Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕುರುಬ ಸಮಾಜಕ್ಕೆ ಕನಿಷ್ಠ 5 ಮಂದಿಗೆ ಸಚಿವ ನೀಡಿ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : 
ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ನೀಡಿರುವುದು ಕೇವಲ ಕುರುಬರಿಗಷ್ಟೆ ಅಲ್ಲ. ಇಡಿ ಅಹಿಂದ ವರ್ಗಕ್ಕೆ ನೋವುಂಟಾಗಿದೆ ಎಂದು ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಟಿ.ಜಗದೀಶ್ ಬೇಸರ ವ್ಯಕ್ತಪಡಿಸಿದರು.

ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕುರಿ ಕಾಯುತ್ತಿದ್ದ ಹುಡುಗ ರಾಜ್ಯದ ಮುಖ್ಯಮಂತ್ರಿಯಾಗುವವರೆಗೆ ಬೆಳೆದಿದ್ದಾರೆಂದರೆ

Advertisement

ಕಮ್ಮಿ ಸಾಧನೆಯಲ್ಲ. ಅಹಿಂದ ಸಂಘಟಕ ಸಿದ್ದರಾಮಯ್ಯ ಕಾಂಗ್ರೆಸ್‌ಗೆ ಬಂದಾಗ ವರಿಷ್ಟರು ಸ್ವಾಗತಿಸಿ ಎರಡು ಬಾರಿ ವಿರೋಧ ಪಕ್ಷದ ನಾಯಕನನ್ನಾಗಿ ಮಾಡಿದರು. ಎರಡನೆ ಬಾರಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಬಡವರು, ದೀನ ದಲಿತರು, ಶೋಷಿತರು, ಧ್ವನಿಯಿಲ್ಲದವರಿಗೆ ಶಕ್ತಿ ತುಂಬಿದರು. ವರಿಷ್ಟರ ಸೂಚನೆಯಂತೆ ರಾಜಿನಾಮೆ ನೀಡಿರುವುದು ನಮಗೆಲ್ಲಾ ನೋವಾಗಿದ್ದರು. ಮತ್ತೊಂದು ಕಡೆ ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದನ್ನು ನಾವುಗಳು ಸ್ವಾಗತಿಸುತ್ತೇವೆಂದು ತಿಳಿಸಿದರು.

ಮೂರನೆ ಅತಿ ದೊಡ್ಡ ಸಮುದಾಯ ನಮ್ಮದು. ಜೆಡಿಎಸ್.ನಲ್ಲಿ ನಮಗೆ ಅವಕಾಶ ಕಡಿಮೆಯಿದೆ. ವಿಧಾನಸಭೆ, ವಿಧಾನಪರಿಷತ್, ಲೋಕಸಭೆ, ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಸಮಾಜಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು. ಜೊತೆಗೆ ರಾಜ್ಯದಲ್ಲಿ ಎರಡನೆ ಅವಧಿಯ ನಿಗಮ ಮಂಡಳಿಗಳ ನೇಮಕದಲ್ಲಿ ನಮ್ಮ ಜನಾಂಗಕ್ಕೆ ಒತ್ತು ಕೊಡಬೇಕು. ನಾಲ್ಕು ಬಾರಿ ಶಾಸಕರಾಗಿರುವ ಬಿ.ಜಿ.ಗೋವಿಂದಪ್ಪನವರನ್ನು ರಾಜ್ಯ ಸಚಿವ ಸಂಪುಟದಲ್ಲಿ ಮಂತ್ರಿಯನ್ನಾಗಿ ಮಾಡಬೇಕು. ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಇವರುಗಳಿಗೂ ಸಚಿವ ಸ್ಥಾನ ಕೊಡಬೇಕೆಂದು ವರಿಷ್ಟರನ್ನು ಒತ್ತಾಯಿಸಿದರು.

ಡಿ.ಕೆ.ಶಿವಕುಮಾರ್‌ರವರ ಮಂತ್ರಿ ಮಂಡಲದಲ್ಲಿ ಕುರಿಬರಿಗೆ ಐದು ಸಚಿವ ಸ್ಥಾನ ಸಿಗಬೇಕು. ಏಳು ವಿಧಾನಪರಿಷತ್ ಸ್ಥಾನ ಖಾಲಿಯಾಗುತ್ತಿದೆ. ರಾಜ್ಯಸಭೆಗೂ ನಡೆಯುವ ಚುನಾವಣೆಯಲ್ಲಿ ಕುರುಬರಿಗೆ ಹೆಚ್ಚಿನ ಪ್ರಾಧಾನ್ಯತೆ ಕೊಡಬೇಕೆಂದು ಬಿಜೆಪಿ. ಜೆಡಿಎಸ್.ನವರಿಗೂ ಆಗ್ರಹಿಸಿದ ಬಿ.ಟಿ.ಜಗದೀಶ್, ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ ಕುರುಬ ಸಮುದಾಯದ ಸಮೀಕ್ಷೆಯನ್ನು ಸಿದ್ದರಾಮಯ್ಯನವರು ಸ್ವೀಕಾರ ಮಾಡಿರುವುದನ್ನು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ಅಂಗೀಕರಿಸಿ ಯಥಾವತ್ತಾಗಿ ಜಾರಿಗೊಳಿಸಬೇಕು. ಇದರಿಂದ ಹಿಂದುಳಿದ ೧೦೪ ಜಾತಿಗಳಿಗೆ ಅನುಕೂಲವಾಗಲಿದೆ ಎಂದರು.

ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಶ್ರೀರಾಂ ಮಾತನಾಡಿ ನೂತನವಾಗಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ಓಬಿಸಿ. ಪರಿಶಿಷ್ಟ ಜಾತಿ

ಪರಿಶಿಷ್ಟ ವರ್ಗದವರನ್ನು ಸಮಾನವಾಗಿ ತೆಗೆದುಕೊಂಡು ಹೋಗಬೇಕು. ಜಿಲ್ಲೆಯ ನಾಲ್ವರು ಶಾಸಕರುಗಳಿಗೆ ಸಚಿವ ಸ್ಥಾನ ಸಿಗಬೇಕು. ತಳಮಟ್ಟದ ಕುರುಬ ಜನಾಂಗವನ್ನು ನಿಮ್ಮ ಜೊತೆ ವಿಶ್ವಾಸದಲ್ಲಿಟ್ಟುಕೊಂಡು ಹೆಚ್ಚಿನ ಸ್ಥಾನಮಾನ ಕಲ್ಪಿಸುವಂತೆ ಮನವಿ ಮಾಡಿದರು.

ಜಿಲ್ಲಾ ಕುರುಬರ ಸಂಘದ ಗೌರವಾಧ್ಯಕ್ಷ ಹೆಚ್.ಮಂಜಪ್ಪ ಮಾತನಾಡುತ್ತ ಚೆಕ್‌ಡ್ಯಾಂಗಳ ರಾಜ ಎಂದೆ ಪ್ರಸಿದ್ದಿಯಾಗಿರುವ ಹೊಸದುರ್ಗದ ಹಿರಿಯ ಶಾಸಕ

ಬಿ.ಜಿ.ಗೋವಿಂದಪ್ಪನವರಿಗೆ ನೂತನ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ಕೊಡಬೇಕು. ನಾಲ್ಕು ಬಾರಿ ಶಾಸಕರಾಗಿರುವ ಇವರಿಗೆ ರಾಜಕಾರಣದಲ್ಲಿ ಅಪಾರ ಅನುಭವವಿದೆ. ಹಾಗಾಗಿ ಪರಿಗಣನೆಗೆ ತೆಗೆದುಕೊಂಡು ಕುರುಬ ಸಮಾಜಕ್ಕೆ ಸಾಮಾಜಿಕ ನ್ಯಾಯ ನೀಡಬೇಕೆಂದು ಆಗ್ರಹಿಸಿದರು.

ಮುತ್ತು, ಮಾಳೇಶ್, ಉಮೇಶ್, ಕುರುಬರ ಸಂಘದ ನಿರ್ದೇಶಕ ಹೊಸದುರ್ಗದ ಲಿಂಗಮೂರ್ತಿ, ಸುರೇಶ್ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು