಿಲ್ಲಾ ಯೋಜನಾ ವ್ಯವಸ್ಥಾಪಕರು (-ಆಡಳಿತ) .ಡಿ.ಪಿ.ಎಂ ಸೈಯದಾ ಫಿಜಾ, ಈರಮ್ಮ, ಸ್ವಚ್ಛ ಭಾರತ್ ಮಿಷನ್ ಜಿಲ್ಲಾ ಸಮಾಲೋಚಕರಾದ ಬಿ.ಸಿ. ನಾಗರಾಜ್ (..ಸಿ), ಶಶಿಧರ್.ಹೆಚ್.ಆರ್ (ಎಂ..ಎಸ್), ಜಿಲ್ಲಾ ಪಂಚಾಯತ್ ಸಿಬ್ಬಂದಿ ಇದ್ದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ