Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ಸರ್ಕಾರಿ ಶಾಲೆಗಳ ಶಿಕ್ಷಕರು ಟಿಇಟಿ ಪರೀಕ್ಷೆ ಬರೆಯಬೇಕು

ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಹಾಲಿ ಸೇವೆ ಸಲ್ಲಿಸುತ್ತಿರುವ ಸರ್ಕಾರಿ ಶಾಲೆಗಳ ಶಿಕ್ಷಕರು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಬರೆಯಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದ್ದು ಈ ಸಂಬಂಧ ಸರ್ಕಾರ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲಾಗಿದೆ ಎಂದು ಶಿಕ್ಷಣ ಸಚಿವ ಎಸ್​.ಮಧು ಬಂಗಾರಪ್ಪ ತಿಳಿಸಿದ್ದಾರೆ.


ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿಕ್ಷಣದಲ್ಲಿ ಗುಣಾತ್ಮಕ ಬದಲಾವಣೆ ತರಲು ನಿವೃತ್ತಿ ಅಂಚಿನಲ್ಲಿರುವವರನ್ನು ಹೊರತುಪಡಿಸಿ ಉಳಿದೆಲ್ಲ ಶಿಕ್ಷಕರು ಟಿಇಟಿ ಬರೆಯಬೇಕೆಂದು ಕೋರ್ಟ್ ಆದೇಶ ಮಾಡಿರುವುದು ಸರಿ ಇದೆ. ಈಗ ಇರುವ ಶಿಕ್ಷಕರು 20ರಿಂದ 30 ವರ್ಷಗಳ ಹಿಂದೆ ನೇಮಕಗೊಂಡವರು.

ಅವರು ಇಂದಿನ ಕಾಲಕ್ಕೆ ತಕ್ಕಂತೆ ಬದಲಾವಣೆ ಆಗಬೇಕು. ಈಗ ರಾಜ್ಯ ಸರ್ಕಾರ ಮುಂದಿನ 25 ವರ್ಷವನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಕರನ್ನು ನೇಮಿಸಿಕೊಳ್ಳುತ್ತದೆ. ಸುಪ್ರೀಂ ಕೋರ್ಟ್ ಮಕ್ಕಳು ದಡ್ಡರಾಗುತ್ತಿದ್ದಾರೆಂದು ಎಂದು ತಿಳಿದು ಟಿಇಟಿ ಬರೆಯಲು ಹೇಳಿರಬೇಕು ಎಂದು ಸಚಿವರು ತಿಳಿಸಿದರು.

ಶೇ.100ರಷ್ಟು ಫಲಿತಾಂಶ ಪಡೆವ ಶಾಲೆಗೆ ಪ್ರಶಸ್ತಿ:
ಸರ್ಕಾರಿ
, ಅನುದಾನಿತ ಹಾಗೂ ಅನುದಾನರಹಿತ ಶಾಲೆಯಲ್ಲಿ ಶೇ.100ರಷ್ಟು ಫಲಿತಾಂಶ ಬಂದ ಶಾಲೆಗಳಿಗೆ ಪ್ರಶಸ್ತಿ ನೀಡಲಾಗುತ್ತದೆ. ಉತ್ತಮ ಫಲಿತಾಂಶ ಬಂದ ಶಾಲೆಗಳಿಗೆ 25 ಸಾವಿರ ರೂಪಾಯಿ ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಶಿಕ್ಷಣ ಇಲಾಖೆಯಲ್ಲಿ ಅನುದಾನಕ್ಕೆ ಕೊರತೆ ಇಲ್ಲ. ಫಲಿತಾಂಶವೂ ಉತ್ತಮವಾಗಿ ಬಂದಿದೆ. ಇದಕ್ಕೆ ವಿರೋಧ ಪಕ್ಷದವರೂ ಸಹ ಭೇಷ್ ಎಂದಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಮಾನವೀಯ ಗುಣಗಳ ಬಗ್ಗೆ ತಿಳಿಸಿಕೊಡಲಾಗುತ್ತದೆ. ನಾನೂ ಸಹ ಫೇಲ್ ಆದವನೇ. ಆದರೆ ನನ್ನಲ್ಲಿ ಉತ್ತಮ ಗುಣಗಳನ್ನು ಪೋಷಕರು ಕಲಿಸಿದ್ದಾರೆ.

ಅನುದಾನಿತ ಶಾಲೆಗಳಿಗೆ ಆರು ಸಾವಿರ ಶಿಕ್ಷಕರ ನೇಮಕಕ್ಕೆ ಸಿಎಂ ಸೂಚನೆ ನೀಡಿದ್ದಾರೆ. ಕನ್ನಡ ಶಾಲೆಗಳಿಗೆ ಅನುದಾನ ನೀಡಬೇಕೆಂಬ ಬೇಡಿಕೆ ಇದೆ. ಇದರ ಕುರಿತೂ ಸಹ ಸೂಕ್ತ ತೀರ್ಮಾನ ಮಾಡಲಾಗುತ್ತಿದೆ ಎಂದು ಹೇಳಿದರು.

ಪಿಯು ಮಕ್ಕಳಿಗೂ ಬಿಸಿಯೂಟ:
ಎಲ್ಲ ಕೆಪಿಎಸ್ ಶಾಲೆಗಳ
12 ತರಗತಿ ವಿದ್ಯಾರ್ಥಿಗಳಿಗೂ ಸಹ ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತದೆ. ಇದರಿಂದ ಸರ್ಕಾರಕ್ಕೆ ಹೊರೆ ಆಗುತ್ತದೆ. ಆದರೆ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸರ್ಕಾರ ಇದನ್ನು ಭರಿಸಲಿದೆ. ಇಲ್ಲಿ ದೈಹಿಕ ಹಾಗೂ ಸಂಗೀತ ಶಿಕ್ಷಕರನ್ನು ನೇಮಕ ಮಾಡಲು ಸಿಎಂಗೆ ಮನವಿ ಮಾಡಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು