Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಹೊಸ ಮನೆ ನಿರ್ಮಿಸಿಕೊಳ್ಳುವವರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರ ಮನೆಗಳನ್ನು ನಿರ್ಮಿಸಿಕೊಳ್ಳುವವರಿಗೆ ಗುಡ್ ನ್ಯೂಸ್ ನೀಡಿದೆ. ಮನೆ ನಿರ್ಮಾಣ ಸಂದರ್ಭದಲ್ಲಿ ಸೆಟ್​​ ಬ್ಯಾಕ್ ಬಿಡದೆ ಮನೆ ನಿರ್ಮಿಸಲು ಅವಕಾಶ ನೀಡಲಾಗಿದೆ.


ನಗರಾಭಿವೃದ್ಧಿ ಇಲಾಖೆ ಸೆಟ್ ಬ್ಯಾಕ್​​ನಲ್ಲಿ ವಿನಾಯಿತಿ ನೀಡಿ ಮಹತ್ವದ‌ಆದೇಶ ಹೊರಡಿಸಿದೆ. ಆ ಮೂಲಕ ಬೆಂಗಳೂರು ಜನರಿಗೆ ಸಂಕ್ರಾಂತಿ ಹಬ್ಬಕ್ಕೆ ಸರ್ಕಾರ ಗಿಫ್ಟ್ ನೀಡಿದೆ. ಇದರಿಂದಾಗಿ ಸೆಟ್​​ ಬ್ಯಾಕ್​​ ಬಿಡದೆ ಸಮಸ್ಯೆ ಎದುರಿಸುತ್ತಿರುವ ಮನೆ ಮಾಲೀಕರು ನಿಟ್ಟುಸಿರು ಬಿಟ್ಟಿದ್ದಾರೆ.


ನಿಯಮಗಳಲ್ಲಿ ಬದಲಾವಣೆ:
ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಸೆಟ್ ​ಬ್ಯಾಕ್​ ನಿಯಮಗಳಲ್ಲಿ ಕೆಲ ಬದಲಾವಣೆಗಳನ್ನು ಮಾಡಿ ಆದೇಶಿಸಿದೆ.
ಈ ಮೊದಲು ಮನೆಗಳಿಗೆ ಸೆಟ್ ಬ್ಯಾಕ್ ಬಿಡುವ ಅವಶ್ಯಕತೆ ಇತ್ತು. ಆದರೆ ಸರ್ಕಾರ ಸೆಟ್​​ ಬ್ಯಾಕ್ ಕಡಿತ ಹಾಗೂ ವಿನಾಯಿತಿ ನೀಡಿದ್ದು
, ಕಟ್ಟಡದ ಯಾವುದಾದರೂ ಒಂದು ಬದಿಯಲ್ಲಿ ಸೆಟ್ ಬ್ಯಾಕ್ ಬಿಟ್ಟರೆ ಸಾಕು. ಉಳಿದ ಮೂರು ಕಡೆಗಳಲ್ಲಿ ಯಾವುದೇ ಸೆಟ್ ಬ್ಯಾಕ್ ಬಿಡುವ ಅನಿವಾರ್ಯ ಇಲ್ಲ.


ಎಷ್ಟು ಸೆಟ್ ಬ್ಯಾಕ್ ಬಿಡಬೇಕು?
600
ಚದರ ಅಡಿ ವರೆಗಿನ ಜಾಗದಲ್ಲಿ ಮನೆ ನಿರ್ಮಾಣಕ್ಕೆ ಕೇವಲ 0.60ಮೀ ಅಂದರೆ 2 ಅಡಿಗೆ ಇಳಿಕೆ ಮಾಡಲಾಗಿದೆ.
600
ಚದರ ಅಡಿ ಇಂದು 1,500 ಚದರ ಅಡಿ ವರೆಗಿನ ಜಾಗದಲ್ಲಿ ಮನೆ ನಿರ್ಮಾಣಕ್ಕೆ 0.70ಮೀ, ಅಂದರೆ 2.5 ಅಡಿಗೆ ಇಳಿಕೆ ಮಾಡಲಾಗಿದೆ.

1,500 ಚದರ ಅಡಿ ಇಂದ 2,500 ಚದರ ಅಡಿ ವರೆಗಿನ ಜಾಗದ ಮನೆಗಳಿಗೆ ಎಲ್ಲಾ ಬದಿಯಲ್ಲೂ ಕನಿಷ್ಠ 0.80ಮೀ ಅಂದರೆ 3 ಅಡಿ ಸೆಟ್ ಬ್ಯಾಕ್ ಬಿಡುವುದು ಕಡ್ಡಾಯ.

2,500 ಚದರ ಅಡಿಯಿಂದ 40 ಸಾವಿರ ಚದರ ಅಡಿ ವರೆಗಿನ ಜಾಗದಲ್ಲಿ ಮನೆ ನಿರ್ಮಾಣ ಮಾಡಲು ಜಾಗದ 8% ನಷ್ಟು ಸೆಟ್ ಬ್ಯಾಕ್ ಬಿಡುವುದು ಕಡ್ಡಾಯ.


ಈ ಮೊದಲು 40 ಸಾವಿರ ಚದರ ಅಡಿ ವರೆಗಿನ ಜಾಗದಲ್ಲಿ ಮನೆ ನಿರ್ಮಾಣಕ್ಕೆ 12% ನಷ್ಟು ಸೆಟ್ ಬ್ಯಾಕ್ ಬಿಡುವುದು ಕಡ್ಡಾಯವಿತ್ತು. ಆದರೆ ಇದೀಗ 4% ನಷ್ಟು ಸೆಟ್ ಬ್ಯಾಕ್ ಏರಿಯಾ ಕಡಿತಗೊಳಿಸಲಾಗಿದೆ. ಇದು ಸದ್ಯಕ್ಕೆ ನಗರಲ್ಲಿರುವ ಎಲ್ಲಾ ಮನೆಗಳು ಮತ್ತು ಕಟ್ಟಡಗಳಿಗೂ ಅನ್ವಯವಾಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು