Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಪಂಚಾಯಿತಿ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಪಂಚಾಯಿತಿ ಪ್ರತಿಭಟನೆ
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಜಿಲ್ಲಾ ಸಮಿತಿಯಿಂದ ಜಿಲ್ಲಾ ಪಂಚಾಯಿತಿ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿ ಉಪ ಕಾರ್ಯದರ್ಶಿ ಮೂಲಕ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್ ಇಲಾಖೆ ಕಾರ್ಯದರ್ಶಿಗೆ ಮನವಿ ಸಲ್ಲಿಸಲಾಯಿತು.

ಬೇಡಿಕೆಗಳ ಈಡೇರಿಕೆಗಾಗಿ ಕಳೆದ ಡಿಸೆಂಬರ್‌ನಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಧರಣಿ ಸತ್ಯಾಗ್ರಹ ನಡೆಸಿ ಸರ್ಕಾರದ ಗಮನ ಸೆಳೆಯಲಾಗಿತ್ತೆಂದು ಪ್ರತಿಭಟನಾನಿರತರು ಉಪ ಕಾರ್ಯದರ್ಶಿಗಳ ಗಮನ ಸೆಳೆದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾ ಸಮಿತಿ ಅಧ್ಯಕ್ಷ ಡಿ.ಎಂ.ಮಲಿಯಪ್ಪ ಮಾತನಾಡಿ ತಾವೆ ಒಪ್ಪಿಕೊಂಡಿರುವ ಪ್ರಕಾರ ಎಲ್ಲಾ ನೌಕರರಿಗೆ ಐದು ಸಾವಿರ ರೂ.ವೇತನ ಹೆಚ್ಚಿಸಿ ಇಲಾಖೆಯಿಂದ ಆದೇಶ ಹೊರಡಿಸಬೇಕು. ನೌಕರರು ನಿವೃತ್ತಿಯಾದರೆ, ನಿಧನ ಹೊಂದಿದರೆ ಇಡಿಗಂಟು ಆರು ಲಕ್ಷ ರೂ.ಗಳನ್ನು ಕೊಡಬೇಕು. ಸೇವಾ ಹಿರಿತನದ ಆಧಾರದಲ್ಲಿ ವೇತನ ನೀಡಬೇಕು. ಸ್ವಚ್ಚವಾಹಿನಿ ನೌಕರರ ಸಭೆ ಕರೆದು ಅವರ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು.

ಪ್ರತಿಯೊಂದು ಪಂಚಾಯಿತಿಗೆ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳನ್ನು ತುಂಬಬೇಕು. ಕಳೆದ ೧೮-೨೦ ವರ್ಷಗಳಿಂದ ಡಾಟಾ ಎಂಟ್ರಿ ಆಪರೇಟರ್‌ಗಳಾಗಿ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಅನುಮೋದನೆ ಕೊಡಬೇಕು. ೨ ನೇ ಡಾಟಾ ಎಂಟ್ರಿ ಆಪರೇಟರ್ ನೇಮಕಾತಿಯಾಗಬೇಕು. ಈಗಾಗಲೆ ಆರೋಗ್ಯದ ಕುರಿತು ಸಿಬ್ಬಂದಿಗಳ ಮಾಹಿತಿಗಾಗಿ ಫಾರ್ಮೆಟ್ ಕಳಿಸಿದ್ದೀರ. ಅದರಲ್ಲಿ ಗುತ್ತಿಗೆ, ಹೊರಗುತ್ತಿಗೆ, ಗೌರವ ಧನ, ಕಾರ್ಮಿಕರ ಮಾಹಿತಿ ನೀಡಲು ಸೂಚಿಸಿದ್ದು, ಆದರೆ ಈ ಫಾರ್ಮೆಟ್‌ನಲ್ಲಿ ಪಂಚಾಯಿತಿ ನೌಕರರೆಂದು ಮಾಹಿತಿ ಇಲ್ಲದಿರುವುದನ್ನು ಸರಿಪಡಿಸಿ ಕೂಡಲೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಯನ್ನು ಒತ್ತಾಯಿಸಿದರು.
ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ವಿ.ರಂಗನಾಥ್, ಜಯಲಕ್ಷ್ಮಿ, ಶಶಿ, ವೆಂಕಟೇಶ್, ಸೀನಪ್ಪ, ಮಾರಪ್ಪ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆಪಿಎಸ್‌ಸಿ ಅಕ್ರಮ, ರೆಸಾರ್ಟ್ ಪರೀಕ್ಷೆ ಹಗರಣ: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಸಾರ್ವಜನಿಕರ ಅಹವಾಲುಗಳ ನಿರಂತರ ಪರಿಶೀಲನೆ, ಅಧಿಕಾರಿಗಳ ಹೊಣೆಗಾರಿಕೆಯಾಗಿದೆ- ಡಾ.ಶಾಲಿನಿ ರಜನೀಶ್ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆ: ಮರು ಪರಿಶೀಲನೆ ಅವಧಿ ಸೆಪ್ಟೆಂಬರ್ 30ರ ವರೆಗೆ ವಿಸ್ತರಣೆ!ಚುನಾವಣಾ ವ್ಯವಸ್ಥೆ ಹದಗೆಟ್ಟಿದೆ, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಸಿದ್ದರಾಮಯ್ಯ ಬಾಂಬ್!ಪ್ರಧಾನಿ ವಿರುದ್ಧ ಕಿಡಿಕಾರಿದ್ದ ರುಚಿಕಾ ಸಿಂಗ್‌ಗೆ ಕಾಂಗ್ರೆಸ್ ಬೆಂಬಲ: ಭವ್ಯಾ ನರಸಿಂಹಮೂರ್ತಿಯಿಂದ "ಧೀರ ಬಾಲಕಿ" ಶ್ಲಾಘನೆ!ವಿವಾಹೇತರ ಸಂಬಂಧಕ್ಕೆ ಅಡ್ಡ ಬಂದ ಪತಿಯ ಭೀಕರ ಹತ್ಯೆ; 2 ಲಕ್ಷ ಸುಪಾರಿ ಕೊಟ್ಟಿದ್ದ ಪತ್ನಿ, ಪ್ರಿಯಕರ ಜೈಲಿಗೆ!13 ಕನ್ನಡಿಗರ ನಾಪತ್ತೆ: ಪತ್ತೆಗೆ ಕ್ರಮ, ಕೆಪಿಎಸ್‌ಸಿ ಹಗರಣದ ತನಿಖೆಯಲ್ಲಿ ಮಧ್ಯಪ್ರವೇಶಿಸಲ್ಲ – ಸಿಎಂ ಡಿಕೆಶಿ775 'ಅರಣ್ಯ ವೀಕ್ಷಕ' ಹುದ್ದೆಗಳ ಭರ್ತಿಗೆ ಪರಿಷ್ಕೃತ ಅಧಿಸೂಚನೆ: ಲಿಖಿತ ಪರೀಕ್ಷೆಯಿಲ್ಲದೆ ಭರ್ತಿ!ರೈಲ್ವೆ ಹಳಿ ದಾಟುವಾಗ ಎಕ್ಸ್‌ಪ್ರೆಸ್ ರೈಲು ಡಿಕ್ಕಿ; ಅಜ್ಜಿ ಹಾಗೂ ಇಬ್ಬರು ಮೊಮ್ಮಕ್ಕಳು ದುರಂತ ಸಾವು!ಪತಿಗೆ ಕ್ರೌರ್ಯ, ಪ್ರತ್ಯೇಕ ವಾಸ: ಕೆಳ ಕೋರ್ಟ್ ಆದೇಶ ರದ್ದುಗೊಳಿಸಿ ವಿಚ್ಛೇದನ ಮಂಜೂರು ಮಾಡಿದ ಹೈಕೋರ್ಟ್!