ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯ ಕಾಲೇಜಿನ ಕಟ್ಟಡದಿಂದ ಬಿದ್ದು ಬಿ. ಟೆಕ್ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಮೃತ ವಿದ್ಯಾರ್ಥಿನಿಯನ್ನು ಆಂಧ್ರಪ್ರದೇಶ ಮೂಲದ ವರ್ಷಿತಾ (20) ಎಂದು ಗುರುತಿಸಲಾಗಿದೆ. ಈಕೆ ಗೀತಂ ವಿಶ್ವವಿದ್ಯಾಲಯದಲ್ಲಿ ವರ್ಷಿತಾ ಮೂರನೇ ವರ್ಷದ ಬಿ. ಟೆಕ್ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು ಇದೆ. ಕಾಲೇಜಿನ ಹಾಸ್ಟಲ್ ನಲ್ಲಿ ತಂಗಿದ್ದ ವಿದ್ಯಾರ್ಥಿನಿ ತಡರಾತ್ರಿ.6ನೇ ಮಹಡಿ ಕಟ್ಟಡದಿಂದ ಹಾರಿ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.
ಸುದ್ದಿ ತಿಳಿದ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿ ಆಂಧ್ರಪ್ರದೇಶದಲ್ಲಿರುವ ಆಕೆಯ ಪೋಷಕರಿಗೆ ವಿಷಯ ತಿಳಿಸಿದ್ದಾರೆ.
ಈ ವಿದ್ಯಾರ್ಥಿನಿ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿ ದ್ದಾರೆಂಬ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ಕೈಗೊಂಡಿದ್ದಾರೆ.
ಮೃತ ವರ್ಷಿತಾ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗುತ್ತಿದೆ. ಈ ಬಗ್ಗೆಯೂ ಪೊಲೀಸರು ಮಾಹಿತಿಗಳನ್ನು ಕಲೆಹಾಕುತ್ತಿದ್ದಾರೆ.




