Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ದಸರೆಯಲ್ಲಿ ಘಜನಿ ಮಹಮದ್ ಸಂಸ್ಕೃತಿ ಮೆರೆದ ಕಾಂಗ್ರೆಸ್ ಸರ್ಕಾರ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
 “ದಸರೆಯ ಮೊದಲ ದಿನವೇ ಘಜನಿ ಮಹಮದ್ ಸಂಸ್ಕೃತಿ ಮೆರೆದ ಕಾಂಗ್ರೆಸ್ ಸರ್ಕಾರ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.

ಅವರು ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ, ಕಾಂಗ್ರೆಸ್ ಸರ್ಕಾರ ಹಿಂದೂ ದೇವಾಲಯಗಳನ್ನು ಧ್ವಂಸ ಗೊಳಿಸಿದ ಕುಖ್ಯಾತಿಯ ಘಜ್ನಿ ಮಹಮದ್ ನ ಸಂಸ್ಕೃತಿಯನ್ನು ನಾಡ ಹಬ್ಬ ದಸರೆಯ ಸಂದರ್ಭದಲ್ಲಿ ಮೆರೆದು ಕನ್ನಡ ನಾಡಿನ ಮಹನೀಯರನ್ನು ಅವಮಾನಿಸಿದೆ, ಇದು ನಾಡಹಬ್ಬಕ್ಕೆ ಬಳಿದ ಕಪ್ಪುಮಸಿಯಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಹಿಂದೆ ಕರ್ನಾಟಕದ ಸಾಂಸ್ಕೃತಿಕ ವೈಭವವನ್ನು ಪ್ರತಿಬಿಂಬಿಸುವ ಒಂದು ಭಾಗವಾಗಿರುವ ದಸರಾ ವಸ್ತು ಪ್ರದರ್ಶನದ ಆವರಣದಲ್ಲಿ ನಾಡಿನ ಕಲೆ, ಸಂಸ್ಕೃತಿಯ ವೈಭವವನ್ನು ಸಾರುವ ಬೃಹತ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿತ್ತು. ಇದನ್ನು ಆಸ್ವಾದಿಸಲು ಬರುವ ಪ್ರೇಕ್ಷಕ ವೃಂದಕ್ಕೆ ಕನ್ನಡ ನಾಡು,ನುಡಿ, ಪರಂಪರೆಗೆ ಮಹಾನ್ ಕೊಡುಗೆ ಕೊಟ್ಟ ಮಹನೀಯರನ್ನು ಸ್ಮರಿಸುವ ನಾಮಫಲಕಗಳನ್ನು ಅಳವಡಿಸಲಾಗುತ್ತಿತ್ತು ಎಂದು ವಿಜಯೇಂದ್ರ ತಿಳಿಸಿದ್ದಾರೆ.

ಪುರಂದರದಾಸರು, ಕನಕದಾಸರು, ದ.ರಾ ಬೇಂದ್ರೆ, ಕುವೆಂಪು, ಡಾ.ರಾಜ್ ಕುಮಾರ್, ವಿ.ಕೃ ಗೋಕಾಕ್, ಟಿ.ಎನ್. ಬಾಲಕೃಷ್ಣ, ಸಂಗೀತ ದಿಗ್ಗಜರುಗಳಾದ ವಾಸುದೇವಾಚಾರ್ಯ, ಪಿಟೀಲು ಚೌಡಯ್ಯ ಇಂತಹ ಅನೇಕ ಮಹನೀಯರ ನಾಮಫಲಕಗಳನ್ನು ಅಳವಡಿಸಿ ವಸ್ತು ಪ್ರದರ್ಶನಕ್ಕೆ ಬರುವವರಿಗೆ ಅವರನ್ನು ಸ್ಮರಿಸಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿತ್ತು.

ಮಾಜಿ ಮೇಯರ್ ಅಯೂಬ್ ಖಾನ್ ಅವರನ್ನು ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾಗಿ ಕಾಂಗ್ರೆಸ್ ಸರ್ಕಾರ ಇತ್ತೀಚೆಗಷ್ಟೇ ನೇಮಿಸಿದ್ದು ಇದೀಗ ನಾಡಹಬ್ಬ ದಸರೆಯ ನವರಾತ್ರಿಯ ಆರಂಭದ ದಿನವೇ ನಮ್ಮ ಪರಂಪರೆ, ಸಂಸ್ಕೃತಿ ಹಾಗೂ ಸಾಹಿತ್ಯಕ್ಕೆ ಮಹಾನ್ ಕೊಡುಗೆ ಕೊಟ್ಟ ಮಹಾನ್ ಸಾಧಕ ಮಹನೀಯರುಗಳ ಸ್ಮರಿಸುವ ಫಲಕಗಳನ್ನೆಲ್ಲ ಕಿತ್ತೆಸೆದು ಘಜ್ನಿ ಸಂಸ್ಕೃತಿಯನ್ನು ಮೆರೆಸಲಾಗಿದೆ ಎಂದು ಅವರು ದೂರಿದ್ದಾರೆ.

ಈ ಕೂಡಲೇ ಇದ್ದ ಸ್ಥಳದಲ್ಲೇ ನಾಮಫಲಕಗಳನ್ನು ಅಳವಡಿಸಿ ರಾಜ್ಯ ಸರ್ಕಾರ ನಾಡಿನ ಜನತೆಯ ಕ್ಷಮೆ ಯಾಚಿಸಬೇಕು. ಸ್ವತಃ ಮುಖ್ಯಮಂತ್ರಿಗಳ ತವರು ಜಿಲ್ಲೆ ಹಾಗೂ ಅವರ ನೆರಳಿನಲ್ಲೇ ನಡೆದಿರುವ ದುಷ್ಕೃತ್ಯದ ಹೊಣೆ ಹೊರಬೇಕು ಹಾಗೂ ಜನರ ಕ್ಷಮೆಯಾಚಿಸಬೇಕು ಎಂದು ವಿಜಯೇಂದ್ರ ಒತ್ತಾಯಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ