LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮನೆ-ಮನೆಗೆ ತೆರಳಿ ಮತದಾರರಲ್ಲಿ ಜಾಗೃತಿ ಮೂಡಿಸಿ: ಜೆಡಿಎಸ್ ರಾಜ್ಯ ವಕ್ತಾರ ರಾಜುಗೌಡ ಕರೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ನಮ್ಮ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಮನೆ-ಮನೆಗೆ ತೆರಳಿ ಮತದಾರರಿಗೆ ಜಾಗೃತಿ ಮೂಡಿಸಬೇಕು ಹಾಗೂ ಗಣತಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡುವ ಬಗ್ಗೆ ಸಾರ್ವಜನಿಕರಿಗೆ ಸೂಕ್ತ ಮಾಹಿತಿ ನೀಡಬೇಕು ಎಂದು ಜೆಡಿಎಸ್ ರಾಜ್ಯ ವಕ್ತಾರ ರಾಜುಗೌಡ ಹೇಳಿದರು.
 

ನಗರದ ತ್ರಿಶೂಲ್ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಜೆಡಿಎಸ್ ತಾಲೂಕು ಘಟಕದ ವತಿಯಿಂದ ಆಯೋಜಿಸಿದ್ದ ಹಿರಿಯೂರು ವಿಧಾನಸಭಾ ಕ್ಷೇತ್ರದ ವಿಶೇಷ ಸಮಗ್ರ ಪರಿಷ್ಕರಣೆ ಬಿಎಲ್‌ಎ-೨ಕಾರ್ಯಾಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎಲ್ಲಾ ಬೂತ್ ಮಟ್ಟದಲ್ಲಿ ಎಲ್ಲಾ ವರ್ಗದವರನ್ನು ಒಳಗೊಂಡಂತೆ ಬೂತ್ ಕಮಿಟಿ ರಚನೆ ಮಾಡಿಕೊಳ್ಳಬೇಕು. ಎಸ್‌ಐಆರ್ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು, ಕ್ಷೇತ್ರದಲ್ಲಿ ಯಾವುದೇ ಒಬ್ಬ ಅರ್ಹ ಮತದಾರರು ಸಹ ಪಟ್ಟಿಯಿಂದ ಬಿಟ್ಟು ಹೋಗದಂತೆ ಜಾಗ್ರತೆ ವಹಿಸಬೇಕು. ಮತದಾರರ ಜತೆಗೆ ಉತ್ತಮ ಭಾಂಧವ್ಯ ಬೆಳೆಸಿಕೊಳ್ಳುವ ಮೂಲಕ ಪಕ್ಷ ನೀಡಿರುವ ಜವಾಬ್ದಾರಿಯನ್ನು ಅತ್ಯಂತ ನಿಷ್ಠೆಯಿಂದ ನಿಭಾಯಿಸಬೇಕು ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

ಉಪಚುನಾವಣೆ ನಮಗೆ ಅಳಿವು-ಉಳಿವಿನ ಪ್ರಶ್ನೆ: ಎಂ.ರವೀಂದ್ರಪ್ಪ
ಬಳಿಕ ಮಾತನಾಡಿದ ಜೆಡಿಎಸ್ ಹಿರಿಯ ಮುಖಂಡ ಎಂ.ರವೀಂದ್ರಪ್ಪ ಅವರು
, "ಇದೊಂದು ವಿಶೇಷ ಆಂದೋಲನವಾಗಿದೆ. ಹಿರಿಯೂರು ಕ್ಷೇತ್ರವು ಜೆಡಿಎಸ್‌ನ ಭದ್ರಕೋಟೆಯಾಗಿದ್ದು, ಆ ನಿಟ್ಟಿನಲ್ಲಿ ಕ್ಷೇತ್ರದ ಪ್ರತಿ ಬೂತ್‌ನಲ್ಲೂ ಮುಂಬರುವ ಉಪಚುನಾವಣೆಗೆ ಪಕ್ಷವನ್ನು ಬಲವಾಗಿ ಸಂಘಟಿಸಬೇಕಿದೆ. ಜೆಡಿಎಸ್ ಒಂದು ಕುಟುಂಬವಿದ್ದಂತೆ. ನಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ಅದನ್ನು ಬದಿಗೊತ್ತಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಜನತೆಗೆ ಅರಿವು ಮೂಡಿಸಬೇಕು. ಈ ಉಪಚುನಾವಣೆಯು ನಮಗೆ ಅಳಿವು-ಉಳಿವಿನ ಪ್ರಶ್ನೆಯಾಗಿದೆ" ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಮಂಜುನಾಥ್, ತಾಲೂಕು ಅಧ್ಯಕ್ಷ ಹನುಮತರಾಯಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಶಂಕರ್, ಮಹಿಳಾ ಘಟಕದ ಅಧ್ಯಕ್ಷೆ ರಾಧಮ್ಮ, ಕಾರ್ಯಾಧ್ಯಕ್ಷ ಜಲ್ದಪ್ಪ, ಹಿರಿಯ ಮುಖಂಡರಾದ ಕೆ.ಶಂಕರಮೂರ್ತಿ, ಗುಣಶೇಖರ್, ಪೂಜಾರ್ ತಿಮ್ಮಯ್ಯ, ಗೋವಿಂದರಾಜು ಸೇರಿದಂತೆ ಎಲ್ಲಾ ಬೂತ್ ಏಜೆಂಟರುಗಳು ಹಾಗೂ ಪಕ್ಷದ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಣಿ ವಿಲಾಸ ಸಾಗರ ಹಾಗೂ ಗಾಯತ್ರಿ ಜಲಾಶಯಗಳಿಗೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿರ್ಬಂಧಆಗಸ್ಟ್ 12ಕ್ಕೆ 'ಶತಮಾನದ ಖಗ್ರಾಸ ಸೂರ್ಯಗ್ರಹಣ': ಭಾರತದಲ್ಲಿ ಗೋಚರವಿಲ್ಲ, ಯಾವುದೇ ಆಚರಣೆ ಅಗತ್ಯವಿಲ್ಲರಾಣಿ ಎಲಿಜಬೆತ್ ಹೊಗಳಿದ್ದ ನಮ್ಮ ವಿಧಾನಸೌಧವೇ ನನಗೆ ಸ್ಫೂರ್ತಿ-ಟಿ.ಬಿ ಜಯಚಂದ್ರಕೆಪಿಸಿಸಿ ಅಧ್ಯಕ್ಷರ ಆಶೀರ್ವಾದ ಸಿಕ್ಕಿದೆ- ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಣ್ಣಚಿತ್ತಯ್ಯ ಯುವ ಜನತೆಗೆ ಯೋಗ, ವ್ಯಾಯಾಮ ಅತ್ಯಂತ ಅವಶ್ಯ:ದಿವ್ಯ ಜ್ಞಾನಾನಂದ ಶ್ರೀಎಸ್. ನಾಗೇನಹಳ್ಳಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಮುನಿಕೃಷ್ಣಪ್ಪ ಆಯ್ಕೆಅಪಘಾತದಲ್ಲಿ ಮೃತಪಟ್ಟ ಕೋಳಿಗಳು 'ಜೀವಸಂಪತ್ತು': ವಿಮಾ ಪರಿಹಾರ ಎತ್ತಿಹಿಡಿದ ಹೈಕೋರ್ಟ್ಸವರ್ಣೀಯ ಮುಖಂಡರಿಂದ ದಲಿತ ಅಧಿಕಾರಿಗಳಿಗೆ ಕಿರುಕುಳ-ಮಾರಸಂದ್ರ ಮುನಿಯಪ್ಪಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆಮೈಸೂರಲ್ಲಿ  'ಜೋಡೆತ್ತು' ಚಿತ್ರದ ಅದ್ದೂರಿ ಕ್ಲೈಮ್ಯಾಕ್ಸ್