Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಕೃಷ್ಣಾ ನ್ಯಾಯಾಧೀಕರಣದ ಗೆಜೆಟ್ ಅಧಿಸೂಚನೆ ಹೊರಡಿಸಿ:ಸಿದ್ದರಾಮಯ್ಯ

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರದ ಜಲಶಕ್ತಿ ಸಚಿವರು ಮೇ 7 ರಂದು ಕೃಷ್ಣಾ ಕಣಿವೆಯ  ಸಭೆಯನ್ನು ಕರೆದಿದ್ದು
, ಸಭೆಯಲ್ಲಿ ಕೂಡಲೇ ಅಧಿಸೂಚನೆ ಹೊರಡಿಸಲು ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಸಭೆಗೆ ಪೂರಕವಾಗಿ ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವ  ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವರು, ಕಾನೂನು ತಜ್ಞರು ಹಾಗೂ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಲಾಯಿತು. ಸಭೆಯಲ್ಲಿ  ರಾಜ್ಯದ  ನಿಲುವು ಏನಿರಬೇಕೆಂದು ಚರ್ಚಿಸಲಾಗಿದೆ ಎಂದರು.

ಕೃಷ್ಣಾ ಜಲವಿವಾದ ನ್ಯಾಯಮಂಡಳಿ -2  ದಿನಾಂಕ 30-12- 2010 ರಲ್ಲಿ  ತೀರ್ಪು ನೀಡಿದ ನಂತರ  2013 ರಲ್ಲಿ ಅಧಿಸೂಚನೆ  ಹೊರಡಿಸಲಾಗಿತ್ತು.  ತದನಂತರ ಈವರೆಗೆ ಕೇಂದ್ರ ಸರ್ಕಾರ ಯಾವುದೇ ಅಧಿಸೂಚನೆ ಹೊರಡಿಸಿಲ್ಲ. ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇಂದ್ರದ ನೀರಾವರಿ ಸಚಿವರನ್ನು ಭೇಟಿ ಮಾಡಿ ಒತ್ತಾಯಿಸಿದ ನಂತರ ಸಭೆಯನ್ನು ಕರೆಯಲಾಗಿದೆ.

ಎರಡನೇ ನ್ಯಾಯಾಧಿಕರಣದ ಆದೇಶದಲ್ಲಿ 173 ಟಿ.ಎಂ.ಸಿ ನೀರನ್ನು ಬಳಸಿಕೊಳ್ಳಲು ಸೂಚಿಸಿದೆ. 519 ಮೀಟರ್ ಗಳಿಂದ 524 ಮೀಟರ್ ಗಳಿಗೆ ಅಣೆಕಟ್ಟಿನ ಎತ್ತರವನ್ನು  ಹೆಚ್ಚಿಸಿದರೆ ಕರ್ನಾಟಕಕ್ಕೆ ಹಂಚಿಕೆ ಮಾಡಿರುವ ನೀರನ್ನು ಬಳಸಿಕೊಳ್ಳಲು ಸಾಧ್ಯವಾಗುತ್ತದೆ. ಅದಕ್ಕಾಗಿ ಗೆಜೆಟ್ ಅಧಿಸೂಚನೆ ಹೊರಡಿಸಬೇಕು.

ಸಭೆಯಲ್ಲಿಯೂ ಈ ಬಗ್ಗೆ ಒತ್ತಾಯಿಸಲಾಗುವುದು ಎಂದ ಮುಖ್ಯಮಂತ್ರಿಗಳು ತೆಲಂಗಾಣ  ಮತ್ತು ಆಂಧ್ರ ಪ್ರದೇಶ ಕೂಡ ಅರ್ಜಿ ಹಾಕಿಕೊಂಡಿದೆ. ಅವರು ತಮ್ಮ ಪಾಲಿಗೆ ಹಂಚಿಕೆಯಾಗಿರುವದನ್ನು ಬಳಸಿಕೊಳ್ಳಲಿ. ಈ ಬಗ್ಗೆ ನಾವು ಒತ್ತಾಯ ಮಾಡಿದ್ದು, ಸರ್ವೋಚ್ಛ ನ್ಯಾಯಾಲಯದಿಂದ ಯಾವುದೇ ಮಧ್ಯಂತರ ಆದೇಶ ಹೊರಡಿಸದ ಕಾರಣ 524 ಮೀಟರ್‌ಗಳಿಗೆ ಹೆಚ್ಚಿಸುವ ಕೆಲಸವನ್ನು ಮಾಡುತ್ತೇವೆ ಎಂದರು.

ಕೃಷ್ಣಾ ನ್ಯಾಯಾಧೀಕರಣ-2 ಗಜೆಟ್ ಅಧಿಸೂಚನೆ ಕುರಿತು ಚರ್ಚಿಸಲು ಕೇಂದ್ರ ಜಲಶಕ್ತಿ ಸಚಿವರು ಕರೆದಿರುವ ಕಣಿವೆ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಭೆಗೆ ಪೂರ್ವಭಾವಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾವೇರಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು.



ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಆರ್.ಬಿ.ತಿಮ್ಮಾಪುರ್, ಶರಣಬಸಪ್ಪ ಗೌಡ ದರ್ಶನಾಪುರ, ಮಹಾದೇವಪ್ಪ, ಶಿವಾನಂದ ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್ನ್ಯಾಯವಾದಿ ಮೋಹನ್ ಕಾತರ್ಕಿ ಮತ್ತಿತರರು ಉಪಸ್ಥಿತರಿದ್ದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು