Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಪಕ್ಷ ನಾಯಕರಿಂದ ಪ್ರಧಾನಿ ಹುದ್ದೆಯ ಆಫರ್: ಗಡ್ಕರಿ

Advertisement
ವಿಪಕ್ಷ ನಾಯಕರಿಂದ ಪ್ರಧಾನಿ ಹುದ್ದೆಯ ಆಫರ್: ಗಡ್ಕರಿ
ಚಂದ್ರವಳ್ಳಿ ನ್ಯೂಸ್, ನಾಗ್ಪುರ :
2024ರ ಲೋಕಸಭೆ ಚುನಾವಣೆಗೂ ಮುನ್ನ ವಿರೋಧ ಪಕ್ಷದ ಹಿರಿಯ ನಾಯಕರೊಬ್ಬರು ತಮಗೆ ಪ್ರಧಾನಿ ಹುದ್ದೆಯನ್ನು ನೀಡುವುದಾಗಿ ಆಮಿಷವೊಡ್ಡಿದ್ದರು ಎಂದು ಕೇಂದ್ರ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಆದರೆ, ಈ ಪ್ರಸ್ತಾಪವು ತನ್ನ ನಂಬಿಕೆಗೆ ವಿರುದ್ಧವಾಗಿದೆ ಎಂದು ತಾನು ತಿರಸ್ಕರಿಸಿದ್ದಾಗಿ ಅವರು ಹೇಳಿದ್ದಾರೆ.

ನಾಗ್ಪುರದಲ್ಲಿ ನಡೆದ ಪತ್ರಿಕೋದ್ಯಮ ಪ್ರಶಸ್ತಿ ಸಮಾರಂಭದಲ್ಲಿ ಮಾತನಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, “ವಿರೋಧ ಪಕ್ಷದ ಹಿರಿಯ ನಾಯಕರೊಬ್ಬರು ಪ್ರಧಾನಿ ಹುದ್ದೆಯ ಪ್ರಸ್ತಾಪದೊಂದಿಗೆ ನನ್ನನ್ನು ಸಂಪರ್ಕಿಸಿದರು. ನಾನು ಒಪ್ಪಿಗೆ ನೀಡಿದರೆ, ಅವರು ನನನಗೆ ಪ್ರಧಾನಿ ಹುದ್ದೆ ಸಿಗುವಂತೆ ಕೆಲಸ ಮಾಡುವುದಾಗಿ ನನಗೆ ತಿಳಿಸಿದ್ದರು” ಎಂದು ಹೇಳಿದ್ದಾರೆ.

“ನಾನು ತಕ್ಷಣ ಈ ಪ್ರಸ್ತಾಪವನ್ನು ತಿರಸ್ಕರಿಸಿದೆ. ನಾನು ಆ ನಾಯಕನಿಗೆ ಸ್ಪಷ್ಟವಾಗಿ, ನಾನು ತತ್ವ ಸಿದ್ಧಾಂತವನ್ನು ನಂಬುವ ವ್ಯಕ್ತಿ ಎಂದು ಹೇಳಿದ್ದೆ. ನಾನು ಯಾವಾಗಲೂ ತತ್ವ ಸಿದ್ದಾತಗಳ ಮೇಲೆ ಕೆಲಸ ಮಾಡಿದ್ದೇನೆ ಮತ್ತು ಬದುಕಿದ್ದೇನೆ. ನಾನು ಎಂದಿಗೂ ದೇಶದ ಪ್ರಧಾನಿಯಾಗುವ ಮಹತ್ವಾಕಾಂಕ್ಷೆಯನ್ನು ಹೊಂದಿರಲಿಲ್ಲ ಎಂದು ನಾನು ಸ್ಪಷ್ಟಪಡಿಸಿದೆ. ಆದ್ದರಿಂದ, ಈ ಯಾವುದೇ ಪ್ರಸ್ತಾಪವನ್ನು ಒಪ್ಪಿಕೊಳ್ಳುವ ಪ್ರಶ್ನೆಯೇ ಇಲ್ಲ. ನಾನು ಪಾಲನೆ ಮಾಡಿಕೊಂಡು ಬರುತ್ತಿರುವ ತತ್ವ ಸಿದ್ದಾಂತ ಗಳ ಮೇಲೆ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಅವರಿಗೆ ಹೇಳಿದೆ” ಎಂದು ಅವರು ಹೇಳಿದ್ದಾರೆ.

ತಮಗೆ ಪ್ರಧಾನಿ ಹುದ್ದೆಯ ಭರವಸೆ ನೀಡಿದ ವಿಪಕ್ಷ ನಾಯಕ ಯಾರು ಎಂಬ ಬಗ್ಗೆ ಗಡ್ಕರಿ ಅವರು ಹೇಳಿಲ್ಲ. ಜೊತೆಗೆ ಈ ಘಟನೆಯ ಬಗ್ಗೆ ಹೆಚ್ಚಿನ ವಿವರಗಳನ್ನು ಅವರು ಹಂಚಿಕೊಳ್ಳಲಿಲ್ಲ. ಆದರೆ ಬಿಜೆಪಿಯ ಅನೇಕ ನಾಯಕರಿಗೆ ಇದು ಆಶ್ಚರ್ಯವನ್ನುಂಟು ಮಾಡಿದೆ ಎಂದು ವರದಿಯಾಗಿದೆ.

ಗಡ್ಕರಿ ಅವರು ಮೂಲ ಆರೆಸ್ಸೆಸ್-ಬಿಜೆಪಿಗನಾಗಿದ್ದರೂ, ಅವರಿಗೆ ಕಾಂಗ್ರೆಸ್ ಸೇರಿದಂತೆ ಎಲ್ಲಾ ಪಕ್ಷಗಳ ನಾಯಕರೊಂದಿಗೆ ಸೌಹಾರ್ದ ಸಂಬಂಧವಿದೆ. ಮಹಾರಾಷ್ಟ್ರದಲ್ಲಿ ಶಿವಸೇನಾ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಮತ್ತು ಎನ್‌ಸಿಪಿ (ಎಸ್‌ಪಿ) ಅಧ್ಯಕ್ಷ ಶರದ್ ಪವಾರ್ ಇಬ್ಬರೊಂದಿಗೆ ಉತ್ತಮ ಅವರು ಸಂಬಂಧ ಹೊಂದಿದ್ದಾರೆ.

ಸಾಮಾನ್ಯವಾಗಿ ಪವಾರ್ ಮತ್ತು ಗಡ್ಕರಿ, ಎರಡು ಸೈದ್ಧಾಂತಿಕವಾಗಿ ವಿಭಿನ್ನ ಪಕ್ಷಗಳನ್ನು ಪ್ರತಿನಿಧಿಸುತ್ತಿದ್ದರೂ, ಸಾಮಾಜಿಕ ಕಾರ್ಯಕ್ರಮಗಳಲ್ಲಿ ವೇದಿಕೆ ಹಂಚಿಕೊಂಡು ಹಲವು ಭಾರಿ ಪರಸ್ಪರ ಹೊಗಳಿಕೊಂಡಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ