Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಪಾಲರ ಭಾಷಣ ಮಂಡಿಸಿದ ಕಾರ್ಯದರ್ಶಿವಿಶಾಲಾಕ್ಷಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯಪಾಲರು ಹಾಗೂ ಸರ್ಕಾರದ ಸಂಘರ್ಷದ ಮಧ್ಯೆ ರಾಜ್ಯಪಾಲರ ಭಾಷಣವನ್ನು ಸದನದಲ್ಲಿ ಮಂಡಿಸಲಾಯಿತು.
ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸರ್ಕಾರ ಸಿದ್ಧಪಡಿಸಿದ ಭಾಷಣದ ಪ್ರತಿಯನ್ನು‌ ಮಂಡಿಸಿ
, ಅದರಲ್ಲಿನ ಅಂಶವನ್ನು ಓದದೇ ತಾವೇ ಬರೆದು ತಂದ ಪ್ಯಾರಾವನ್ನು ಓದಿ ಸದನದಿಂದ ತೆರಳಿದರು.

ಬಳಿಕ ಪುನಾರಂಭಗೊಂಡ ಕಲಾಪದಲ್ಲಿ ಸರ್ಕಾರ ಸಿದ್ಧಪಡಿಸಿದ ರಾಜ್ಯಪಾಲರ ಭಾಷಣವನ್ನು ವಿಧಾನಸಭೆ ಕಾರ್ಯದರ್ಶಿ ಎಂ. ಕೆ. ವಿಶಾಲಾಕ್ಷಿ ಮಂಡನೆ ಮಾಡಿದರು.

ವಿಬಿ ಜಿ ರಾಮ್ ಜಿ ವಿರುದ್ಧ ಪ್ರಸ್ತಾಪ :
ರಾಜ್ಯ ಸರ್ಕಾರ ಸಿದ್ಧಪಡಿಸಿದ ರಾಜ್ಯಪಾಲರ ಭಾಷಣದಲ್ಲಿ ಮೊದಲ
11 ಪ್ಯಾರಾಗಳಲ್ಲಿ ವಿಬಿ ಜಿ ರಾಮ್​ ಜಿ ಕಾಯ್ದೆ ವಿರೋಧಿಸಿ, ಕೇಂದ್ರ ಸರ್ಕಾರದ ನೀತಿ ಟೀಕಿಸಿರುವ ಅಂಶಗಳನ್ನು ಸೇರಿಸಲಾಗಿದೆ.
ನನ್ನ ಸರ್ಕಾರವು ಅಭಿವೃದ್ಧಿ
, ಸಾಮಾಜಿಕ ನ್ಯಾಯ, ಹಣಕಾಸಿನ ಶಿಸ್ತು, ಪ್ರಾದೇಶಿಕ ನ್ಯಾಯ, ಜನಸ್ನೇಹಿ ಆಡಳಿತ, ಕಾನೂನು ಸುವ್ಯವಸ್ಥೆ ಮುಂತಾದವುಗಳಲ್ಲಿ ಅಭೂತಪೂರ್ವ ಸಾಧನೆಗಳನ್ನು ಮಾಡುತ್ತಿದೆ.

ಪರಿಣಾಮಕಾರಿ ವಿಕೇಂದ್ರೀಕರಣ ವ್ಯವಸ್ಥೆಯನ್ನು ಜಾರಿಗೊಳಿಸಿರುವ ರಾಜ್ಯಗಳಲ್ಲಿ ಕರ್ನಾಟಕವು ಮೊದಲ ಸ್ಥಾನದಲ್ಲಿದೆ ಹಾಗೂ ಇಂಡಿಯಾ ಜಸ್ಟೀಸ್‌2025ರ ವರದಿ ಪ್ರಕಾರ, ಪೊಲೀಸ್‌ ಮತ್ತು ನ್ಯಾಯದಾನ ವ್ಯವಸ್ಥೆ ರೂಪಿಸಿರುವ ದೇಶದ ಮಧ್ಯಮ ಮತ್ತು ದೊಡ್ಡ ರಾಜ್ಯಗಳಲ್ಲಿ ಮೊದಲ ಸ್ಥಾನದಲ್ಲಿದೆ.
ಸಾಮಾಜಿಕ ಆರ್ಥಿಕ ಅಭಿವೃದ್ಧಿ
, ಜನಸ್ನೇಹಿ ಕಾನೂನುಗಳ ರಚನೆ, ಕೈಗಾರಿಕಾ ಪರವಾದ ನೀತಿಗಳ ರಚನೆ ಮತ್ತು ಅನುಷ್ಠಾನ, ಸುಸಂಬದ್ಧವಾದ ಸಾರಿಗೆ ವ್ಯವಸ್ಥೆ, ಸರ್ಕಾರದ ಅಧೀನದ ಸಂಸ್ಥೆಗಳ ಕಾರ್ಯವೈಖರಿ, ಪೊಲೀಸ್, ನ್ಯಾಯ ವ್ಯವಸ್ಥೆ ಮುಂತಾದವುಗಳಲ್ಲಿ ಕರ್ನಾಟಕವು ಇಂದು ದೇಶದಲ್ಲಿ ಹಲವು ಮಾದರಿಗಳನ್ನು ಸೃಷ್ಟಿಸಿದೆ ಎಂದಿದೆ.

ರಾಜ್ಯವು ಒಕ್ಕೂಟ ವ್ಯವಸ್ಥೆಯಲ್ಲಿ ಆರ್ಥಿಕ ಮತ್ತು ನೀತಿಕಾರಕ ವಿಚಾರಗಳಲ್ಲಿ ದಮನಕಾರಿ ಪರಿಸ್ಥಿತಿಯನ್ನು ಎದುರಿಸುತ್ತಿದೆ. ತೆರಿಗೆ ಪಾಲು, ಕೇಂದ್ರ ಪುರಸ್ಕೃತ ಯೋಜನೆಗಳು, ಕೇಂದ್ರದ ಯೋಜನೆಗಳು, ವಿಶೇಷ ಯೋಜನೆಗಳು ಮುಂತಾದವುಗಳಲ್ಲಿ ಅನ್ಯಾಯಗಳಿಗೆ ತುತ್ತಾಗಿದೆ. ದೇಶದ ಆರ್ಥಿಕತೆಯಲ್ಲಿ ಚಾಲಕ ಸ್ಥಾನದಲ್ಲಿರುವ ಕರ್ನಾಟಕವನ್ನು ಆರ್ಥಿಕವಾಗಿ ದಮನಿಸಿದರೆ ಅದರ ಪರಿಣಾಮ ಇಡೀ ದೇಶದ ಮೇಲೆ ಉಂಟಾಗುತ್ತದೆ ಎಂಬುದನ್ನು ಒಕ್ಕೂಟ ಸರ್ಕಾರವು ಗಂಭೀರವಾಗಿ ಪರಿಗಣಿಸಬೇಕಾಗಿದೆ.

15ನೇ ಹಣಕಾಸು ಆಯೋಗದ ಅವಧಿಯಲ್ಲಿ ಸುಮಾರು 1.25 ಲಕ್ಷ ಕೋಟಿ ರೂ.ಗಳಷ್ಟು ಬೃಹತ್‌ಪ್ರಮಾಣದ ಸಂಪನ್ಮೂಲಗಳು ರಾಜ್ಯಕ್ಕೆ ಸಿಗದೇ ವಂಚನೆಯಾಗಿದೆ ಎಂಬುದನ್ನು 16ನೇ ಹಣಕಾಸು ಆಯೋಗಕ್ಕೆ ಮನವರಿಕೆ ಮಾಡಿಕೊಡಲಾಗಿದೆ. ಮುಂದಿನ ದಿನಗಳಲ್ಲಿ ಈ ಅನ್ಯಾಯವು ಸರಿಯಾಗಬಹುದೆಂಬುದು ಸರ್ಕಾರದ ಖಚಿತ ನಂಬುಗೆಯಾಗಿದೆ ಎಂದು ವಿವರಿಸಿದೆ‌.

ಇಷ್ಟರ ನಡುವೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಕಾಯ್ದೆಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಆ ಮೂಲಕ ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರು, ಸಣ್ಣ ರೈತರ, ಮಹಿಳೆಯರ ಉದ್ಯೋಗದ ಮತ್ತು ನಿರುದ್ಯೋಗ ಭತ್ಯೆಯ ಹಕ್ಕನ್ನು ಕಸಿದುಕೊಂಡಿದೆ. ಗ್ರಾಮೀಣ ಭಾರತದ ಅಭಿವೃದ್ಧಿ ಪರ್ವದ ಬೃಹತ್‌ಅಧ್ಯಾಯವಾಗಿದ್ದ ಮನರೇಗಾ" ಕಾಯ್ದೆಯ ರದ್ಧತಿಯ ಮೂಲಕ ಭಾರತೀಯ ಗ್ರಾಮೀಣ ಬದುಕನ್ನು ದುರ್ಬಲಗೊಳಿಸಲಾಗಿದೆ ಎಂದು ಆಕ್ಷೇಪಿಸಿದೆ.

ಗ್ರಾಮಗಳು ನಾಶವಾದಲ್ಲಿ ಭಾರತವೂ ನಾಶವಾಗುತ್ತದೆ: ಗಾಂಧೀಜಿಯವರು, ಗ್ರಾಮಗಳು ಸ್ವತಂತ್ರವಾದ, ಸ್ವಾಯತ್ತವಾದ ಘಟಕಗಳಾಗಬೇಕು ಎಂದು ಆಶಿಸಿದ್ದರು. ಗ್ರಾಮಗಳು ನಾಶವಾದಲ್ಲಿ ಭಾರತವೂ ನಾಶವಾಗುತ್ತದೆ. ಈ ದೇಶ ಯಾವ ಸಂದೇಶವನ್ನು ಜಗತ್ತಿಗೆ ನೀಡಬೇಕೊ ಅದು ಇಲ್ಲವಾಗುತ್ತದೆ. ಗ್ರಾಮಗಳನ್ನು ಶೋಷಣೆ ಮಾಡುವುದು ಪೂರ್ಣವಾಗಿ ನಿಂತರೆ ಮಾತ್ರವೇ ಗ್ರಾಮ ಪುನರುಜ್ಜೀವನ ಸಾಧ್ಯವಾದೀತು. ಗ್ರಾಮಗಳು ಸ್ವಾವಲಂಬಿಗಳಾಗುವ ಕಡೆಗೆ ನಮ್ಮ ಗಮನವನ್ನೆಲ್ಲ ಕೇಂದ್ರೀಕರಿಸಬೇಕು ಎಂದಿದ್ದರು.

ಗ್ರಾಮಗಳು ಕೊಳಕು ಕೂಪಗಳಾಗಬಾರದು. ಅನ್ನ, ಉದ್ಯೋಗಗಳನ್ನು ಹುಡುಕಿಕೊಂಡು ನಗರಗಳಿಗೆ ವಲಸೆ ಹೋಗಬಾರದೆಂಬುದೂ ಸಹ ಗಾಂಧೀಜಿಯವರ ಅಭಿಪ್ರಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು 2005ರಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಪ್ರಾರಂಭಿಸಿತ್ತು. ಈ ಯೋಜನೆಯಲ್ಲಿ ರಾಜ್ಯವು ಕಳೆದ 20 ವರ್ಷಗಳಲ್ಲಿ 76.89 ಲಕ್ಷ ಕಾಮಗಾರಿಗಳನ್ನು 61.03 ಸಾವಿರ ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿದೆ. 182.5 ಕೋಟಿ ಮಾನವ ದಿನಗಳಷ್ಟು ಉದ್ಯೋಗವನ್ನು ಸೃಜಿಸಿದೆ‌ಎಂದು ವಿವರಿಸಲಾಗಿದೆ.

ಮನರೇಗಾ ಕಾಯ್ದೆಯು ಖಾತ್ರಿ ಮಾಡಿದ್ದ ಉದ್ಯೋಗದ ಖಾತ್ರಿಯನ್ನು ಹೊಸ ವಿಬಿ ಜಿ ರಾಮ್​ ಜಿ ಕಾಯ್ದೆಯು ಕಿತ್ತುಕೊಂಡಿದೆ. ಮನರೇಗಾ ಕಾಯ್ದೆಯ ಸೆಕ್ಷನ್‌3ರ ಪ್ರಕಾರ, ಯಾವುದೇ ಪಂಚಾಯಿತಿಯಲ್ಲಿ ಉದ್ಯೋಗ ನೀಡಬೇಕೆಂದು ಅರ್ಜಿ ಹಾಕಿದ ಪ್ರತಿಯೊಬ್ಬರಿಗೂ ಉದ್ಯೋಗ ನೀಡಬೇಕೆಂದು ಸ್ಪಷ್ಟವಾಗಿ ನಮೂದಿಸಲಾಗಿದೆ. ಬೇಡಿಕೆಯನ್ನು ಆಧರಿಸಿ ಉದ್ಯೋಗ ನೀಡಬೇಕೆಂಬ ತತ್ವವನ್ನು ಧ್ವಂಸ ಮಾಡಿ ಪೂರೈಕೆ ಆಧಾರಿತ ಯೋಜನೆ ಮಾಡಲಾಗಿದೆ.

ಬಲಿಷ್ಟರ ಹಿತಾಸಕ್ತಿ ಕಾಪಾಡಲು ಯೋಜನೆ:
ಕಾರ್ಪೊರೇಟ್‌ ಬಂಡವಾಳಿಗರ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ
, ವಿಬಿ ಜಿ ರಾಮ್​ ಜಿ ಯೋಜನೆ ರೂಪಿಸಲಾಗಿದೆ. ಆ ಮೂಲಕ ಗ್ರಾಮೀಣ ಜನರ ಹಿತಾಸಕ್ತಿಯನ್ನು ಗಾಳಿಗೆ ತೂರಲಾಗಿದೆ. ಇದರಿಂದಾಗಿ ಗ್ರಾಮೀಣ ಆಸ್ತಿ ಸೃಜನೆಯ ಮೇಲೆ ಮತ್ತು ಕೂಲಿಕಾರರು ಅವರು ಇರುವ ಸ್ಥಳಗಳಲ್ಲಿಯೇ ಉದ್ಯೋಗ ಒದಗಿಸಬೇಕೆಂಬ ಘನವಾದ ಉದಾತ್ತ ಉದ್ದೇಶಗಳನ್ನು ತರಗೆಲೆಗಳಂತೆ ಉದುರಿಸಲಾಗಿದೆ. ಇಂತಹ ಪ್ರಗತಿ ವಿರೋಧಿ ಕ್ರಮವನ್ನು ನನ್ನ ಸರ್ಕಾರ ಬಲವಾಗಿ ಖಂಡಿಸುತ್ತದೆ. ಹೆಸರಾಂತ ಮನರೇಗಾ ರಾಷ್ಟ್ರಾದ್ಯಂತ ಪ್ರಸಿದ್ಧಿ ಪಡೆದಿತ್ತು. ಪ್ರಗತಿಯ ಪ್ರತೀಕವಾಗಿತ್ತು ಎಂಬುದನ್ನು ನೀರಿನಲ್ಲಿ ಹೋಮ ಮಾಡಿದಂತೆ ಕೇಂದ್ರ ಸರ್ಕಾರ ಈ ಯೋಜನೆಗೆ ತಿಲಾಂಜಲಿಯನ್ನಿಟ್ಟಿದೆ ಎಂದು ಟೀಕಿಸಿದೆ.

ಮನರೇಗಾ ಯೋಜನೆಯಲ್ಲಿದ್ದ ಗಾಂಧೀಜಿಯವರ ಪ್ರಧಾನ ಆಶಯವಾದ ಗ್ರಾಮ ಸ್ವರಾಜ್ಯದ ಕಲ್ಪನೆಯನ್ನು ಹೊಸ ಕಾಯ್ದೆಯು ದುರ್ಬಲಗೊಳಿಸಿದೆ. ರಾಷ್ಟ್ರದ ಪ್ರಜಾಸತ್ತೆಗೆ ಮೂಲಭೂತ ಅಡಿಪಾಯ ಒದಗಿಸುವ ಪಂಚಾಯತ್‌ರಾಜ್‌ಸಂಸ್ಥೆಗಳು ಅಧಿಕಾರ ವಿಕೇಂದ್ರಿಕರಣದ ಸಂಕೇತಗಳು. ಈ ವಿಕೇಂದ್ರಿಕೃತ ವ್ಯವಸ್ಥೆಯ ಅಡಿಪಾಯವನ್ನೇ ಬುಡಮೇಲು ಮಾಡಿ ಕೇಂದ್ರಿಕೃತ ವ್ಯವಸ್ಥೆಗೆ ಕೇಂದ್ರ ಸರ್ಕಾರವು ಬುನಾದಿ ಹಾಕಿದೆ.

ಗ್ರಾಮಸಭೆಗಳ ಅಧಿಕಾರ ಮೊಟಕು;
ಮನರೇಗಾ ಕಾಯ್ದೆಯಲ್ಲಿ ಕಾಮಗಾರಿಗಳನ್ನು ಗ್ರಾಮ ಸಭೆಗಳಲ್ಲಿಟ್ಟು ತೀರ್ಮಾನ ಮಾಡಿ ಅನುಷ್ಠಾನ ಮಾಡಲಾಗುತ್ತಿತ್ತು. ಹೊಸ ಕಾಯ್ದೆಯಲ್ಲಿ ಗ್ರಾಮಸಭೆಗಳಿಗಿದ್ದ ಅಧಿಕಾರವನ್ನು ಕೇಂದ್ರ ಸರ್ಕಾರದ ಮಾನದಂಡಗಳ ಮೂಲಕ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.


ಕೇಂದ್ರದ ಈ ಕ್ರಮಗಳು ಕೇವಲ ಪ್ರಜಾಸತ್ತಾತ್ಮಕತೆಗೆ ವಿರೋಧಿ ಮಾತ್ರ ಅಲ್ಲ, ರಾಷ್ಟ್ರದ ಬಹುಪಾಲು ನಾಗರೀಕರ ಬೇಡಿಕೆಗಳನ್ನು ನಿರ್ಲಕ್ಷಿಸುವ ಮತ್ತು ರಾಷ್ಟ್ರದ ಹಿತಾಸಕ್ತಿಯನ್ನು ವಿನಾಶದ ಅಂಚಿಗೆ ದೂಡುವ ಪ್ರಗತಿ ವಿರೋಧಿ ಕ್ರಮವಾಗಿದೆ ಎಂದು ಆಕ್ಷೇಪಿಸಿದೆ.

ನರೇಗಾ ಯೋಜನೆಯಿಂದಾಗಿ ಗುಳೆ ಹೋಗುವ ಸಮಸ್ಯೆ ಕಡಿಮೆಯಾಗಿತ್ತು. ಆದರೆ, ಹೊಸ ಕಾಯ್ದೆಯಲ್ಲಿ ನಿರ್ಧಾರಗಳನ್ನು ಕೇಂದ್ರದಿಂದ ಹೇರಲಾಗುತ್ತದೆ. ದೆಹಲಿಯಲ್ಲಿ ಅಧಿಕಾರಿಗಳ ಪರಿಷತ್ತನ್ನು ರಚಿಸಲಾಗುತ್ತದೆ. ಈ ಅಧಿಕಾರಿಗಳ ಪರಿಷತ್ತು ಯಾವ ಪಂಚಾಯಿತಿಗಳಲ್ಲಿ ಈ ಯೋಜನೆಗಳನ್ನು ಜಾರಿಗೆ ತರಬೇಕೆಂಬುದನ್ನು ನಿರ್ಣಯಿಸುತ್ತದೆ.

ಉದ್ಯೋಗ ಅರಸಿ ದೊಡ್ಡ ದೊಡ್ಡ ಪಟ್ಟಣಗಳಿಗೆ ಗುಳೆ ಹೋಗುವ ಅಥವಾ ವಲಸೆ ಹೋಗುವ ವ್ಯವಸ್ಥೆಯನ್ನು ಪುನರ್ ಸ್ಥಾಪಿಸುವ ಈ ʼವಿಬಿ ಜಿ ರಾಮ್​ ಜಿʼ ಯೋಜನೆಯನ್ನು ನನ್ನ ಸರ್ಕಾರ ಅತ್ಯಂತ ಪ್ರಬಲವಾಗಿ ವಿರೋಧಿಸುತ್ತದೆ.‌ಈ ಕಾಯ್ದೆಯು ದಲಿತರು, ಆದಿವಾಸಿಗಳು, ಮಹಿಳೆಯರು, ಹಿಂದುಳಿದವರು, ರೈತಾಪಿ ಸಮುದಾಯಗಳ ಜನರ ಉದ್ಯೋಗದ ಹಕ್ಕುಗಳನ್ನು ಮೊಟಕುಗೊಳಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಉದ್ಯೋಗ ಖಾತ್ರಿಗೆ ಸಂಬಂಧಿಸಿದ ಕಾಯ್ದೆಯನ್ನು ರದ್ದುಗೊಳಿಸಿ ಹೊಸ ಕಾಯ್ದೆಯನ್ನು ಜಾರಿಗೊಳಿಸುವಾಗ ರಾಜ್ಯಗಳ ಅಭಿಪ್ರಾಯ ಪಡೆಯಬೇಕಾಗಿತ್ತು. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯಗಳ ಪಾಲೂ ಇರುತ್ತದೆ. ಹೀಗಿರುವಾಗ ರಾಜ್ಯಗಳನ್ನು ಸಂಪರ್ಕಿಸದೆ ಜಾರಿಗೊಳಿಸಿರುವುದು ಸಂವಿಧಾನ ಬಾಹಿರ ನಡೆಯಾಗಿರುತ್ತದೆ. ಮನರೇಗಾದಲ್ಲಿದ್ದ ಕಾರ್ಮಿಕ ಕೇಂದ್ರಿತ ಹಕ್ಕುಗಳನ್ನು ಮೊಟಕುಗೊಳಿಸಿ ಅವರನ್ನು ಗುತ್ತಿಗೆದಾರರ ಅಧೀನಕ್ಕೆ ನೀಡಲಾಗುತ್ತಿದೆ. ಬೆಲೆಯೇರಿಕೆ, ಹಣದುಬ್ಬರಗಳನ್ನು ಆಧರಿಸಿ ಕೂಲಿಯನ್ನು ಪರಿಷ್ಕರಿಸುತ್ತಿದ್ದ ಅವಕಾಶಗಳೂ ಹೊಸ ಕಾಯ್ದೆಯಲ್ಲಿ ಕ್ಷೀಣಿಸಿವೆ. ಇದರಿಂದ ಬಡ ಕೂಲಿ ಕಾರ್ಮಿಕರ ಸಾಮಾಜಿಕ ಭದ್ರತೆಯು ಇಲ್ಲವಾಗುತ್ತಿದೆ. ಮಹಾತ್ಮ ಗಾಂಧೀಜಿಯವರ ಹೆಸರನ್ನು ತೆಗೆದು ಹಾಕಲಾಗಿದೆ ಎಂದು ಟೀಕಿಸಲಾಗಿದೆ.

ಕೇಂದ್ರ ಸರ್ಕಾರದ ನೀತಿಗಳಿಂದ ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿರುವ ರಾಜ್ಯ ಸರ್ಕಾರಗಳು ಹೊಸ ಕಾಯ್ದೆಯ ಪ್ರಕಾರ ಶೇ.40ರಷ್ಟು ಅನುದಾನವನ್ನು ನೀಡಬೇಕಾಗುತ್ತದೆ. ರಾಜ್ಯವು ಅನುದಾನ ನೀಡದಿದ್ದರೆ ಕೇಂದ್ರವು ʼವಿಬಿ ಜಿ ರಾಮ್​ ಜಿʼ ಯೋಜನೆಗೆ ಅನುದಾನಗಳನ್ನು ನೀಡುವುದಿಲ್ಲ. ಹಾಗಾಗಿ, ಯೋಜನೆಯು ನಿಧಾನವಾಗಿ ಅವಸಾನದ ಹಾದಿಯ ಕಡೆಗೆ ತೆರಳುತ್ತದೆ.

ಈ ಎಲ್ಲ ಕಾರಣಗಳಿಂದ ಕೇಂದ್ರ ಸರ್ಕಾರವು ತಂದಿರುವ ಗುತ್ತಿಗೆದಾರ ಕೇಂದ್ರಿತ, ಬೃಹತ್‌ಭ್ರಷ್ಟಾಚಾರಕ್ಕೆ ಅವಕಾಶ ಕಲ್ಪಿಸುವ 'ವಿಬಿ ಜಿ ರಾಮ್​ ಜಿ' ಕಾನೂನನ್ನು ತಕ್ಷಣ ರದ್ದುಪಡಿಸಿ, ಬಡವರ, ಕೃಷಿ ಕಾರ್ಮಿಕರ, ಗ್ರಾಮೀಣ ಆಸ್ತಿ ಸೃಜನೆಗೆ ಅವಕಾಶ ಕಲ್ಪಿಸುವ, ನಿರುದ್ಯೋಗಿ ಭತ್ಯೆ ಒದಗಿಸುವ ಕಾರ್ಮಿಕರು ಅವರಿರುವ ಸ್ಥಳದಲ್ಲಿಯೇ ಕೆಲಸ ಒದಗಿಸುವ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ಮರು ಸ್ಥಾಪಿಸಬೇಕೆಂದು ನನ್ನ ಸರ್ಕಾರ ಕೇಂದ್ರವನ್ನು ಒತ್ತಾಯಿಸುತ್ತದೆ ಎಂದು ಆಗ್ರಹಿಸಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ