Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಡವರಿಗೆ ಚಳಿಗಾಲದ ಹೊದಿಕೆ ವಿತರಿಸಿದ ಗಣೇಶ್

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಶಿಕ್ಷಣಕ್ಕಾಗಿ ಸರ್ಕಾರ ಸವಲತ್ತುಗಳನ್ನು ನೀಡುತ್ತಿದೆ. ಎಲ್ಲವನ್ನು ಬಳಸಿಕೊಂಡು ಮಕ್ಕಳಿಗೆ ಶಿಕ್ಷಣ ಕೊಡಿಸಿ ಎಂದು ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಗೌರವಾಧ್ಯಕ್ಷ ಹಿರಿಯ ನ್ಯಾಯವಾದಿ ಬಿ.ಕೆ.ರಹಮತ್‌ವುಲ್ಲಾ ಕೊಳಗೇರಿ ಪ್ರದೇಶದ ಮಹಿಳೆಯರಿಗೆ ಕರೆ ನೀಡಿದರು.


ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾ ಸಮಿತಿಯಿಂದ ಮಂಗಳವಾರ ಪತ್ರಕರ್ತರ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೊಳಗೇರಿ ನಿವಾಸಿಗಳ ಸಮಾವೇಶ ಹಾಗೂ ಬಡವರಿಗೆ ಹೊದಿಕೆ ವಿತರಣಾ ಕಾರ್ಯಕ್ರಮ ಉದ್ಗಾಟಿಸಿ ಮಾತನಾಡಿದರು.

ಚಳಿಗಾಲದಲ್ಲಿ ಬಡವರಿಗೆ ಹೊದಿಕೆ ಅತ್ಯವಶ್ಯಕವಾಗಿ ಬೇಕು. ಕೊಳಗೇರಿ ನಿವಾಸಿಗಳ ಹಾಗೂ ಬಡವರ ಮೂಲಭೂತ ಸೌಲಭ್ಯಕ್ಕಾಗಿ ಗಣೇಶ್ ಮೊದಲಿನಿಂದಲೂ ಹೋರಾಟ ಮಾಡಿಕೊಂಡು ಬರುತ್ತಿದ್ದಾರೆ. ಕೊಳಗೇರಿಗಳ ಬಗ್ಗೆ ಅಪಾರವಾದ ಕಾಳಜಿಯಿದೆ. ಇಂತಹ ಪುಣ್ಯದ ಕೆಲಸಕ್ಕೆ ದಾನಿಗಳು ಉದಾರ ಮನಸ್ಸಿನಿಂದ ನೆರವು ನೀಡಬೇಕು ಎಂದರು.

ಬಡತನವೆಂಬ ಕಾರಣಕ್ಕೆ ಚಿಕ್ಕ ಮಕ್ಕಳನ್ನು ದುಡಿಮೆಗೆ ಕಳಿಸುವ ಬದಲು ಶಾಲೆಗೆ ಕಳಿಸಿ ಶಿಕ್ಷಣವಂತರನ್ನಾಗಿಸಿ. ಅಪ್ರಾಪ್ತ ಹೆಣ್ಣು ಮಕ್ಕಳಿಗೆ ವಿವಾಹ ಮಾಡಿದರೆ ತಂದೆ-ತಾಯಿಗಳಿಗೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಕೊಳಗೇರಿ ನಿವಾಸಿಗಳನ್ನು ಜಾಗೃತಿಗೊಳಿಸಿದರು.

ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಮಂಜಪ್ಪ ಮಾತನಾಡಿ ಬಡವರು ಹಾಗೂ ಕೊಳಗೇರಿಗಳ ಪರವಾಗಿ ಹಿಂದಿನಿಂದಲೂ ಹೋರಾಟ ಮಾಡಿಕೊಂಡು ಬರುತ್ತಿರುವ ಗಣೇಶ್‌ಗೆ ನೆಲೆಯಿಲ್ಲದಂತಾಗಿರುವುದು ನೋವಿನ ಸಂಗತಿ. ಹಾಗಾಗಿ ಕೊಳಗೇರಿ ನಿವಾಸಿಗಳು ಗಣೇಶ್‌ಗೆ ಬೆಂಬಲವಾಗಿ ನಿಲ್ಲಬೇಕು ಎಂದು ಹೇಳಿದರು.

ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ನಸ್ರುಲ್ಲಾ ಮಾತನಾಡುತ್ತ ಸರ್ಕಾರದಿಂದ ಕೊಳಗೇರಿಗಳಿಗೆ ಸಿಗಬೇಕಾದ ಸೌಲಭ್ಯಗಳನ್ನು ಕೊಡಿಸುವಲ್ಲಿ ಗಣೇಶ್‌ರವರ ಹೋರಾಟ ನಿರಂತರವಾಗಿರುತ್ತದೆ. ಮಕ್ಕಳನ್ನು ಶಾಲೆಗೆ ಕಳಿಸಿ ಎಂದು ಕೊಳಗೇರಿಗಳಿಗೆ ಅರಿವು ಮೂಡಿಸಿದರು.

ಉದ್ಯಮಿ ಸೈಟ್ ಬಾಬಣ್ಣ, ರಾಜು ಟೈರ್‍ಸ್ ಮಾಲೀಕ ಅಲೆಕ್ಸಾಂಡರ್, ಜಿಲ್ಲಾ ಬಡಗಿ ಕೆಲಸಗಾರರ ಸಂಘದ ಅಧ್ಯಕ್ಷ ಎ.ಜಾಕೀರ್‌ಹುಸೇನ್, ಕಾಂಗ್ರೆಸ್ ಮುಖಂಡ ಹೆಚ್.ಎಸ್.ಖಾನ್, ಕೆ.ಕೆ.ಎನ್.ಎಸ್.ಎಸ್.ಜಿಲ್ಲಾ ಸಮಿತಿ ಅಧ್ಯಕ್ಷ ಗಣೇಶ್, ಕರುನಾಡ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಸೈಯದ್ ಇಸ್ಮಾಯಿಲ್, ಜಾನಪದ ಜಾಗೃತಿ ಪರಿಷತ್ ಅಧ್ಯಕ್ಷ ಹೆಚ್.ಪ್ಯಾರೆಜಾನ್ ವೇದಿಕೆಯಲ್ಲಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ