Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಂಡ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ನೇಮಕ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಂಡ್ಯದಲ್ಲಿ ನಡೆಯಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಗೊ.ರು.ಚನ್ನಬಸಪ್ಪ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಬಿಜೆಪಿ ನಾಯಕ ವಿಜಯೇಂದ್ರ ಸೇರಿದಂತೆ ಅನೇಕ ಗಣ್ಯರು ಸಲ್ಲಿಸಿದ್ದಾರೆ.

ಕನ್ನಡ ಪರಿಚಾರಿಕೆ, ಸಂಘಟನೆ, ಜಾನಪದ, ಶಿಕ್ಷಣ, ಮಾಧ್ಯಮ ಸೇರಿ ಹಲವು ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡವರು ಅವರು. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿಯೂ ಅವರು ಅನನ್ಯ ಸೇವೆ ಸಲ್ಲಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಕ್ಕೂ ಧುಮುಕಿದ್ದ ಗೊರುಚ ಅವರು, ಕನ್ನಡ ನಾಡುನುಡಿಗೆ ಅಪಾರ ಕೊಡುಗೆ ನೀಡಿದ್ದಾರೆ.
ಗೊರುಚ ಅವರು ಲೋಕಸಭೆಯಲ್ಲಿ ನಾನು ಪ್ರತಿನಿಧಿಸುವ ಮಂಡ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸುತ್ತಿರುವುದು ನನ್ನ ಸಂತೋಷವನ್ನು ಇಮ್ಮಡಿಗೊಳಿಸಿದೆ ಎಂದು ಕುಮಾರಸ್ವಾಮಿ ಹರ್ಷ ವ್ಯಕ್ತಪಡಿಸಿದ್ದಾರೆ.


ವಿಜಯೇಂದ್ರ-ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ೮೭ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಖ್ಯಾತ ಸಾಹಿತಿ ಗೊ.ರು ಚನ್ನಬಸಪ್ಪನವರಿಗೆ ಅಭಿನಂದನೆಗಳು ಎಂದು ವಿಜಯೇಂದ್ರ ತಿಳಿಸಿದ್ದಾರೆ.

ಜಾನಪದ ವಿದ್ವಾಂಸರಾಗಿ, ಶಿಕ್ಷಕರಾಗಿ ಕನ್ನಡ ಸಾರಸತ್ವ ಲೋಕಕ್ಕೆ ಅಪಾರ ಕೊಡುಗೆ ನೀಡಿರುವ ಶ್ರೀಯುತರು ಸ್ವಾತಂತ್ರ್ಯ ಚಳುವಳಿಯಲ್ಲಿಯೂ ಸಹ ಭಾಗಿಯಾಗಿದ್ದವರು. ಮಾನ್ಯ ಗೊ.ರು ಚನ್ನಬಸಪ್ಪನವರ ಅಧ್ಯಕ್ಷತೆಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅತ್ಯಂತ ಯಶಸ್ವಿಯಾಗಲೆಂದು ಹೃನ್ಮನಸ್ಸಿನಿಂದ ಹಾರೈಸುವೆ ಎಂದು ಅವರು ಹೇಳಿದ್ದಾರೆ.


Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ