ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸರ್ಕಾರಿ ಉದ್ಯೋಗ ಬಯಸುವ ಅಭ್ಯರ್ಥಿಗಳಿಗೆ ರಾಜ್ಯದಲ್ಲಿ ದೊಡ್ಡ ಮಟ್ಟದ ಅವಕಾಶ ಲಭ್ಯವಾಗಿದೆ. ಕರ್ನಾಟಕ ಲೋಕಸೇವಾ ಆಯೋಗ (KPSC) ಹಾಗೂ ರಾಯಚೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಕೃತವಾಗಿ ಅರ್ಜಿ ಆಹ್ವಾನಿಸಲಾಗಿದೆ.
೧. KPSC: ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಹುದ್ದೆಗಳು ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಗ್ರೂಪ್ 'ಎ' ಮತ್ತು ಗ್ರೂಪ್ 'ಬಿ' ವೃಂದದ ಒಟ್ಟು 68 ಹುದ್ದೆಗಳ ನೇಮಕಾತಿಗೆ ಪ್ರಕ್ರಿಯೆ ಆರಂಭಿಸಿದೆ.
ಹುದ್ದೆಗಳ ವಿವರ: ಗ್ರೂಪ್ 'ಎ' (ಸಹಾಯಕ ನಿಯಂತ್ರಕರು) – 15
ಗ್ರೂಪ್ 'ಬಿ' (ಲೆಕ್ಕಪರಿಶೋಧಕರು) - 53
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಾಣಿಜ್ಯ ವಿಭಾಗದಲ್ಲಿ ಸ್ನಾತಕೋತ್ತರ ಪದವಿ (M.Com) ಪೂರ್ಣಗೊಳಿಸಿರಬೇಕು.
ವಯೋಮಿತಿ: ಕನಿಷ್ಠ 18 ಹಾಗೂ ಗರಿಷ್ಠ 40 ವರ್ಷ. (2A, 2B, 3A, 3B ಅಭ್ಯರ್ಥಿಗಳಿಗೆ 3 ವರ್ಷ ಮತ್ತು SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ).
ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ ₹600, OBC (2A, 2B, 3A, 3B) ಅಭ್ಯರ್ಥಿಗಳಿಗೆ ₹300. SC/ST ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ: ಪ್ರಿಲಿಮ್ಸ್, ಮುಖ್ಯ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.
ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಕೆ ಆರಂಭ: ಆಗಸ್ಟ್ 28, ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 26, ಪ್ರಿಲಿಮ್ಸ್ ಪರೀಕ್ಷೆ: ಡಿಸೆಂಬರ್ 6
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್: kpsc.kar.nic.in
೨. ರಾಯಚೂರು ಜಿಲ್ಲಾ ಪಂಚಾಯತ್‌ನಲ್ಲಿ 65 ಹುದ್ದೆಗಳ ನೇಮಕಾತಿ ರಾಯಚೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಖಾಲಿ ಇರುವ ಕರ ವಸೂಲಿಗಾರ ಹಾಗೂ ಕ್ಲರ್ಕ್-ಕಂ-ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಕೋರಲಾಗಿದೆ.
ಹುದ್ದೆಗಳ ವಿವರ: ಕರ ವಸೂಲಿಗಾರ – 31, ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್ – 34
ವಿದ್ಯಾರ್ಹತೆ: ಅಭ್ಯರ್ಥಿಗಳು ಪಿಯುಸಿ (10+2) ಉತ್ತೀರ್ಣರಾಗಿರಬೇಕು. ವಯೋಮಿತಿ: ಗರಿಷ್ಠ 40 ವರ್ಷ (ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇದೆ).
ಅರ್ಜಿ ಶುಲ್ಕ: ಸಾಮಾನ್ಯ ವರ್ಗಕ್ಕೆ ₹500, OBC ಅಭ್ಯರ್ಥಿಗಳಿಗೆ ₹300, SC/ST/Cat-1 ಅಭ್ಯರ್ಥಿಗಳಿಗೆ ₹200 ಹಾಗೂ ವಿಶೇಷ ಚೇತನರಿಗೆ ₹100 ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 3. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್: zpraichur.karnataka.gov.in




