LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನದ ವತಿಯಿಂದ ಇಂದು ದಿನಾಂಕ
27-06-2026 ರಂದು ಬೆಂಗಳೂರು ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ನಾಡಪ್ರಭು ಕೆಂಪೇಗೌಡ ಅವರ 517 ನೇ  ಜಯಂತಿ ಕಾರ್ಯಕ್ರಮ ಹಾಗೂ ದಿನಾಂಕ: 28-06-2026 ರಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 30ನೇ ಸಂಸ್ಥಾಪನಾ ದಿನಾಚರಣೆ ಮತ್ತು ನಶಾ ಮುಕ್ತ ಭಾರತ್ ಕಾನ್ ಕ್ಲೇವ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಭಾರತದ ಉಪರಾಷ್ಟ್ರಪತಿಗಳನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಯು.ಟಿ.ಖಾದರ್ ಫರೀದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ. ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಕಾಂತರಾಜು.ಪಿ.ಎಸ್ ಸೇರಿದಂತೆ ಗಣ್ಯರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಕೋಗಿಲೆ ಎಸ್.ಜಾನಕಿಗೆ ನುಡಿ-ನಮನ, ಗಾಯನ ಕಾರ್ಯಕ್ರಮ ಉದ್ಘಾಟಿಸಿದ ಬಿ.ಕಾಂತರಾಜ್ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಚಿವ ಟಿ.ರಘುಮೂರ್ತಿಗೆ ಮನವಿ  ಚಿತ್ರದುರ್ಗ ಮೆಡಿಕಲ್ ಕಾಲೇಜ್ ಡೀನ್ ಡಾ.ಯುವರಾಜ್‌ ಭ್ರಷ್ಟಾಚಾರದ ವಿರುದ್ದ ತನಿಖೆ ನಡೆಸಲು ಧರಣಿ  ನಿವೇಶನಕ್ಕಾಗಿ ಭೂಮಿ ಕಾಯ್ದಿರಿಸುವಂತೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ  ಸಾರ್ವಜನಿಕ ಶೌಚಾಲಯ ತೆರವುಗೊಳಿಸುವಂತೆ ಸ್ಥಳೀಯರ ಆಗ್ರಹ  STP ಘಟಕ ಸ್ಥಾಪಿಸುವಂತೆ ಆಗ್ರಹಿಸಿ ಆಗಸ್ಟ್ 15 ರಂದು ಉಪವಾಸ ಸತ್ಯಾಗ್ರಹಮಾಜಿ ಶಾಸಕ ನಿಸರ್ಗ ನಾರಾಯಣ ಸ್ವಾಮಿ ಮೇಲೆ ಮಾಡಿರುವ ಆರೋಪ ಸುಳ್ಳು-ಮಂಜುನಾಥ್ನೂತನ ಕಾರ್ಮಿಕ ಸಂಹಿತೆ ವಿರೋಧಿಸಿ ಜೈಲ್ ಭರೋ ಚಳುವಳಿಕರ್ತವ್ಯ ಲೋಪವೆಸಗಿದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ-ಸಚಿವ ಟಿ. ರಘುಮೂರ್ತಿಅಂಬೇಡ್ಕರ್ ಸಂವಿಧಾನ ಎಲ್ಲಾ ವರ್ಗದ ಜನರ ಬಾಳಿಗೆ ದಾರಿ ದೀಪ- ಉಪನ್ಯಾಸಕ ಡಾ.ಎಸ್.ಮಾರುತಿ