LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬರ ಎದುರಿಸಲು ಸರ್ಕಾರ ಸಿದ್ಧ: ಡಿಸಿಎಂ ಜಿ. ಪರಮೇಶ್ವರ್

Advertisement
Advertisement

ಚಂದ್ರವಳ್ಳಿ ನ್ಯೂಸ್,ಬೆಂಗಳೂರು:
ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಸಂಪೂರ್ಣ ಸಿದ್ಧವಾಗಿದೆ. ಕುಡಿಯುವ ನೀರು ಹಾಗೂ ಅಗತ್ಯ ಪರಿಹಾರ ಕಾಮಗಾರಿಗಳಿಗೆ ಅನುದಾನದ ಕೊರತೆಯಿಲ್ಲ ಎಂದು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಸದಾಶಿವನಗರದ ತಮ್ಮ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಪ್ರತಿಯೊಬ್ಬ ಶಾಸಕರಿಗೆ ತಲಾ 1 ಕೋಟಿ ರೂ. ಹಾಗೂ ಕುಡಿಯುವ ನೀರಿನ ಪೂರೈಕೆಗಾಗಿ ಪ್ರತಿ ಜಿಲ್ಲೆಗೆ 5 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಜೊತೆಗೆ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 329 ಕೋಟಿ ರೂ. ಲಭ್ಯವಿದೆ" ಎಂದು ಮಾಹಿತಿ ನೀಡಿದರು.

ಬರ ಪರಿಸ್ಥಿತಿ ಪರಾಮರ್ಶೆ ಹಾಗೂ ಉದ್ಯೋಗ ಸೃಷ್ಟಿ:
ಜುಲೈ
25 ರಂದು ಬೆಂಗಳೂರು ವಿಭಾಗ ಹಾಗೂ ತದನಂತರ ಮೈಸೂರು ವಿಭಾಗದ ಪ್ರಗತಿ ಪರಿಶೀಲನಾ ಸಭೆಯನ್ನು ಮುಖ್ಯಮಂತ್ರಿಗಳೊಂದಿಗೆ ನಡೆಸಿ, ರಾಜ್ಯದ ಬರ ಪರಿಸ್ಥಿತಿಯ ಸಂಪೂರ್ಣ ಚಿತ್ರಣ ಪಡೆಯಲಾಗುವುದು. ಮಳೆ ಕೊರತೆಯಿಂದಾಗಿ ಮೊದಲು ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿದ್ದು, ಆಗಸ್ಟ್‌ನಲ್ಲಿ ಮಳೆಯಾಗುವ ನಿರೀಕ್ಷೆಯಲ್ಲಿದ್ದಾರೆ. ಜನರು ಉದ್ಯೋಗಕ್ಕಾಗಿ ಗುಳೆ ಹೋಗುವುದನ್ನು ತಪ್ಪಿಸಲು ವಿಬಿ ಜಿ ರಾಮ್ ಜಿ ಯೋಜನೆಯಡಿ ತಕ್ಷಣವೇ ಕಾಮಗಾರಿಗಳನ್ನು ಆರಂಭಿಸಿ ಉದ್ಯೋಗ ನೀಡಲು ಎಲ್ಲ ಜಿಲ್ಲಾ ಪಂಚಾಯತ್ ಸಿಇಒಗಳಿಗೆ ಸೂಚಿಸಲಾಗಿದೆ. ಇನ್ನು ಕೇಂದ್ರ ಸರ್ಕಾರಕ್ಕೆ ಬರ ಪರಿಹಾರಕ್ಕಾಗಿ ಪತ್ರ ಬರೆಯಲಾಗಿದ್ದು, ಆಗಸ್ಟ್‌ನಲ್ಲಿ ನಿಯಮಾನುಸಾರ ಅನುದಾನ ಬಿಡುಗಡೆಯಾಗುವ ಭರವಸೆ ಇದೆ ಎಂದರು.

ನೀಟ್ ಅಕ್ರಮ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು:
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಡಿಸಿಎಂ
, "ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬಹಳ ತಡವಾಗಿ ಪ್ರತಿಕ್ರಿಯಿಸಿದ್ದಾರೆ. ವಿದ್ಯಾರ್ಥಿಗಳ ಹಿತ ಕಾಯುವುದಾಗಿ ಹೇಳುವ ಪ್ರಧಾನಿಯವರು ತಕ್ಷಣವೇ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು. ಈ ವಿಷಯ ಸಂಸತ್ತಿನಲ್ಲಿ ಚರ್ಚೆಯಾಗಬೇಕು" ಎಂದು ಆಗ್ರಹಿಸಿದರು.

ಇದೇ ವೇಳೆ, ಸಂಸತ್ತಿನಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ನಡೆದ ನಡವಳಿಕೆ ಹಾಗೂ ಶಾಂತಿಯುತ ಪ್ರತಿಭಟನೆಯನ್ನು ಹತೋಟಿಗೆ ತರಲು ಯತ್ನಿಸಿದ ಕೇಂದ್ರದ ಧೋರಣೆಯನ್ನು ಖಂಡಿಸಿದ ಅವರು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭರಮಗಿರಿ ಕೆರೆ ಭಾಗದ ಸುತ್ತಮುತ್ತಲಿನ ಪ್ರದೇಶಗಳಿಗೆ ನೀರಿನ ಸಮಸ್ಯೆ ಪರಿಹಾರಕ್ಕೆ ₹1.25 ಕೋಟಿ ಅನುದಾನ ಕೋರಿ ಮನವಿಪತ್ರ ಸಲ್ಲಿಸಿದ ಸುಹಾಸ್ ಸುಧಾಕರ್ಮುದ್ದನಾಯ್ಕನಪಾಳ್ಯ ಗ್ರಾಮಕ್ಕೆ ಜಿಲ್ಲಾ ಪಂಚಾಯ್ತಿ ಸಿಇಒ ದಿಢೀರ್ ಭೇಟಿ ದೊಡ್ಡ ತುಮಕೂರು, ಕೊಡಿಗೇಹಳ್ಳಿ ಗ್ರಾಪಂಗೆ ಡಾ. ವಾಸಂತಿ ಅಮರ್ ದಿಢೀರ್ ಭೇಟಿಶಿರಾ–ಬಡವನಹಳ್ಳಿ ಚತುಷ್ಪಥ ರಸ್ತೆ ಕಾಮಗಾರಿಗೆ ಗ್ರೀನ್ ಸಿಗ್ನಲ್: ಕೇವಲ 4 ಗಂಟೆಗೆ ತಿರುಪತಿ ತಲುಪಲು ಸಾಧ್ಯ–ಸೋಮಣ್ಣಪಿಜಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ –10 ಮಂದಿಗೆ ಗಂಭೀರ ಗಾಯಬರ ಎದುರಿಸಲು ಸರ್ಕಾರ ಸಿದ್ಧ: ಡಿಸಿಎಂ ಜಿ. ಪರಮೇಶ್ವರ್ಪ್ರಶ್ನೆ ಪತ್ರಿಕೆ ಸೋರಿಕೆ ದೇಶದ ಭವಿಷ್ಯದ ವಿಚಾರ, ಬಿಜೆಪಿಯವರು ವೈಫಲ್ಯ ಒಪ್ಪಿಕೊಳ್ಳಲಿ: ಸಿಎಂ ಡಿ.ಕೆ. ಶಿವಕುಮಾರ್ ಆಗ್ರಹನೀಟ್‌ ಪತ್ರಿಕೆ ಸೋರಿಕೆ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ವಿಶೇಷ ಫಾಸ್ಟ್‌ಟ್ರ್ಯಾಕ್ ನ್ಯಾಯಾಲಯ– ಪ್ರಧಾನಿ ಮೋದಿ ಘೋಷಣೆಸೆಮಿಕಂಡಕ್ಟರ್ ವಲಯದಲ್ಲಿ ಕರ್ನಾಟಕದ ಬೃಹತ್ ಜಿಗಿತ': ಸಚಿವ ಎಂ.ಬಿ ಪಾಟೀಲ್'ದೆಹಲಿಯಲ್ಲಿ ಸಂವಿಧಾನದ ಪಾಠ, ರಾಜ್ಯದಲ್ಲಿ ಗೂಂಡಾಗಿರಿ: ಕಾಂಗ್ರೆಸ್‌ ಮೌನಕ್ಕೆ ಅಶೋಕ್ ತೀವ್ರ ತರಾಟೆ'