Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ.ಪುನೀತ್ ಗೌಡಗೆ “ಸರ್ಕಾರದ ಅತ್ಯುತ್ತಮ ಸಂಶೋಧನಾ ಪ್ರಶಸ್ತಿ”

Advertisement
ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಕರ್ನಾಟಕ ಸರ್ಕಾರ ನೀಡುವ
2023-24 ನೇ ಸಾಲಿನ ಅತ್ಯುತ್ತಮ ಸಂಶೋಧನಾ ಪ್ರಕಟಣೆಯ ಪ್ರಶಸ್ತಿಗೆ ಬಾಪೂಜಿ ಇನ್ಸಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಆರ್.ಜೆ.ಪುನೀತ್ ಗೌಡ ಭಾಜನರಾಗಿದ್ದಾರೆ.

ಈ ಪ್ರಶಸ್ತಿಯು ರೂ.೨೫ ಸಾವಿರ ನಗದು ಬಹುಮಾನ, ಉಲ್ಲೇಖ ಪತ್ರ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ.  ಅತ್ಯುತ್ತಮ ಸಂಶೋಧನಾ ಪ್ರಕಟಣೆಯ ಪ್ರಶಸ್ತಿಯನ್ನು ಕರ್ನಾಟಕ ವಿಶ್ವವಿದ್ಯಾಲಯಗಳ ಕಾಲೇಜುಗಳು, ಸಂಶೋಧನಾ ಸಂಸ್ಥೆಗಳ ಅಧ್ಯಾಪಕರು ಹಾಗೂ ಸಂಶೋಧಕರಿಗೆ ಕರ್ನಾಟಕ ಸರ್ಕಾರವು ವಾರ್ಷಿಕವಾಗಿ ನೀಡಲಾಗುತ್ತಿದ್ದು, ಅತ್ಯುತ್ತಮ ಸಂಶೋಧನಾ ಪ್ರಕಟಣೆಗಳನ್ನು ಗುರುತಿಸಲು ಕರ್ನಾಟಕ ಸರ್ಕಾರದ ಭಾಗವಾದ ವಿಷನ್ ಗ್ರೂಪ್ ಆನ್ ಸೈನ್ಸ್ ಅಂಡ್ ಟೆಕ್ನಾಲಜಿಯು ಒಂದು ಉಪಕ್ರಮವಾಗಿದೆ.

2020-21 ನೇ ಸಾಲಿನಲ್ಲಿ ದಾವಣಗೆರೆ ವಿಶ್ವವಿದ್ಯಾಲಯದ  ಗಣಿತಶಾಸ್ತ್ರ ವಿಭಾಗದ ಅಧ್ಯಕ್ಷರಾದ ಪ್ರೊ.ಬಿ.ಸಿ.ಪ್ರಸನ್ನ ಕುಮಾರ ಹಾಗೂ 2022-23 ನೇ ಸಾಲಿನಲ್ಲಿ ಇವರ ವಿದ್ಯಾರ್ಥಿಯಾದ ಡಾ.ಆರ್ ನವೀನ್‌ಕುಮಾರ್ ಈ ಪ್ರಶಸ್ತಿಯನ್ನು ಪಡೆದಿದ್ದಾರೆ. ಈ ಬಾರಿಯ ಕಂಪ್ಯೂಟೆಶನ್ ಮತ್ತು ಗಣಿತ ವಿಭಾಗದಲ್ಲಿ ಡಾ.ಪುನೀತ್ ಗೌಡ ಇವರಿಗೆ ಪ್ರಶಸ್ತಿ ದೊರಕಿದ್ದು, ಇವರು ಕೂಡ ದಾವಣಗೆರೆ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಹಾಗೂ ಅಧ್ಯಕ್ಷ ಡಾ.ಬಿ.ಸಿ.ಪ್ರಸನ್ನಕುಮಾರ ರವರ ವಿದ್ಯಾರ್ಥಿಯಾಗಿದ್ದಾರೆ.

ಡಾ.ಪುನೀತ್ ಗೌಡ ಅವರ ಪ್ರಸುತ್ತ ದಾವಣಗೆರೆಯಲ್ಲಿನ ಬಿಐಇಟಿ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಬಿ.ಅರವಿಂದ, ಬಿಐಇಟಿ ನಿರ್ದೇಶಕ  ಪ್ರೊ.ವೈ.ವೃಷಭೇಂದ್ರಪ್ಪ, ಕಾಲೇಜಿನ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಇವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ