Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರ ಕೊಟ್ಟ ಮಾತು ಈಡೇರಿಸಿದೆ – ಸಿದ್ದರಾಮಯ್ಯ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಮಾವೇಶ ಮಾಡುತ್ತಿರುವುದು ಸಾವಿರ ದಿನಾಚರಣೆ ಮೈಲಿಗಲ್ಲು ಅಲ್ಲ. ದೇಶದ ಬಡವರು
, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ಮುಂದುವರೆಸುತ್ತಿದ್ದೇವೆ. ಇಲ್ಲಿಯವರೆಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದು, ಮುಂದೆಯೂ ನಡೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಹಾವೇರಿಯ ಸರ್ಕಾರಿ ಮೆಡಿಕಲ್ ಕಾಲೇಜು ಆವರಣದ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡುತ್ತಾ, ಈ ಸಮಾವೇಶಕ್ಕೆ ವಿರೋಧ ಪಕ್ಷದವರು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ಹೊಟ್ಟೆಕಿಚ್ಚಿನಿಂದ ವಿರೋಧಿಸುತ್ತಿದ್ದಾರೆ. ಅವರು ಅಧಿಕಾರದಲ್ಲಿದ್ದ ನಾಲ್ಕು ವರ್ಷಗಳ ಕಾಲ ಏನೂ ಮಾಡಿರಲಿಲ್ಲ ಎಂದರು.

ನಮ್ಮನ್ನು ಟೀಕಿಸಲು ವಿರೋಧ ಪಕ್ಷದವರಿಗೆ ನೈತಿಕ ಹಕ್ಕಿಲ್ಲ. ನಾಲ್ಕು ವರ್ಷಗಳಲ್ಲಿ ಅವರು ಏನು ಮಾಡಿದ್ದಾರೆ. 2018 ರಲ್ಲಿ 600 ಭರವಸೆಗಳನ್ನು ಕೊಟ್ಟಿದ್ದರು. ಅದರಲ್ಲಿ ಶೇ.10% ರಷ್ಟು ಈಡೇರಿಸಿಲ್ಲ. ನಾವು ನೀಡಿದ್ದ 592 ಭರವಸೆಗಳಲ್ಲಿ 243 ಭರವಸೆಗಳನ್ನು ಎರಡೂವರೆ ವರ್ಷಗಳಲ್ಲಿ ಈಡೇರಿಸಿದ್ದೇವೆ. ಉಳಿದವನ್ನು ಈಡೇರಿಸಲು ಪ್ರಯತ್ನಿಸುತ್ತೇವೆ ಎಂದರು.

ಅಧಿಕಾರ ಹಂಚಿಕೆ ಪಕ್ಷದ ತೀರ್ಮಾನ ಅಂತಿಮ :
ಅಧಿಕಾರ ಹಂಚಿಕೆಯ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಪಕ್ಷದ ವರಿಷ್ಠರ ತೀರ್ಮಾನದಂತೆ ನಡೆದುಕೊಳ್ಳಲಾಗುವುದು ಎಂದು ಈಗಾಗಲೇ ತಿಳಿಸಲಾಗಿದೆ. ವರಿಷ್ಠರು ಹೇಳಿದ್ದನ್ನು ಪಕ್ಷದ ಎಲ್ಲರೂ ಕೇಳಬೇಕು ಎಂದರು. ಶಾಸಕರು ಈ ಬಗ್ಗೆ ಮಾಡಿರುವ ಟ್ವೀಟ್ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಪಕ್ಷದ ವರಿಷ್ಠರು ಮಾಡಿದ್ದರೆ ಮಾಡಿದ್ದಾರೆಯೇ
? ಎಂದರು.

ಹೈ ಕಮಾಂಡ್ ಶಿವರಾತ್ರಿಯ ನಂತರ ಬದಲಾವಣೆ ಎಂದು ಹೇಳಿದ್ದಾರೆಯೇ ಎಂಬ ಪ್ರಶ್ನೆಗೆ ಅವರು ದೆಹಲಿಗೆ ಕರೆದಾಗ ಹೋಗುವುದಾಗಿ ತಿಳಿಸಿ, ಅಧಿಕಾರ ಹಂಚಿಕೆಯ ಬಗ್ಗೆ ಈಗಾಗಲೇ ಉತ್ತರಿಸಿದ್ದು, ಈ ಬಗ್ಗೆ ಪದೇ ಪದೇ ಪ್ರಶ್ನೆ ಕೇಳಬೇಡಿ ಎಂದರು.

ಕೇಂದ್ರ ಸರ್ಕಾರದ ಬಗ್ಗೆ ಭರವಸೆ, ನಂಬಿಕೆ ಇಲ್ಲ-
ಬೇಡ್ತಿ-ವರದಾ ನದಿಯ ಜೋಡಣೆ ಬಗ್ಗೆ ಉತ್ತರ ಕನ್ನಡ ಜನತೆ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಡಿಪಿಆರ್ ನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಾಗಿದ್ದು ಅವರು ತೀರ್ಮಾನ ಕೈಗೊಳ್ಳಬೇಕಾಗಿದೆ. ಕೇಂದ್ರ ಸರ್ಕಾರ ಯಾವುದರ ಬಗ್ಗೆಯೂ ತೀರ್ಮಾನ ಮಾಡುತ್ತಿಲ್ಲ. ಹಾಗಾಗಿ ನಮಗೆ ಅವರು ತೀರ್ಮಾನ ಕೈಗೊಳ್ಳುವ ಬಗ್ಗೆ ಭರವಸೆಯಾಗಲಿ
, ನಂಬಿಕೆಯಾಗಲಿ ಇಲ್ಲ ಎಂದರು.

ಸಮಾಜಿಕ, ಶೈಕ್ಷಣಿಕ ಸಮೀಕ್ಷೆಯ ವರದಿ ಶೀಘ್ರದಲ್ಲಿಯೇ ಸಲ್ಲಿಕೆಯಾಗಲಿದ್ದು, ಅದರ ಮೇಲೆ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ