Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಪಷನೆ ಕೋರಿ ಒಳ ಮೀಸಲಾತಿ ಮಸೂದೆ ವಾಪಸ್​ ಕಳುಹಿಸಿದ ರಾಜ್ಯಪಾಲ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್ ಅವರು ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡುವ ಮಸೂದೆಗೆ ಸ್ಪಷನೆ ಕೋರಿ  ವಾಪಸ್​ ಕಳುಹಿಸಿದ್ದಾರೆ. ಇದರಿಂದಾಗಿ ವಿವಿಧ ರಾಜ್ಯ ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆಗಳು ದಟ್ಟವಾಗಿವೆ. ಬೆಳಗಾವಿಯಲ್ಲಿ ಡಿಸೆಂಬರ್​ನಲ್ಲಿ ನಡೆದ ಅಧಿವೇಶನದಲ್ಲಿ ಸರ್ಕಾರ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಮಸೂದೆಯನ್ನು ಅಂಗೀಕರಿಸಿತು.

ಮೀಸಲಾತಿ ಸೌಲಭ್ಯಗಳ ನ್ಯಾಯಯುತ ಮತ್ತು ಸಮಾನ ವಿತರಣೆ ಖಚಿತಪಡಿಸಿಕೊಳ್ಳಲು ಪರಿಶಿಷ್ಟ ಜಾತಿಗಳ ವಿವಿಧ ಉಪ ಪಂಗಡಗಳ ನಡುವೆ 6:6:5 ಅನುಪಾತದಲ್ಲಿ ಪರಿಶಿಷ್ಟ ಜಾತಿಗಳಿಗೆ ನಿಗದಿಪಡಿಸಿ ಮೀಸಲಾತಿ ಕೋಟಾ ವಿಭಜಿಸಲಾಗಿತ್ತು.
ಈ ಮಸೂದೆಗೆ ಅಂಕಿತ ಕೋರಿ ಕಳೆದ ವಾರ ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ಈ ಮಸೂದೆಗೆ ಹೆಚ್ಚಿನ ಸ್ಪಷ್ಟೀಕರಣ ಕೋರಿ ಅವರಿಗೆ ವಾಪಸ್​ ಕಳುಹಿಸಿದ್ದಾರೆ.


ಈ ಬೆಳವಣಿಗೆಯು ಸರ್ಕಾರದ ಹಲವು ಇಲಾಖೆಗಳ ನೇಮಕಾತಿ ಮೇಲೆ ಪರಿಣಾಮ ಬೀರಲಿದೆ. ಈ ಮಸೂದೆ ಪ್ರಕ್ರಿಯೆ ಬಳಿಕ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಕಾದು ಕುಳಿತಿದ್ದು, ಇದೀಗ ಇದು ಮತ್ತಷ್ಟು ವಿಳಂಬವಾಗಲಿದೆ. ಮೂಲಗಳ ಪ್ರಕಾರ, ಸರ್ಕಾರ ಒಳ ಮೀಸಲಾತಿ ಸಮಸ್ಯೆ ಬಗೆಹರಿದ ತಕ್ಷಣಕ್ಕೆ ಪೊಲೀಸ್, ಆರೋಗ್ಯ ಮತ್ತು ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 30 ಸಾವಿರಕ್ಕೂ ಹೆಚ್ಚು ಹುದ್ದೆಗಳ ಭರ್ತಿ ಆಗಬೇಕಿದೆ.

2024ರ ಅಕ್ಟೋಬರ್​ನಿಂದ ಸರ್ಕಾರಿ ಹುದ್ದೆಗಳ ನೇಮಕಾತಿ ನೆನಗುದಿಗೆ ಬಿದ್ದಿದ್ದು, ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ಸ್ಥಾಪಿಸಲಾದ ಏಕವ್ಯಕ್ತಿ ಆಯೋಗವು ಪರಿಶಿಷ್ಟ ಜಾತಿಗಳ ವಿವಿಧ ಉಪ - ಗುಂಪುಗಳಲ್ಲಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತು ನೀಡಿದ ಶಿಫಾರಸುಗಳನ್ನು ನೇಮಕಾತಿಯಲ್ಲಿ ಜಾರಿಗೆ ತರಲು ಸಿದ್ಧತೆ ನಡೆದಿದೆ.


ಆಂತರಿಕ ಕೋಟಾ ಸಮಸ್ಯೆ ಪರಿಹರಿಸದೇ ನೇಮಕಾತಿಗಳೊಂದಿಗೆ ಮುಂದುವರಿಯುವುದರಿಂದ ಈ ಸಮುದಾಯಗಳ ಯುವಕರಿಗೆ ನಷ್ಟವಾಗಲಿದೆ ಎಂದು ಎಸ್‌ಸಿ-ಎಡ ಸಮುದಾಯಗಳ ಬೇಡಿಕೆಯಿಂದಾಗಿ ಸರ್ಕಾರ  ನೇಮಕಾತಿ ಸ್ಥಗಿತಗೊಳಿಸಿದೆ.

ಎಸ್​ಸಿ ಒಳಮೀಸಲಾತಿ ಕುರಿತು ಆಯೋಗ 2024ರ ಆಗಸ್ಟ್​ 4ರಂದು ವರದಿ ಮಂಡಿಸಿದ್ದು, ಸರ್ಕಾರ ಕೆಲವು ಮಾರ್ಪಾಡುಗಳೊಂದಿಗೆ ಅದನ್ನು ಸ್ವೀಕರಿಸಿತ್ತು. 2025ರ ಅಕ್ಟೋಬರ್​ನಲ್ಲಿ ಎಸ್​ಸಿ ಒಳಮೀಸಲಾತಿ ಕೋಟಾವನ್ನು ಕೂಡಾ ಸೂಚಿಸಿತ್ತು. ಆದರೆ, ಇದುವರೆಗೂ ಸರ್ಕಾರ ಎಸ್​ಸಿಗಳಲ್ಲಿ ವರ್ಗಗಳನ್ನು ಗುರುತಿಸಲು ಜಾತಿ ಪ್ರಮಾಣಪತ್ರಗಳನ್ನು ನೀಡುವ ಮಾರ್ಗಸೂಚಿಗಳನ್ನು ಅದು ಹೊರಡಿಸಿಲ್ಲ. ಈ ನಡುವೆ ಒಳಮೀಸಲಾತಿ ಸೂಚಿಸುವ ಆದೇಶಕ್ಕೆ ಕಾನೂನು ಬದ್ಧತೆ ನೀಡುವ ಮಸೂದೆಯನ್ನು ಅಂಗೀಕರಿಸಿತ್ತು. ಇದೀಗ ರಾಜ್ಯಪಾಲರು ಹೆಚ್ಚಿನ ಸ್ಪಷ್ಟೀಕರಣಗಳನ್ನು ಕೋರಿ ಮಸೂದೆಯನ್ನು ಹಿಂದಿರುಗಿಸಿರುವುದರಿಂದ, ನೇಮಕಾತಿಗಳು ಮತ್ತಷ್ಟು ವಿಳಂಬವಾಗುತ್ತವೆ.

2.7 ಲಕ್ಷ ಖಾಲಿ ಹುದ್ದೆ:
ಚಳಿಗಾಲದ ಅಧಿವೇಶನದಲ್ಲಿ ಸರ್ಕಾರ ನೀಡಿದ ಅಂಕಿ ಅಂಶದ ಪ್ರಕಾರ ರಾಜ್ಯದ
43 ಇಲಾಖೆಗಳಲ್ಲಿ ಒಟ್ಟು 2.73 ಲಕ್ಷ ಉದ್ಯೋಗಗಳು ಖಾಲಿ ಇದ್ದು, ಶಿಕ್ಷಣ ಇಲಾಖೆಯಲ್ಲಿ 70,000 ಹಾಗೂ ಆರೋಗ್ಯ ಇಲಾಖೆಯಲ್ಲಿ 35,000 ಹಾಗೂ ಗೃಹ ಇಲಾಖೆಯಲ್ಲಿ 23,500 ಹುದ್ದೆಗಳು ಖಾಲಿ ಇವೆ ಎನ್ನಲಾಗುತ್ತಿದೆ.

ಖಾಲಿ ಹುದ್ದೆಗಳ ಭರ್ತಿಯಾಗದೇ ಹಲವು ವರ್ಷಗಳಿಂದ ಹಾಗೇ ಇದ್ದು, ಸರ್ಕಾರ ಇವುಗಳಲ್ಲಿ ಕೆಲವನ್ನಾದರೂ ಭರ್ತಿ ಮಾಡುವ ಒತ್ತಡದಲ್ಲಿದೆ. ಈ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಕಳೆದ ತಿಂಗಳು ಧಾರವಾಡದಲ್ಲಿ ಸಾವಿರಾರು ಯುವಕರು ಬೃಹತ್​ ಪ್ರತಿಭಟನೆ ನಡೆಸಿ ಬೇಡಿಕೆ ಈಡೇರುವವರೆಗೆ ಸರ್ಕಾರದ ಮೇಲೆ ಒತ್ತಡ ಮುಂದುವರೆಯಲಿದೆ ಎಂದು ಎಚ್ಚರಿಸಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ