Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ನೌಕರರಿಗೆ ಸಂಘಟನೆಯ ಅಗತ್ಯವಿದೆ- ಅಧ್ಯಕ್ಷ ಎಸ್.ರಾಜಪ್ಪ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸರ್ಕಾರಿ ನೌಕರರು ತಮ್ಮ ಹಕ್ಕುಗಳ ರಕ್ಷಣೆ ಹಾಗೂ ವೃತ್ತಿ ಬದುಕಿನ ಏಳಿಗೆಗಾಗಿ ಸಂಘಟಿತರಾಗುವುದು ಇಂದಿನ ಅಗತ್ಯವಾಗಿದೆ ಎಂದು ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್. ರಾಜಪ್ಪ ತಿಳಿಸಿದರು.

ನಗರದ ರಾಜ್ಯ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಪದೋನ್ನತಿ ಹೊಂದಿದ ಶಿಕ್ಷಕರಿಗೆ ಹಾಗೂ ಸಂಘದ ನಿರ್ದೇಶಕರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

2026ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದಿಂದ ಮುಖ್ಯ ಶಿಕ್ಷಕರ ಹುದ್ದೆಗೆ ಮುಂಬಡ್ತಿ ಹೊಂದಿದ ಪರಿಶಿಷ್ಟ ವರ್ಗದ 16 ಶಿಕ್ಷಕರನ್ನು ಹಾಗೂ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚಿತ್ರದುರ್ಗ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಆಯ್ಕೆಯಾದ 13 ನಿರ್ದೇಶಕರಿಗೆ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ. ಎಸ್. ರಂಗಸ್ವಾಮಿ ಅವರು ಸಮಾರಂಭ ಉದ್ಘಾಟಿಸಿ, ಸಂಘಟನೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಸಂಘಟನೆ ಮತ್ತಷ್ಟು ಬಲಪಡಿಸುವ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರಾದ ಶ್ರೀನಿವಾಸ ನಾಯಕ, ಆರ್. ಮಾರುತೇಶ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜಿ.ಬಿ. ಮಹಾಂತೇಶ್, ಬಿಇಒ ನಾಗಭೂಷಣ್, ಎಲ್‍ಐಸಿ ಮಹೇಶ್ ಸೇರಿದಂತೆ ರಾಜಯ್ಯ, ವಸಂತ ಕುಮಾರ್, ಕೆ. ಸುದರ್ಶನ, ವಿಮಲಾಕ್ಷಿ,  ಸಣ್ಣಸೂರಪ್ಪ, ಕರಿಯಣ್ಣ ಇದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಂಧ್ರ ಗಡಿಭಾಗದ ಹೊಸಕೆರೆ ಪಾಳ್ಯದಲ್ಲಿ ಹನಿ ನೀರಿಗೂ ಹಾಹಾಕಾರ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜಾನುವಾರು, ಗ್ರಾಮಸ್ಥರು ಕಂಗಾಲು!ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣವಿದ್ಯಾರ್ಥಿ ಬಸ್‍ಪಾಸ್ ಶುಲ್ಕ ಮರು ಪಾವತಿ: ಅರ್ಜಿ ಆಹ್ವಾನಜಿಲ್ಲಾ ಆಸ್ಪತ್ರೆಯಲ್ಲಿ ಮಕ್ಕಳ ಉಚಿತ ಹೃದಯ ತಪಾಸಣೆವಿದ್ಯಾರ್ಥಿಗಳಿಂದ ಅರಿವು ಶೈಕ್ಷಣಿಕ ಸಾಲಕ್ಕೆ ಅರ್ಜಿ ಆಹ್ವಾನಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ: ಜುಲೈ 31 ಕೊನೆಯ ದಿನಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟ ಕಾಂಗ್ರೆಸ್ ಸರ್ಕಾರಆಕಾಶವಾಣಿ ಕೇಂದ್ರದ ಹಿರಿಯ ತಾಂತ್ರಿಕ ತಜ್ಞ ಎನ್.ಪಿ. ಶಿವಮೂರ್ತಿ ಅವರಿಗೆ ಬಿಳ್ಕೊಡುಗೆಬ್ಯಾಟರಿ ಸ್ಪಾರ್ಕ್ ನಿಂದ ಹೊತ್ತಿ ಉರಿದ ಟಾಟಾ ಸುಮೋಕೆಂಪೇಗೌಡ ಪುತ್ತಳಿ ನಿರ್ಮಾಣ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ- ಪ್ರೇಮ್ ಕುಮಾರ್