ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಕರವಸೂಲಿಗಾರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ಇದೇ ನವೆಂಬರ್ 20ರಂದು ನಗರದ ಶಿಕ್ಷಕರ ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಆಯೋಜಿಸಲಾಗಿದೆ.
ಪರೀಕ್ಷೆಗೆ ಅಂತಿಮವಾಗಿ ಆಯ್ಕೆಯಾಗಿರುವ ಒಟ್ಟು 58 ಅಭ್ಯರ್ಥಿಗಳ ಮಾಹಿತಿಯನ್ನು chitradurga.nic.in ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ನಿಗದಿತ ಸಮಯಕ್ಕಿಂತ ಒಂದು ಗಂಟೆ ಮುಂಚಿತವಾಗಿ ಪರೀಕ್ಷೆ ನಡೆಯುವ ಸ್ಥಳದಲ್ಲಿ ಹಾಜರಿರಲು ಸೂಚಿಸಲಾಗಿದೆ.
ನವೆಂಬರ್ 20ರಂದು ಅರ್ಹತಾ ಅಭ್ಯರ್ಥಿಗಳ ಕ್ರಮ ಸಂಖ್ಯೆ 01 ರಿಂದ 20 ರವರೆಗೆ ಬೆಳಿಗ್ಗೆ 10 ಗಂಟೆಯಿಂದ 11:30 ಗಂಟೆಯವರೆಗೆ, ಕ್ರಮ ಸಂಖ್ಯೆ 21 ರಿಂದ 40 ರವರೆಗೆ ಬೆಳಿಗ್ಗೆ 12 ಗಂಟೆಯಿಂದ ಮಧ್ಯಾಹ್ನ 1:30 ಗಂಟೆಯವರೆಗೆ ಹಾಗೂ ಕ್ರಮ ಸಂಖ್ಯೆ 41 ರಿಂದ 58 ರವರೆಗೆ ಮಧ್ಯಾಹ್ನ 2 ಗಂಟೆಯಿಂದ ಸಂಜೆ 3:30 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ತಿಳಿಸಿದ್ದಾರೆ.




