Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ಪದವಿ ಪ್ರದಾನ ಸಮಾರಂಭ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಉತ್ತಮ ನೈತಿಕ ಮೌಲ್ಯಗಳನ್ನು ರೂಢಿಸಿಕೊಳ್ಳುವುದು ವಿದ್ಯಾವಂತ ಸಮುದಾಯದ ಪ್ರಮುಖ ಆದ್ಯತೆಯಾಗಬೇಕು ಎಂದು ಲಾವಣ್ಯ ಕಾಲೇಜಿನ ಪ್ರಾಂಶುಪಾಲ ಎಂ.ಸಿ.ಮಂಜುನಾಥ್ ಹೇಳಿದರು.


ಇಲ್ಲಿನ ಶ್ರೀ ದೇವರಾಜ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಸ್ನಾತಕೋತ್ತರ ವಿಭಾಗದಿಂದ ಶನಿವಾರ ನಡೆದ ಎಂಬಿಎ ಮತ್ತು ಎಂಕಾಂ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪದವಿಗಳು ಉತ್ತಮ ಉದ್ಯೋಗಾವಕಾಶಗಳನ್ನು ಕಲ್ಪಿಸಿಕೊಡುವುದರ ಜೊತೆಗೆ ಸಾಮಾಜಿಕ ಅವಕಾಶಗಳನ್ನೂ ಸೃಷ್ಠಿಸುತ್ತವೆ. ಬದ್ದತೆಯಿಂದ ಕೆಲಸ ಮಾಡುವುದು ಪ್ರತಿಯೊಬ್ಬರ ಆದ್ಯತೆಯಾಗಬೇಕು. ಸಮರ್ಪಣಾ ಮನೋಭಾವ ಯಶಸ್ಸಿನ ಮೊದಲ ಹಂತವಾಗಿರುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ವ್ಯವಹಾರ ಅಧ್ಯಯನ ಮತ್ತು ವಾಣಿಜ್ಯ ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿಗಳನ್ನು ಪಡೆಯುತ್ತಿರುವ ವಿದ್ಯಾರ್ಥಿಗಳು ಕೇವಲ ಉದ್ಯೋಗಾಕಾಂಕ್ಷಿಗಳು ಮಾತ್ರವಾಗದೆ, ಉದ್ಯೋಗದಾತರಾಗಿ ಬೆಳೆಯುವ ಗುರಿ ಹೊಂದಿರಬೇಕು.

ಗ್ರಾಮೀಣ ಭಾಗಗಳಲ್ಲಿ ಅವಕಾಶಗಳನ್ನು ಬಳಸಿಕೊಂಡು ಮುನ್ನಡೆದಾಗ ಉನ್ನತ ಮಟ್ಟದ ಸಾಧನೆಗಳು ಸಾಧ್ಯವಾಗುತ್ತವೆ. ಜಾಲಪ್ಪನವರ ಆಶಯಗಳಿಗೆ ಪೂರಕವಾಗಿ ಗುಣಮಟ್ಟದ ಶಿಕ್ಷಣವನ್ನು ಒದಗಿಸುವುದು ಸಂಸ್ಥೆಯ ಮೊದಲ ಆದ್ಯತೆಯಾಗಿದೆ ಎಂದರು.

ಇದೇ ವೇಳೆ ಪ್ರಸಕ್ತ ವರ್ಷ ಎಂ.ಬಿ.ಎ ಮತ್ತು ಎಂ.ಕಾಂ ಪದವಿಗಳನ್ನು ಪೂರೈಸುತ್ತಿರುವ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಪ್ರದಾನ ಮಾಡಲಾಯಿತು. ಕ್ರೀಡಾ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎಸ್.ಗೌರಪ್ಪ, ಡೀನ್‌ ಡಾ.ಎಂ.ಶ್ರೀನಿವಾಸರೆಡ್ಡಿ, ಮಾನವ ಸಂಪನ್ಮೂಲ ನಿರ್ದೇಶಕ ಪ್ರೊ.ಬಾಬುರೆಡ್ಡಿ, ಲಯನ್ಸ್‌ ಕ್ಲಬ್‌ ಅಧ್ಯಕ್ಷ ಪ್ರೊ.ಕೆ.ಆರ್.ರವಿಕಿರಣ್, ಸಂಜೆ ಕಾಲೇಜು ಪ್ರಾಂಶುಪಾಲ ಡಾ.ಎಂ.ಚಿಕ್ಕಣ್ಣ, ಆರ್‌ಎಲ್‌ಜೆಐಟಿ ಪ್ರಾಂಶುಪಾಲ ಡಾ.ವಿಜಯಕಾರ್ತಿಕ್, ವಿಭಾಗ ಮುಖ್ಯಸ್ಥರಾದ ಎಸ್.ನಂದನ, ಪಿ.ಮಧುಶ್ರೀ, ಪಿ.ಚೈತ್ರ, ಸಿ.ಪಿ.ಪ್ರಕಾಶ್, ಪದ್ಮ, ಉದ್ಯೋಗಾಧಿಕಾರಿ ಬಾಬುಸಾಬಿ, ಭಾನುಶ್ರೀ ಮತ್ತಿತರರು ಉಪಸ್ಥಿತರಿದ್ದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು