ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ತೂಬಗೆರೆ ಗ್ರಾಮದ ಕುರುಬರ ಬೀದಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಸಾಂಪ್ರದಾಯಿಕ ಎತ್ತಿನ ಬಂಡಿ ಹಾಗೂ ನಾದಸ್ವರದೊಂದಿಗೆ ನಡೆಯಿತು. ಗಣೇಶ ಮೂರ್ತಿಯನ್ನು ಅಲಂಕರಿಸಿ ಎತ್ತಿನ ಬಂಡಿಯಲ್ಲಿ ಕೊಂಡೊಯ್ಯಲಾಯಿತು.
ಅಧುನಿಕತೆಯ ಇತಿಹಾಸದಲ್ಲಿ ತಂತ್ರಜ್ಞಾನ, ವಿಜ್ಞಾನ, ಆರ್ಥಿಕತೆ ಮತ್ತು ಸಾಮಾಜಿಕ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆಗಳನ್ನು ತಂದ ಅತ್ಯಂತ ಪ್ರಮುಖ ಕಾಲಘಟ್ಟವಾಗಿದೆ. ಹಳೆಯ ಸಾಂಪ್ರದಾಯಿಕ ಪದ್ಧತಿಗಳಿಂದ ಹೊರಬಂದು, ವೈಜ್ಞಾನಿಕ ಆವಿಷ್ಕಾರಗಳು ಮತ್ತು ಹೊಸ ಆಲೋಚನೆಗಳತ್ತ ಮಾನವ ಹೆಜ್ಜೆ ಇಟ್ಟ ಸಮಯದಲ್ಲಿ
ಎತ್ತಿನ ಗಾಡಿ ನಾದಸ್ವರದ ಸೊಬಗಿನೊಂದಿಗೆ ಕಾಲ್ನಡಿಗೆಯಲ್ಲಿ ನಡೆದ ಮೆರವಣಿಗೆಯಲ್ಲಿ ಭಕ್ತರು, ಮಹಿಳೆಯರು ಹಾಗೂ ಮಕ್ಕಳು ಭಾಗವಹಿಸಿ ಭಕ್ತಿ ಪೂರ್ವಕವಾಗಿ ವಿಧಿವಿಧಾನಗಳೊಂದಿಗೆ ಗಣೇಶ ಮೂರ್ತಿಯ ವಿಸರ್ಜನೆ ನೆರವೇರಿಸಲಾಯಿತು.




