ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಮೆಡಿಕಲ್ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆ (ಸಿ.ಎಂ.ಸಿ.ಆರ್.ಐ) ಕ್ಯಾಂಪಸ್ನಲ್ಲಿರುವ ಸರ್ಕಾರಿ ಬಿ.ಎಸ್ಸಿ. ನರ್ಸಿಂಗ್ ಕಾಲೇಜಿನಲ್ಲಿ 2026-27ನೇ ಸಾಲಿನ ಬಿಎಸ್ಸಿ ನರ್ಸಿಂಗ್ ಕೋರ್ಸ್ನ ಪ್ರವೇಶಾತಿಗೆ ಕೆಇಎ ವತಿಯಿಂದ ಕೌನ್ಸೆಲಿಂಗ್ ನಡೆಸಿ ನಂತರ ಭರ್ತಿಯಾಗದೆ ಉಳಿದಿರುವ 01 ಸೀಟನ್ನು ಮೆರಿಟ್ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುವುದು.
ಕೆಇಎನಲ್ಲಿ ನೋಂದಾಯಿಸಿಕೊಂಡಿರುವ ಮತ್ತು ಸಿಇಟಿ ನೋಂದಣಿ ಸಂಖ್ಯೆ ಹೊಂದಿರುವ ಅರ್ಹ ವಿದ್ಯಾರ್ಥಿಗಳಿಗೆ ನಿಯಮಾನುಸಾರ ಪಾರದರ್ಶಕವಾಗಿ ಸರ್ಕಾರದ ಆದೇಶದ ಪ್ರಕಾರ ಪ್ರಾಂಶುಪಾಲರ ಹಂತದಲ್ಲಿ ಸೀಟು ಹಂಚಿಕೆ ಮಾಡಲಾಗುತ್ತದೆ. ಇದಕ್ಕಾಗಿ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು, ನೋಡೆಲ್ ಅಧಿಕಾರಿಗಳು ಹಾಗೂ ಪ್ರಾಂಶುಪಾಲರನ್ನು ಒಳಗೊಂಡ ಸಮಿತಿಯ ಮೂಲಕ ಆಫ್ಲೈನ್ ಕೌನ್ಸೆಲಿಂಗ್ ನಡೆಸಲಾಗುವುದು.
ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 31 ರಂದು ಮಧ್ಯಾಹ್ನ 1 ಗಂಟೆಯೊಳಗೆ ಚಿತ್ರದುರ್ಗ ಸಮೀಪದ ಜಿ.ಆರ್.ಹಳ್ಳಿಯ, ದಾವಣಗೆರೆ ವಿಶ್ವವಿದ್ಯಾಲಯ ಜ್ಞಾನ ಗಂಗೋತ್ರಿ ಸ್ನಾತಕೋತ್ತರ ಅಧ್ಯಯನ ಕೇಂದ್ರ ಆವರಣದಲ್ಲಿ ಸರ್ಕಾರಿ ಬಿ.ಎಸ್ಸಿ. ನರ್ಸಿಂಗ್ ಕಾಲೇಜಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಕೌನ್ಸೆಲಿಂಗ್ ನಡೆಸಿ ಮಧ್ಯಾಹ್ನ 1.00 ಗಂಟೆಯ ನಂತರ ಸೀಟು ಹಂಚಿಕೆ ಮಾಡಲಾಗುವುದು. ಸೀಟು ಹಂಚಿಕೆ ಆಗಿರುವ ಅಭ್ಯರ್ಥಿಗಳು ಅದೇ ದಿನದಂದು ಸಂಜೆ 5.00 ಗಂಟೆಯ ಒಳಗೆ ಕಾಲೇಜಿಗೆ ಭೇಟಿ ನೀಡಿ ವರದಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ಕೆಲಸದ ಸಮಯದಲ್ಲಿ ನೇರವಾಗಿ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ನರ್ಸಿಂಗ್ ಕಾಲೇಜು ಮುಖ್ಯ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



